ಸೋಲನ್ನು ಗೆಲುವಾಗಿಸಲು ಹೆಚ್ಚಿನ ಪ್ರಯತ್ನ ಬೇಕು: ಶ್ರೀ ಈಶಪ್ರಿಯ ತೀರ್ಥರು

| Published : Oct 05 2024, 01:32 AM IST

ಸೋಲನ್ನು ಗೆಲುವಾಗಿಸಲು ಹೆಚ್ಚಿನ ಪ್ರಯತ್ನ ಬೇಕು: ಶ್ರೀ ಈಶಪ್ರಿಯ ತೀರ್ಥರು
Share this Article
  • FB
  • TW
  • Linkdin
  • Email

ಸಾರಾಂಶ

ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಉಡುಪಿ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಪೂರ್ಣಪ್ರಜ್ಞ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ಅಂತರ್ ಕಾಲೇಜು ಬಾಲಕ ಬಾಲಕಿಯರ ಹ್ಯಾಂಡ್‌ಬಾಲ್ ಪಂದ್ಯಾಟದ ಸಮಾರೋಪ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಕ್ರೀಡೆಯಲ್ಲಿ ಗೆದ್ದವರು ಗೆದ್ದೆನೆಂದು ಮೈಮರೆಯಬಾರದು, ಗೆಲುವಿನ ಮಟ್ಟ ಹೆಚ್ಚಿಸಿಕೊಳ್ಳಬೇಕು. ಸೋತವರು ಕುಗ್ಗ ಬಾರದು. ಸೋಲನ್ನು ಗೆಲುವಾಗಿಸಲು ಹೆಚ್ಚಿನ ಪ್ರಯತ್ನಪಡಬೇಕು ಎಂದು ಅದಮಾರು ಮಠದ ಕಿರಿಯ ಶ್ರೀಗಳು, ಉಡುಪಿ ಶ್ರೀ ಅದಮಾರು ಮಠ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಹೇಳಿದರು.ಅವರು ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಉಡುಪಿ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಪೂರ್ಣಪ್ರಜ್ಞ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ಅಂತರ್ ಕಾಲೇಜು ಬಾಲಕ ಬಾಲಕಿಯರ ಹ್ಯಾಂಡ್‌ಬಾಲ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಬಹುಮಾನಗಳನ್ನು ವಿತರಿಸಿ ಆಶೀರ್ವಚಿಸಿದರು.ಕಾಲೇಜಿನ ಆಡಳಿತ ಮಂಡಳಿಯ ಗೌರವ ಕೋಶಾಧಿಕಾರಿ ಸಿಎ ಟಿ.ಪ್ರಶಾಂತ್ ಹೊಳ್ಳ ವಿಜೇತರನ್ನು ಅಭಿನಂದಿಸಿದರು. ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದ ವೀಕ್ಷಕ ಜೀವನ್ ಕುಮಾರ್ ಶೆಟ್ಟಿ, ಶಾಲಾ ಶಿಕ್ಷಣ ಇಲಾಖೆ (ಪಪೂ), ಜಿಲ್ಲಾ ಕ್ರೀಡಾ ಸಂಯೋಜಕ ದಿನೇಶ್ ಕುಮಾರ್, ಜಿಲ್ಲಾ ಪಪೂ ಕಾಲೇಜು ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಸತೀಶ್ ಹೆಗ್ಡೆ ಉಪಸ್ಥಿತರಿದ್ದರು.ಕಾಲೇಜಿನ ಪ್ರಾಚಾರ್ಯೆ ಪ್ರತಿಮಾ ಬಾಳಿಗ ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ರಮಾನಂದ ರಾವ್ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಶಿಕ್ಷಣ ಇಲಾಖೆಯ ತಾಲೂಕು ಕ್ರೀಡಾ ಸಂಯೋಜಕ, ದೈಹಿಕ ಶಿಕ್ಷಣ ಉಪನ್ಯಾಸಕ ಮಂಜುನಾಥ್ ಜೋಗಿ ಅವರು ವಂದಿಸಿದರು.* ಜ್ಯೋತಿ ಕಾಲೇಜು ಪ್ರಥಮ

ಬಾಲಕರ ವಿಭಾಗದಲ್ಲಿ ಜ್ಯೋತಿ ಪದವಿಪೂರ್ವ ಕಾಲೇಜಿನ ತಂಡ ಪ್ರಥಮ ಸ್ಥಾನ, ಉಡುಪಿಯ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನ ತಂಡ ದ್ವಿತೀಯ ಸ್ಥಾನ, ಬಾಲಕಿಯರ ವಿಭಾಗದಲ್ಲಿ ಜ್ಯೋತಿ ಪದವಿಪೂರ್ವ ಕಾಲೇಜಿನ ತಂಡ ಪ್ರಥಮ ಸ್ಥಾನ ಹಾಗೂ ಉಡುಪಿ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನ ತಂಡ ದ್ವಿತೀಯ ಸ್ಥಾನ ಪಡೆಯಿತು.