ಜ. ೨೮ರಂದು ಮೈಸೂರಿನಲ್ಲಿ ರಾಜ್ಯ ಮಟ್ಟದ ಅಲೆಮಾರಿಗಳ ಸಮಾವೇಶ

| Published : Dec 12 2023, 12:45 AM IST

ಜ. ೨೮ರಂದು ಮೈಸೂರಿನಲ್ಲಿ ರಾಜ್ಯ ಮಟ್ಟದ ಅಲೆಮಾರಿಗಳ ಸಮಾವೇಶ
Share this Article
  • FB
  • TW
  • Linkdin
  • Email

ಸಾರಾಂಶ

ಸಮಾವೇಶವನ್ನು ಉದ್ಘಾಟನೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ಅವರನ್ನು ಆಹ್ವಾನಿಸಲಾಗುವುದು. ಸಂಸದ ಪ್ರತಾಪ ಸಿಂಹ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ವಿಜಯೇಂದ್ರ ಹಾಗೂ ಇತರೆ ಗಣ್ಯರನ್ನು ಆಹ್ವಾನಿಸಲು ತೀರ್ಮಾನಿಸಲಾಗಿದೆ. ಕಾರ್ಯಕ್ರಮದಲ್ಲಿ ಅಲೆಮಾರಿ ಕಲಾವಿದರು ತಮ್ಮ ಕಲೆಗಳ ಪ್ರದರ್ಶನ ನೀಡಲಿದ್ದಾರೆ. ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸೇರಿದಂತೆ ಅಲೆಮಾರಿ ಸಾಧಕರನ್ನು ಸನ್ಮಾನಿಸಲಾಗುವುದು. ಸಮಾವೇಶದಲ್ಲಿ ೧೫೦೦ಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ

ಕನ್ನಡಪ್ರಭ ವಾರ್ತೆ ಹೊಸಪೇಟೆ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜ. ೨೮ರಂದು ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ರಾಜ್ಯ ಮಟ್ಟದ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಅಲೆಮಾರಿ, ಅರೆ ಅಲೆಮಾರಿ ಜನಾಂಗಗಳ ಒಕ್ಕೂಟದ ಗೌರವಾಧ್ಯಕ್ಷ ಕೆ. ರವೀಂದ್ರ ಶೆಟ್ಟಿ ತಿಳಿಸಿದರು.

ಸೋಮವಾರ ಇಲ್ಲಿ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಕುಂದುಕೊರತೆ ಸಭೆ ನಡೆಸಿ, ಮಾತನಾಡಿದ ಅವರು, ಸಮಾವೇಶವನ್ನು ಉದ್ಘಾಟನೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ಅವರನ್ನು ಆಹ್ವಾನಿಸಲಾಗುವುದು. ಸಂಸದ ಪ್ರತಾಪ ಸಿಂಹ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ವಿಜಯೇಂದ್ರ ಹಾಗೂ ಇತರೆ ಗಣ್ಯರನ್ನು ಆಹ್ವಾನಿಸಲು ತೀರ್ಮಾನಿಸಲಾಗಿದೆ. ಕಾರ್ಯಕ್ರಮದಲ್ಲಿ ಅಲೆಮಾರಿ ಕಲಾವಿದರು ತಮ್ಮ ಕಲೆಗಳ ಪ್ರದರ್ಶನ ನೀಡಲಿದ್ದಾರೆ. ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸೇರಿದಂತೆ ಅಲೆಮಾರಿ ಸಾಧಕರನ್ನು ಸನ್ಮಾನಿಸಲಾಗುವುದು. ಸಮಾವೇಶದಲ್ಲಿ ೧೫೦೦ಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ ಎಂದರು.

ಆರ್ಥಿಕ, ರಾಜಕೀಯ ಹಾಗೂ ಶೈಕ್ಷಣಿಕವಾಗಿ ಅಲೆಮಾರಿ ಜನರು ಹಿಂದುಳಿದ್ದಾರೆ. ಟೆಂಟ್, ಡೇರೆ ಹಾಗೂ ಗುಡಿಸಲಿಗಳಲ್ಲಿ ಶೋಚನೀಯ ಬದುಕು ಸಾಗಿಸುತ್ತಿದ್ದಾರೆ. ಸ್ವಾಭಿಮಾನಿ ಬದುಕು ಸಾಗಿಸಲು ಅವರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

ಅಲೆಮಾರಿಗಳ ಬೇಡಿಕೆ ಈಡೇರಿಕೆಗೆ ಸರ್ಕಾರ ಗಮನ ಹರಿಸಬೇಕಿದೆ. ವಸತಿರಹಿತ ಅಲೆಮಾರಿ ಜನರಿಗೆ ವಸತಿ ಸೌಲಭ್ಯ ಕಲ್ಪಿಸಬೇಕು. ನಿವೇಶನ ಸೌಲಭ್ಯವನ್ನು ಒದಗಿಸಬೇಕು. ಸರ್ಕಾರಿ ಜಾಗದಲ್ಲಿ ೧೦ ವರ್ಷಗಳಿಂದ ವಾಸವಾಗಿರುವ ಅಲೆಮಾರಿಗಳಿಗೆ ಹಕ್ಕುಪತ್ರ ವಿತರಣೆ ಮಾಡಬೇಕು. ಅಲೆಮಾರಿ ಮಕ್ಕಳಿಗೆ ವಸತಿ ಶಾಲೆಯನ್ನು ನಿರ್ಮಿಸಬೇಕು ಎಂದರು.

ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಅನಂತ ಕೃಷ್ಣ ಯಾದವ್, ಪ್ರಧಾನ ಸಂಚಾಲಕ ಎಂ. ಪ್ರಕಾಶ್, ಜಂಟಿ ಕಾರ್ಯದರ್ಶಿ ರಾಜೇಶ್ವರಿ ಹಾಗೂ ಅಯ್ಯಪ್ಪ ಜೋಗಿ ಇತರರಿದ್ದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅಲೆಮಾರಿ, ಅರೆ ಅಲೆಮಾರಿ ಜನಾಂಗಗಳ ಒಕ್ಕೂಟದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.