ಸಾರಾಂಶ
ತರೀಕೆರೆ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಹಸಿರು ಕ್ರಾಂತಿ ಹರಿಕಾರರೆಂದೇ ಪ್ರಸಿದ್ಧರಾದವರು. ಎಂದು ತಹಸೀಲ್ದಾರ್ ವಿಶ್ವಜೀತ್ ಮೇಹತಾ ಹೇಳಿದರು.
ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಮ್ ಅವರ 118ನೇ ಜನ್ಮ ದಿನಾಚರಣೆ
ಕನ್ನಡಪ್ರಭ ವಾರ್ತೆ, ತರೀಕೆರೆಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಹಸಿರು ಕ್ರಾಂತಿ ಹರಿಕಾರರೆಂದೇ ಪ್ರಸಿದ್ಧರಾದವರು. ಎಂದು ತಹಸೀಲ್ದಾರ್ ವಿಶ್ವಜೀತ್ ಮೇಹತಾ ಹೇಳಿದರು.
ತಾಲೂಕು ಆಡಳಿತದಿಂದ ನಡೆದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಮ್ ಅವರ 118ನೇ ಜನ್ಮ ದಿನಾಚರಣೆಯಲ್ಲಿ ಅವರು ಭಾವಚತ್ರಕ್ಕೆ ಪುಷ್ಪಾ ನಮನ ಸಲ್ಲಿಸಿ ಮಾತನಾಡಿ ಎಲ್ಲರನ್ನು ಅವರು ಸಮಾನವಾಗಿ ನೋಡುತ್ತಿದ್ದರು ಎಂದು ತಿಳಿಸಿದರು.ಉಪ ವಿಭಾಗೀಯ ಮಟ್ಟದ ಪರಿಶಿಷ್ಟ ಜಾತಿ, ಪಂಗಡ ದೌರ್ಜನ್ಯ ನಿಯಂತ್ರಣ ಉಸ್ತುವಾರಿ ಸಮಿತಿ ಸದಸ್ಯ ಎಸ್.ಎನ್. ಸಿದ್ರಾಮಪ್ಪ ಮಾತನಾಡಿ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಮ್ 30 ವರ್ಷಗಳ ಕಾಲ ಕೇಂದ್ರ ಸರ್ಕಾರ ದಲ್ಲಿ ಸಚಿವರಾಗಿ ಕರ್ತವ್ಯ ನಿರ್ವಹಿಸಿ ದೇಶದ ಅಭಿವೃದ್ಧಿಗೆ ಸೇವೆ ಸಲ್ಲಿಸಿದ್ದಾರೆ. ಕೃಷಿ ಕ್ಷೇತ್ರದಲ್ಲಿ ಸಾಕಷ್ಠು ಬದಲಾವಣೆ ತಂದವರು. ಡಾ.ಬಾಬು ಜಗಜೀವನ್ ರಾಮ್ ಅವರ ಆದರ್ಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.ತಾಲೂಕು ಅರೋಗ್ಯಾಧಿಕಾರಿ ಡಾ.ಬಿ.ಜಿ.ಚಂದ್ರಶೇಖರ್, ಹಿರಿಯ ಕೃಷಿ ಸಹಾಯಕ ನಿರ್ದೇಶಕ ಲೋಕೇಶ್ವರಪ್ಪ, ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಕೆ.ಯತಿರಾಜ್, ಶಿರಸ್ತೆದಾರ್ ಕೃಷ್ಣಮೂರ್ತಿ ವಿವಿಧ ಇಲಾಖೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.5ಕೆಟಿಆರ್.ಕೆ.6ಃ ತರೀಕೆರೆಯಲ್ಲಿ ತಾಲೂಕು ಅಡಳಿತದಿಂದ ನಡೆದ ಮಾಜಿ ಉುಪ ಪ್ರಧಾನಿ ಡಾ,.ಬಾಬು ಜಗಜೀವನರಾಮ್ ಅವರ 118ನೇ ಜನ್ಮ ದಿನಾಚರಣೆಯಲ್ಲಿ ತಹಸೀಲ್ದಾರ್ ವಿಶ್ವಜೀತ್ ಮೇಹತಾ, ಉಪ ವಿಭಾಗೀಯ ಮಟ್ಟದ ಪರಿಶಿಷ್ಟ ಜಾತಿ ಪಂಗಡ ದೌರ್ಜನ್ಯ ನಿಯಂತ್ರಣ ಉಸ್ತುವಾರಿ ಸಮಿತಿ ಸದಸ್ಯ ಎಸ್.ಎನ್.ಸಿದ್ರಾಮಪ್ಪ ಮತ್ತಿತರರು ಇದ್ದರು.