ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ಐವನ್‌ ಒತ್ತಾಯ

| Published : Jul 06 2025, 01:48 AM IST

ಸಾರಾಂಶ

ಬೆಂಗಳೂರು ಹೊರತುಪಡಿಸಿ ಚಾಮರಾಜನಗರ, ನಂದಿಹಿಲ್ಸ್‌, ಕಲಬುರ್ಗಿಯಲ್ಲಿ ಈಗಾಗಲೇ ಸಚಿವ ಸಂಪುಟ ಸಭೆ ನಡೆದಿದ್ದು, ಆಯಾ ಭಾಗದ ಅಭಿವೃದ್ಧಿಗೆ ಪೂರಕವಾಗಿದೆ. ಮಂಗಳೂರಿನಲ್ಲಿ ಸಭೆ ನಡೆದರೆ ಅವಿಭಜಿತ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳ ಸಮಸ್ಯೆಗಳ ಪರಿಹಾರ ಹಾಗೂ ದೂರದೃಷ್ಟಿಯ ಯೋಜನೆಗಳ ಜಾರಿಗೆ ಅನುಕೂಲವಾಗಲಿದೆ ಎಂದು ಐವನ್‌ ಡಿಸೋಜ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರು

ವಿಜಯಪುರದಲ್ಲಿ ಸಚಿವ ಸಂಪುಟ ಸಭೆ ನಡೆದ ಬಳಿಕ ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಪೂರಕವಾಗಿ ಮುಂದಿನ ಸಭೆಯನ್ನು ಮಂಗಳೂರಿನಲ್ಲಿ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಬೇಡಿಕೆ ಸಲ್ಲಿಸುವುದಾಗಿ ವಿಧಾನ ಪರಿಷತ್‌ ಸದಸ್ಯ ಐವನ್‌ ಡಿಸೋಜ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಹೊರತುಪಡಿಸಿ ಚಾಮರಾಜನಗರ, ನಂದಿಹಿಲ್ಸ್‌, ಕಲಬುರ್ಗಿಯಲ್ಲಿ ಈಗಾಗಲೇ ಸಚಿವ ಸಂಪುಟ ಸಭೆ ನಡೆದಿದ್ದು, ಆಯಾ ಭಾಗದ ಅಭಿವೃದ್ಧಿಗೆ ಪೂರಕವಾಗಿದೆ. ಮಂಗಳೂರಿನಲ್ಲಿ ಸಭೆ ನಡೆದರೆ ಅವಿಭಜಿತ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳ ಸಮಸ್ಯೆಗಳ ಪರಿಹಾರ ಹಾಗೂ ದೂರದೃಷ್ಟಿಯ ಯೋಜನೆಗಳ ಜಾರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಅಕ್ರಮಕ್ಕೆ ಅವಕಾಶ ನೀಡಿದ್ದೇಕೆ?: ಮರಳು ಮತ್ತು ಕೆಂಪು ಕಲ್ಲು ಅಕ್ರಮ ಚಟುವಟಿಕೆಗಳಿಗೆ ಜಿಲ್ಲೆಯ ಈಗಿನ ಅಧಿಕಾರಿಗಳ ಮೂಲಕ ಕಟ್ಟುನಿಟ್ಟಿನ ಕ್ರಮ ಆಗಿದೆ. ಆದರೆ ಸ್ಥಳೀಯ ಶಾಸಕರು ಒಂದು ಕಲ್ಲೂ ಸಿಗುವುದಿಲ್ಲ ಎಂಬ ಹೇಳಿಕೆ ನೀಡಿದ್ದಾರೆ. ಬಿಜೆಪಿ ಅವಧಿಯಲ್ಲಿ ಎಲ್ಲ ಕಾನೂನುಬಾಹಿರ ಆಗಲು ಅವಕಾಶ ನೀಡಿದ್ದು ಯಾಕೆ ಎಂದು ಐವನ್‌ ಡಿಸೋಜ ಪ್ರಶ್ನಿಸಿದರು.

ಮುಖಂಡರಾದ ಭಾಸ್ಕರ್‌, ನಾಗೇಂದ್ರ ಕುಮಾರ್‌, ಕೇಶವ ಮರೋಳಿ, ಸತೀಶ್‌ ಪೆಂಗಲ್‌, ಪ್ರೇಮ್‌ ಬಳ್ಳಾಲ್‌ಬಾಗ್‌, ಜೇಮ್ಸ್‌, ವಸಂತ ಶೆಟ್ಟಿ, ಮೀನಾ ಟೆಲ್ಲಿಸ್‌ ಇದ್ದರು.