ಸಾರಾಂಶ
ಹಾಸನ ನಗರದಲ್ಲಿ ಮೊಟ್ಟ ಮೊದಲ ಬಾರಿಗೆ ಕರಕುಶಲ ಮತ್ತು ಗೃಹೋಪಯೋಗಿ ವಸ್ತುಗಳ ಮಾರಾಟ ಮೇಳ ಹಾಗೂ ಹಲಸು ಮತ್ತು ಮಾವು ಮೇಳವನ್ನು ಹಮ್ಮಿಕೊಳ್ಳಲಾಗಿದ್ದು, ಗುರುವಾರ ಸಂಜೆ ೪ ಗಂಟೆಗೆ ಉದ್ಘಾಟನೆ ಆಗಲಿದ್ದು, ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್, ಮಹಾಪೌರರಾದ ಎಂ. ಚಂದ್ರೇಗೌಡ, ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡುವರು. ಈ ವಸ್ತು ಪ್ರದರ್ಶನದಲ್ಲಿ ಹಲವು ರೀತಿಯ ಮಾವು, ಹಲಸಿನಹಣ್ಣು ಹಾಗೂ ಕರಕುಶಲ ಮತ್ತು ಗೃಹೋಪಯೋಗಿ ವಸ್ತುಗಳು ಮಾರುಕಟ್ಟೆಗಿಂತ ಕಡಿಮೆ ದರದಲ್ಲಿ ದೊರೆಯುತ್ತವೆ.
ಕನ್ನಡಪ್ರಭ ವಾರ್ತೆ ಹಾಸನ
ನಗರದ ಶ್ರೀ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಶ್ರೀ ಬಾಲಾಜಿ ಇವೆಂಟ್ಸ್ ಸಂಯುಕ್ತಾಶ್ರಯದಲ್ಲಿ ಕರಕುಶಲ ಮತ್ತು ಗೃಹೋಪಯೋಗಿ ವಸ್ತುಗಳ ಮಾರಾಟ ಮೇಳ ಹಾಗೂ ಹಲಸು ಮತ್ತು ಮಾವು ಮೇಳವನ್ನು ಜುಲೈ ೩ರಿಂದ ಐದು ದಿನಗಳ ಕಾಲ ಏರ್ಪಡಿಸಲಾಗಿದೆ ಎಂದು ಇವೆಂಟ್ಸ್ ಮ್ಯಾನೇಜರ್ ನವೀನ್ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿ, ಹಾಸನ ನಗರದಲ್ಲಿ ಮೊಟ್ಟ ಮೊದಲ ಬಾರಿಗೆ ಕರಕುಶಲ ಮತ್ತು ಗೃಹೋಪಯೋಗಿ ವಸ್ತುಗಳ ಮಾರಾಟ ಮೇಳ ಹಾಗೂ ಹಲಸು ಮತ್ತು ಮಾವು ಮೇಳವನ್ನು ಹಮ್ಮಿಕೊಳ್ಳಲಾಗಿದ್ದು, ಗುರುವಾರ ಸಂಜೆ ೪ ಗಂಟೆಗೆ ಉದ್ಘಾಟನೆ ಆಗಲಿದ್ದು, ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್, ಮಹಾಪೌರರಾದ ಎಂ. ಚಂದ್ರೇಗೌಡ, ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡುವರು. ಈ ವಸ್ತು ಪ್ರದರ್ಶನದಲ್ಲಿ ಹಲವು ರೀತಿಯ ಮಾವು, ಹಲಸಿನಹಣ್ಣು ಹಾಗೂ ಕರಕುಶಲ ಮತ್ತು ಗೃಹೋಪಯೋಗಿ ವಸ್ತುಗಳು ಮಾರುಕಟ್ಟೆಗಿಂತ ಕಡಿಮೆ ದರದಲ್ಲಿ ದೊರೆಯುತ್ತವೆ ಹಾಗೂ ಅನೇಕ ಬಗೆಯ ತಿನಿಸುಗಳು ಸಹ ಲಭ್ಯವಾಗುತ್ತವೆ. ವಿವಿಧ ಜಾತಿಯ ಗಿಡಗಳ ಮಾರಾಟ ಮತ್ತು ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಮುಖ್ಯವಾಗಿ ಹಲಸಿನ ಜಿಲೇಬಿಯೂ ಕೂಡ ಇಲ್ಲಿ ದೊರೆಯುತ್ತದೆ. ಮಕ್ಕಳಿಗಾಗಿ ವಿವಿಧ ರೀತಿಯ ಆಟೋಟಗಳನ್ನು ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಹೆತ್ತೂರು ನಾಗರಾಜ್, ಮಂಜು ಬನವಾಸೆ, ಅಭಿಷೇಕ್, ಪ್ರೇಮ್ ಹಾಗೂ ಇತರರು ಇದ್ದರು.