ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಜೆ.ವೈ.ಮಂಜುನಾಥ್ ಆಯ್ಕೆ

| Published : Nov 11 2024, 11:52 PM IST

ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಜೆ.ವೈ.ಮಂಜುನಾಥ್ ಆಯ್ಕೆ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ನೂತನ ಅಧ್ಯಕ್ಷರಾಗಿ ಜೆ.ವೈ.ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದು, ತಾಲೂಕು ಖಜಾಂಚಿ ಹಾಗೂ ರಾಜ್ಯ ಪರಿಷತ್ ಸದಸ್ಯ ಸ್ಥಾನಗಳಿಗೆ ನ.16ರಂದು ಚುನಾವಣೆ ನಡೆಯಲಿದೆ.

ಕನ್ನಡಪ್ರಭ ವಾರ್ತೆ ನಾಗಮಂಗಲ

ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ನೂತನ ಅಧ್ಯಕ್ಷರಾಗಿ ಜೆ.ವೈ.ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದು, ತಾಲೂಕು ಖಜಾಂಚಿ ಹಾಗೂ ರಾಜ್ಯ ಪರಿಷತ್ ಸದಸ್ಯ ಸ್ಥಾನಗಳಿಗೆ ನ.16ರಂದು ಚುನಾವಣೆ ನಡೆಯಲಿದೆ.

ತಾಲೂಕು ಅಧ್ಯಕ್ಷ ಸ್ಥಾನಕ್ಕೆ 16 ರಂದು ಚುನಾವಣೆ ನಡೆಯಬೇಕಿತ್ತು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರೂ ಆಗಿರುವ ಜೆ.ವೈ.ಮಂಜುನಾಥ್ ಮತ್ತು ವಿಶ್ವಮಂಜುಸ್ವಾಮಿ ನಾಮಪತ್ರ ಸಲ್ಲಿಸಿದ್ದರು. ತಾಲೂಕು ಖಜಾಂಚಿ ಸ್ಥಾನಕ್ಕೆ ಕುಮಾರ್ ಮತ್ತು ಕೆ.ಶಿವಕುಮಾರ್, ರಾಜ್ಯ ಪರಿಷತ್ ಸದಸ್ಯ ಸ್ಥಾನಕ್ಕೆ ಮಧುಕುಮಾರ್ ಮತ್ತು ರವಿಕುಮಾರ್ ನಾಮಪತ್ರ ಸಲ್ಲಿಸಿದ್ದರು.

ವಿಶ್ವಮಂಜುಸ್ವಾಮಿ ನಾಮಪತ್ರ ವಾಪಸ್ ಪಡೆದ ಹಿನ್ನಲೆಯಲ್ಲಿ ತಾಲೂಕು ಅಧ್ಯಕ್ಷರಾಗಿ ಜೆ.ವೈ.ಮಂಜುನಾಥ್ ವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಶಿವರಾಜು ಘೋಷಿಸಿದ್ದಾರೆ.

ನೂತನ ಅಧ್ಯಕ್ಷ ಜೆ.ವೈ.ಮಂಜುನಾಥ್ ಅವರನ್ನು ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘದ ಸಂಸ್ಥಾಪಕ ಅಧ್ಯಕ್ಷ ಬಿ.ಎಂ.ಪ್ರಕಾಶ್, ಮಂಧುಸೂಧನ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರುದ್ರೇಶ್, ಕೆಂಪೇಗೌಡ, ಜಯಸ್ವಾಮಿ, ನಿಂಗೇಗೌಡ, ರಂಗಸ್ವಾಮಿ ಸೇರಿದಂತೆ ನೂತನವಾಗಿ ಆಯ್ಕೆಯಾಗಿರುವ ಎಲ್ಲ ಸದಸ್ಯರು ಅಭಿನಂದಿಸಿದ್ದಾರೆ.ಮಂಡ್ಯ ವಿವಿ ನೂತನ ಕುಲಪತಿಯಾಗಿ ಪ್ರೊ.ಕೆ.ಶಿವಚಿತ್ತಪ್ಪ ಅಧಿಕಾರ ಸ್ವೀಕಾರ

ಮಂಡ್ಯ:

ಮಂಡ್ಯ ವಿಶ್ವ ವಿದ್ಯಾಲಯ ನೂತನ ಕುಲಪತಿಯಾಗಿ ಪ್ರೊ.ಕೆ.ಶಿವಚಿತ್ತಪ್ಪ ಸೋಮವಾರ ಅಧಿಕಾರ ಸ್ವೀಕರಿಸಿದರು.

ಹಿಂದಿನ ಕುಲಪತಿ ಪುಟ್ಟರಾಜು ಅವರಿಂದ ತೆರವಾಗಿದ್ದ ಸ್ಥಾನಕ್ಕೆ ತಾಲೂಕಿನ ತೂಬಿನಕೆರೆ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಹಿರಿಯ ಪ್ರಾಧ್ಯಾಪಕರಾಗಿದ್ದ ಕರ್ತವ್ಯ ಸಲ್ಲಿಸುತ್ತಿದ್ದ ಶಿವಚಿತ್ತಪ್ಪ ನೂತನ ಕುಲಪತಿಗಳಾಗಿ ಅಧಿಕಾರ ಸ್ವೀಕರಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕುಲಪತಿಗಳು, ನೂತನ ಕುಲಪತಿಗಳಾಗಿ ರಾಜ್ಯಪಾಲರು ನೇಮಿಸಿ ಆದೇಶ ಹೊರಡಿಸಿದ್ದಾರೆ. ಹೀಗಾಗಿ ಅಧಿಕಾರ ಸ್ವೀಕರಿಸಿದ್ದೇನೆ. ಮಂಡ್ಯ ವಿವಿಯನ್ನು ಮತಷ್ಟು ಅಭಿವೃದ್ಧಿ ಮಾಡಲು ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಕಳೆದ 25 ವರ್ಷಗಳಿಂದ ಪ್ರಾಧ್ಯಾಪಕನಾಗಿ ಸೇವೆ ಸಲ್ಲಿಸಿರುವ ಅನುಭವ ಇದೆ. ಮಂಡ್ಯ ವಿವಿ ಅಭಿವೃದ್ಧಿಗೆ ಸಾಕಷ್ಟು ಕನಸು ಇದೆ. ಅವಕಾಶ ಸಿಕ್ಕಿದೆ. ಉಪನ್ಯಾಸಕರ ಸಮಸ್ಯೆ ಸರಿಪಡಿಸುವ ಕೆಲಸ ಮಾಡುತ್ತೇನೆ. ಮೈಸೂರು ವಿವಿ ರೀತಿಯಲ್ಲಿ ಮಂಡ್ಯ ವಿವಿ ಅಭಿವೃದ್ಧಿ ಆಗುವಂತೆ ನೋಡಿಕೊಳ್ಳಲು ಎಲ್ಲರ ಸಹಕಾರ ಬೇಕು ಎಂದು ಮನವಿ ಮಾಡಿದರು.

ಈ ವೇಳೆ ಉಪನ್ಯಾಸಕರಾದ ಬಿ.ಎಸ್‌.ನಾಗರಾಜು, ಭಾರತೀ, ಚಂದನ, ಡಾ.ಮಲ್ಲೇಶ್, ಡಾ.ಕವಿತಾ ಅವರು ಅಭಿನಂದಿಸಿದರು.