ಮಾಜಿ ಸಚಿವ ರಾಜಶೇಖರ ಪಾಟೀಲ್‌ಗೆ ಜಗದ್ಗುರು ಪಂಚಾಚಾರ್ಯ ರಾಷ್ಟ್ರೀಯ ಪುರಸ್ಕಾರ

| Published : Sep 23 2024, 01:18 AM IST

ಮಾಜಿ ಸಚಿವ ರಾಜಶೇಖರ ಪಾಟೀಲ್‌ಗೆ ಜಗದ್ಗುರು ಪಂಚಾಚಾರ್ಯ ರಾಷ್ಟ್ರೀಯ ಪುರಸ್ಕಾರ
Share this Article
  • FB
  • TW
  • Linkdin
  • Email

ಸಾರಾಂಶ

ಬೆಮಳಖೇಡಾ-ಗೋರಟಾ ಹಿರೇಮಠದ ಪೀಠಾಧಿಪತಿಗಳಾದ ಡಾ. ರಾಜಶೇಖರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಗೌರವ

ಕನ್ನಡಪ್ರಭ ವಾರ್ತೆ ಬೀದರ್‌

ಶ್ರಾವಣ ಶಿವ ದರ್ಶನ ಸಂಚಾರ, ವೀರಶೈವ ಲಿಂಗಾಯತ ಧರ್ಮಗ್ರಂಥ ಸಿದ್ಧಾಂತ ಶಿಖಾಮಣಿ ಅಭಿಯಾನ ಸಮಾರೋಪ ಹಾಗೂ ಜಗದ್ಗುರು ಪಂಚಾಚಾರ್ಯ ರಾಷ್ಟ್ರೀಯ ಪುರಸ್ಕಾರ ಪ್ರದಾನ ಸಮಾರಂಭ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ರಾಜಶೇಖರ ಪಾಟೀಲ್‌ ಅವರಿಗೆ ಜಗದ್ಗುರು ಪಂಚಾಚಾರ್ಯ ರಾಷ್ಟ್ರೀಯ ಪುರಸ್ಕಾರ ನೀಡಿ ಗೌರವಿಸಲಾಯಿತು.

ಭಾನುವಾರ ಇಲ್ಲಿನ ಬೆಲ್ದಾಳೆ ಕನ್ವೆಶನ್‌ ಸಭಾಂಗಣದಲ್ಲಿ ಶ್ರಾವಣ ಮಾಸದ ಅಂಗವಾಗಿ ಬೆಮಳಖೇಡಾ-ಗೋರಟಾ ಹಿರೇಮಠದ ಪೀಠಾಧಿಪತಿಗಳಾದ ಡಾ. ರಾಜಶೇಖರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಗೌರವ ಸಲ್ಲಿಸಲಾಯಿತು. ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಮಂಡಳಿಯ ಸದಸ್ಯರಾಗಿಯೂ ಮಾಜಿ ಸಚಿವ ರಾಜಶೇಖರ ಪಾಟೀಲ್‌ ಇತ್ತೀಚೆಗೆ ನೇಮಕಗೊಂಡಿದ್ದಾರೆ.

ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಜಗದ್ಗುರು ಪಂಡಿತಾರಾಧ್ಯ ಪೀಠ ಶ್ರೀಶೈಲ ಮಹಾಕ್ಷೇತ್ರ, ಗುರುಪಾದ ಶಿವಾಚಾರ್ಯರು ಹಿರೇಮಠ ಸಂಸ್ಥಾನ, ಬೇಮಳಖೇಡ, ವೀರಭದ್ರ ಶಿವಾಚಾರ್ಯರು ಸಾವಿರ ದೇವರ ಸಂಸ್ಥಾನ ಮಠ, ಬಿಚ್ಚಾಲಿ, ಕಡಗಂಚಿ ಗುರುಲಿಂಗ ಶಿವಾಚಾರ್ಯರು ಬೃಹನ್ಮಠ ಚಿಟಗುಪ್ಪ-ಚಾಂಗಲೇರ, ಶಿವಾನಂದ ಶಿವಾಚಾರ್ಯರು ಹಿರೇಮಠ ತಮಲೂರು, ಕರುಣಾದೇವಿ ಮಾತಾ ಶ್ರೀ ಅಕ್ಕಮಹಾದೇವಿ ಚೈತನ್ಯಪೀಠ,ಶ್ರೀಶೈಲಂ, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಪೌರಾಡಳಿತ ಸಚಿವ ರಹೀಮ್‌ ಖಾನ್‌, ಖ್ಯಾತ ಚಲನಚಿತ್ರ ನಟ ನಿರ್ಮಾಪಕ ಹಾಗೂ ನಿರ್ದೇಶಕರಾದ ಡಾ. ಎಸ್‌. ನಾರಾಯಣ, ವೀರಶೈವ ಲಿಂಗಾಯತ ಮುಖಂಡರಾದ ರಾಜೇಶ್ವರ ನಿಟ್ಟೂರೆ ಉದಗೀರ, ವಿದೇಶಿ ವಾಣಿಜ್ಯೋದ್ಯಮಿದಾರರಾದ ಜಿ.ಟಿ. ಸುರೇಶಕುಮಾರ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.