ನಾಡಿನ ಸಂಸ್ಕೃತಿ, ಪರಂಪರೆ ಉಳಿಸಲು ಬದ್ಧರಾಗಬೇಕು

| Published : Dec 02 2024, 01:18 AM IST

ಸಾರಾಂಶ

ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ನಾಡಿನ ನುಡಿ, ಸಂಸ್ಕೃತಿ, ಪರಂಪರೆ ಉಳಿಸಲು ಕಟಿಬದ್ಧರಾಗಿರೋಣ ಎಂದು ಶಾಸಕ ಬಿ.ಪಿ.ಹರೀಶ್ ಹರಿಹರದಲ್ಲಿ ನುಡಿದಿದ್ದಾರೆ.

- ಕರವೇ ನೇತೃತ್ವದ ಕನ್ನಡ ರಾಜ್ಯೋತ್ಸವದಲ್ಲಿ ಹರಿಹರ ಶಾಸಕ ಬಿ.ಪಿ.ಹರೀಶ್- - - ಕನ್ನಡಪ್ರಭ ವಾರ್ತೆ ಹರಿಹರ ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ನಾಡಿನ ನುಡಿ, ಸಂಸ್ಕೃತಿ, ಪರಂಪರೆ ಉಳಿಸಲು ಕಟಿಬದ್ಧರಾಗಿರೋಣ ಎಂದು ಶಾಸಕ ಬಿ.ಪಿ.ಹರೀಶ್ ನುಡಿದರು.

ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವಿಣ್ ಶೆಟ್ಟಿ ಬಣ)ವತಿಯಿಂದ ಶನಿವಾರ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕನ್ನಡ ಭಾಷೆಗೆ ಅಳಿವಿಲ್ಲ. ಈ ಭಾಷೆಗೆ ತನ್ನದೆ ಅದ ಸಂಸ್ಕøತಿಯಿದೆ. ನಮ್ಮ ಭಾಷೆಯ ಮೇಲೆ ದೌರ್ಜನ್ಯ ಸಾಧ್ಯವಿಲ್ಲ ನಾವೆಲ್ಲರೂ ನಾಡು ನುಡಿ ಜಲದ ಉಳಿವಿಗಾಗಿ ಶ್ರಮಿಸೋಣ, ಭಾಷೆಯ ಹಿರಿಮೆ, ಗರಿಮೆಯನ್ನು ಜಗತ್ತಿಗೆ ಸಾರಲು ಮುಂದಾಗೋಣ ಎಂದರು.

ಮಾಜಿ ಶಾಸಕ ಎಸ್. ರಾಮಪ್ಪ ಮಾತನಾಡಿ, ಕನ್ನಡ ನಾಡು ನುಡಿ ಸಂಸ್ಕೃತಿಯನ್ನು ಪಸರಿಸುವಲ್ಲಿ ಸರ್ಕಾರ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಕರ್ನಾಟಕ 50ರ ಸಂಭ್ರಮ ಹಿನ್ನೆಲೆ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಅಭಿಯಾನದ ನಿಮಿತ್ತ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳು ನಡೆಯುತ್ತ ಬಂದಿವೆ ಎಂದರು.

ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ಮಾತನಾಡಿ, ಕನ್ನಡ ನಾಡಿನಲ್ಲಿ ಕಳೆದ ಹಲವಾರು ದಶಕಗಳಿಂದ ಸರ್ಕಾರ ಕನ್ನಡವನ್ನೇ ಆಡಳಿತ ಭಾಷೆಯನ್ನಾಗಿ ಮಾಡುವ ಮೂಲಕ ಕನ್ನಡಾಭಿಮಾನಿಗಳ ಮೆಚ್ಚುಗೆ ಪಾತ್ರವಾಗಿದೆ. ಕನ್ನಡ ಭಾಷೆಯ ಮೇಲೆ ಯಾವುದೇ ರೀತಿಯ ದಬ್ಬಾಳಿಕೆಯನ್ನು ಯಾವ ಕನ್ನಡಿಗನೂ ಸಹಿಸಲಾರ. ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಕನ್ನಡ ಭಾಷೆ ಉಸಿರಾಗಲಿ. ರಾಜ್ಯೋತ್ಸವವನ್ನು ಅಭಿಮಾನ ಪೂರಕವಾಗಿ ಆಚರಣೆ ಮಾಡಿಕೊಂಡು ಬಂದಿರುವ ಕರ್ನಾಟಕ ರಕ್ಷಣಾ ವೇದಿಕೆಯ ಕನ್ನಡಪರ ಕಾಳಜಿ ಎಲ್ಲರೂ ಮೆಚ್ಚಬೇಕೆಂದರು.

