ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳಗಾವಿ ಬೆಳಗಾವಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಗುಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲು ಪ್ರಯತ್ನ ಮಾಡಲಾಗುತ್ತಿದೆ. ಇದನ್ನು ನಾವು ಸಹಿಸುವುದಿಲ್ಲ ಎಂದು ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಗುಡುಗಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರು ಮತ್ತು ಪದಾಧಿಕಾರಿಗಳ ಮೇಲೆ ಗುಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸುತ್ತೇವೆ ಎಂಬ ಮಾಹಿತಿಯನ್ನು ಪೊಲೀಸ್ ಅಧಿಕಾರಿಗಳೇ ನನ್ನ ಗಮನಕ್ಕೆ ತಂದಿದ್ದಾರೆ. ಬಿಜೆಪಿ ಕಾರ್ಯಕರ್ತರ ಮೇಲೆ ಗುಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿದರೇ ಮುಂದಾಗುವ ಅನಾಹುತಗಳಿಗೆ ಪೊಲೀಸ್ ಇಲಾಖೆಯೇ ಕಾರಣವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಬೆಳಗಾವಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಗುಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲು ಪ್ರಯತ್ನ ಮಾಡಲಾಗುತ್ತಿದೆ. ಇದನ್ನು ನಾವು ಸಹಿಸುವುದಿಲ್ಲ ಎಂದು ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಗುಡುಗಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರು ಮತ್ತು ಪದಾಧಿಕಾರಿಗಳ ಮೇಲೆ ಗುಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸುತ್ತೇವೆ ಎಂಬ ಮಾಹಿತಿಯನ್ನು ಪೊಲೀಸ್ ಅಧಿಕಾರಿಗಳೇ ನನ್ನ ಗಮನಕ್ಕೆ ತಂದಿದ್ದಾರೆ. ಬಿಜೆಪಿ ಕಾರ್ಯಕರ್ತರ ಮೇಲೆ ಗುಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿದರೇ ಮುಂದಾಗುವ ಅನಾಹುತಗಳಿಗೆ ಪೊಲೀಸ್ ಇಲಾಖೆಯೇ ಕಾರಣವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ವಿಧಾನಸಭೆ, ಲೋಕಸಭೆ ಚುನಾವಣೆಗಳಲ್ಲೆವೂ ಶಾಂತಿಯುತವಾಗಿ ನಡೆದಿವೆ. ಸದ್ಯ ಬೆಳಗಾವಿ ನಗರದಲ್ಲಿ ಶಾಂತ ಪರಿಸ್ಥಿತಿಯಿದೆ. ಇಂತಹ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಗುಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸುವ ದುಸ್ಸಾಹಸಕ್ಕೆ ಪೊಲೀಸರು ಕೈ ಹಾಕಿದರೇ ಮುಂದಾಗುವ ಅನಾಹುತಕ್ಕೆ ಅವರೇ ಕಾರಣರಾಗುತ್ತಾರೆ ಎಂದರು.ಕೋಟ್....
ಆಯ್ದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಟಾರ್ಗೆಟ್ ಮಾಡುತ್ತಿದ್ದಾರೆ. ನಮ್ಮ ಕಾರ್ಯಕರ್ತರಿಗೆ ಅನ್ಯಾಯವಾದರೇ ನಾವು ಸಹಿಸಿಕೊಳ್ಳುವುದಿಲ್ಲ.-ಅಭಯ ಪಾಟೀಲ, ಬೆಳಗಾವಿ ದಕ್ಷಿಣ ಶಾಸಕ.