ಸಾರಾಂಶ
ಮೇಲಣಗವಿ ಮಠದಲ್ಲಿ ಮಾ.೨೪ರಂದು ಜಗದ್ಗುರು ರೇಣುಕಾಚಾರ್ಯ ಜಯಂತಿ ಹಾಗೂ ಶಿವಗಂಗಾ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಮೇಲಣಗವಿ ಮಠದ ಡಾ.ಶ್ರೀ ಮಲಯ ಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ಕನ್ನಡಪ್ರಭ ವಾರ್ತೆ ದಾಬಸ್‌ಪೇಟೆ
ಮೇಲಣಗವಿ ಮಠದಲ್ಲಿ ಮಾ.೨೪ರಂದು ಜಗದ್ಗುರು ರೇಣುಕಾಚಾರ್ಯ ಜಯಂತಿ ಹಾಗೂ ಶಿವಗಂಗಾ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಮೇಲಣಗವಿ ಮಠದ ಡಾ.ಶ್ರೀ ಮಲಯ ಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ಕಾರ್ಯಕ್ರಮದ ಸಾನ್ನಿಧ್ಯವನ್ನು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿವೃಷಭ ದೇಶೀಕೇಂದ್ರ ಸ್ವಾಮೀಜಿ ವಹಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಲಿದ್ದು, ಸಂಸದ ಬಚ್ಚೇಗೌಡ ದಿನದರ್ಶಿಕೆ ಬಿಡುಗಡೆ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ಎನ್.ಶ್ರೀನಿವಾಸ್ ವಹಿಸಲಿದ್ದು, ಅಭಾವಿಮ ಹಾಗೂ ಸಚಿವ ಈಶ್ವರ್ ಖಂಡ್ರೆರವರು ಜಗದ್ಗುರು ರೇಣುಕಾಚಾರ್ಯ ಭಾವಚಿತ್ರ ಅನಾವರಣ ಮಾಡಲಿದ್ದಾರೆ.
ವಿಚಾರ-ಆಚಾರ-ವಿಹಾರ ಗ್ರಂಥವನ್ನು ಮುಜುರಾಯಿ ಸಚಿವ ರಾಮಲಿಂಗರೆಡ್ಡಿ ಬಿಡುಗಡೆ ಮಾಡಲಿದ್ದು, ಸಚಿವ ಶಿವರಾಜ ತಂಗಡಗಿ ಅವರು ವಿದ್ಯಾರ್ಥಿ ನಿಲಯ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಸದಾಶಿವ ನುಡಿಯನ್ನು ಅಭಾವಿಪ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಅರುಣಾದೇವಿ ಪ್ರಸ್ತುತ ಪಡಿಸುವರು. ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಬಿ.ಎಸ್.ಪರಮಶಿಯ್ಯ ದಾನಿಗಳ ಫಲಕವನ್ನು ಉದ್ಘಾಟಿಸಲಿದ್ದಾರೆ. ಪ್ರಶಸ್ತಿ ಪುರಸ್ಕೃತರಿಗೆ ಅಭಾವಿಪ ರಾಜ್ಯ ಉಪಾಧ್ಯಕ್ಷ ಸಚ್ಚಿದಾನಂದಮೂರ್ತಿ ಅಭಿನಂದನೆ ಸಲ್ಲಿಸುವರು. ವಿವಿಧ ಮಠಾಧೀಶರು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು. ಶ್ರೀಮಠದಿಂದ ವತಿಯಿಂದ ಪ್ರತಿವರ್ಷ ನೀಡುವ ಶಿವಗಂಗಾ ಶ್ರೀ ಪ್ರಶಸ್ತಿಯನ್ನು ಅಖಿಲ ಭಾರತ ವೀರಶೈವ ಮಹಾಸಭಾದ ಕೇಂದ್ರ ಸಮಿತಿಯ ಸದಸ್ಯ ಎನ್.ಎಸ್.ನಟರಾಜು ಅವರಿಗೆ ಪ್ರದಾನ ಮಾಡಲಾಗುವುದು ಎಂದರು.ಮುಖ್ಯ ಅತಿಥಿಗಳಾಗಿ ಶಾಸಕರಾದ ಪುಟ್ಟಸ್ವಾಮಿ ಗೌಡ್ರು, ಎಂಎಲ್ ಸಿ ಪುಟ್ಟಣ್ಣ, ವಿಜಯಾನಂದ ಕಾಶಪ್ಪನವರ್, ಮಾಜಿ ಶಾಸಕರಾದ ಡಾ.ಕೆ.ಶ್ರೀನಿವಾಸಮೂರ್ತಿ, ಎಂ.ವಿ.ನಾಗರಾಜು ಇತರರು ಭಾಗವಹಿಸಲಿದ್ದಾರೆ ಎಂದರು. ಕಾರ್ಯಕ್ರಮಕ್ಕೆ ಬರುವ ಭಕ್ತರಿಗೆ ಉಚಿತ ಆರೋಗ್ಯ ಶಿಬಿರ, ನೇತ್ರ ಶಿಬಿರ ಹಾಗೂ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಗ್ರಾಪಂ ಮಾಜಿ ಅಧ್ಯಕ್ಷರಾದ ಹೊನ್ನಗಂಗಶೆಟ್ಟಿ, ಉಮಾಶಂಕರ್, ಮಠದ ಭಕ್ತರಾದ ಶಿವಗಂಗಯ್ಯ, ಮುಪ್ಪಿನಸ್ವಾಮಿ, ಉಮೇಶ್, ರೇಣುಕಪ್ರಸಾದ್, ಪ್ರಸನ್ನಪ್ಪ, ವಕೀಲ ಮಹೇಶ್, ರುದ್ರೇಶ್, ನಾಗರಾಜು, ದಿನೇಶ್ ಶಿಕ್ಷಕರು ಉಪಸ್ಥಿತರಿದ್ದರು.