ನಗರದ ಪಕ್ಕೀರ ಸ್ವಾಮಿ ಮಠದಿಂದ ಆರಂಭವಾದ ಮೆರವಣಿಗೆಯಲ್ಲಿ ಭುವನೇಶ್ವರಿ ದೇವಿಯ ಭಾವಚಿತ್ರದೊಂದಿಗೆ ಪ್ರಮುಖ ರಸ್ತೆಯಲ್ಲಿ ಸಂಚರಿಸಿ, ರಾಣಿ ಚನ್ನಮ್ಮ ವೃತ್ತದಲ್ಲಿ ಅಂತ್ಯಗೊಂಡಿತು. ಮೆರವಣಿಗೆಯಲ್ಲಿ ವಿಧ್ಯಾರ್ಥಿಗಳು ಹಾಗೂ ಕನ್ನಡಾಭಿಮಾನಿಗಳು ಭಾಗಿಯಾಗಿದ್ದರು.

ರಾಣಿ ಚನ್ನಮ್ಮ ವೃತ್ತದಲ್ಲಿ ಕನಾರ್ಟಕ ರಕ್ಷಣಾ ವೇದಿಕೆ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾದಕರಿಗೆ ಸನ್ಮಾನ ಹಾಗೂ ಆನ್ನ ಸಂರ್ಪಣೆ ಆಯೋಜನೆ ಮಾಡಲಾಗಿತ್ತು. ಅಧ್ಯಕ್ಷತೆಯನ್ನು ವೇದಿಕೆ ತಾಲೂಕು ಅಧ್ಯಕ್ಷ ರಮೇಶ್ ಮಾನೆ ವಹಿಸಿದ್ದರು.

ಜಿಲ್ಲಾ ಘಟಕದ ಅಧ್ಯಕ್ಷ ಜಮ್ನಳ್ಳಿ ನಾಗರಾಜ್, ನಗರ ಘಟಕ ಅಧ್ಯಕ್ಷ ಪ್ರೀತಮ್ ಬಾಬು, ನಗರಸಭೆ ಉಪಾಧ್ಯಕ್ಷ ಜಂಬಣ್ಣ, ಸದಸ್ಯ ಪಿ.ಎನ್. ವಿರೂಪಾಕ್ಷಿ, ಮುಖಂಡ ನಂದಿಗಾವಿ ಶ್ರೀನಿವಾಸ್, ಕಸಾಪ ತಾಲೂಕು ಅಧ್ಯಕ್ಷ ಡಿ.ಮಂಜುನಾಥಯ್ಯ, ಕಾರ್ಯದರ್ಶಿ ರೇವಣನಾಯ್ಕ್, ಕರವೇ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ, ಜಿಲ್ಲಾ ಯುವ ಘಟಕ ಅಧ್ಯಕ್ಷ ಸಿ.ಎನ್. ಮಂಜುನಾಥ್, ಎಂ.ಎಸ್. ಸಿದ್ದಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

- - - -01ಎಚ್‍ಆರ್‍ಆರ್ 01:

ಹರಿಹರದಲ್ಲಿ ಕರವೇ ಯಿಂದ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಮಾಜಿ ಶಾಸಕ ಎಚ್.ಎಸ್.ಶಿವಶಂಕರ್ ಉದ್ಘಾಟಿಸಿದರು. ಮಾಜಿ ಶಾಸಕ ಎಸ್.ರಾಮಪ್ಪ, ರಮೇಶ್ ಮಾನೆ ಹಾಗೂ ಇತರರಿದ್ದರು.