ಕನ್ನಡಪ್ರಭ ವಾರ್ತೆ ಖಾನಾಪುರ

ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ವಿವಿಧ ಸರಕಾರಿ ಕಚೇರಿಗಳಲ್ಲಿ ಭಾನುವಾರ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಪ್ರಧಾನಿ ಬಾಬು ಜಗಜೀವನರಾಮ್ ಅವರ ಜಯಂತಿಯನ್ನು ಆಚರಿಸಲಾಯಿತು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ತಾಲೂಕು ಆಡಳಿತದ ವತಿಯಿಂದ ಆಯೋಜಿಸಲಾಗಿದ್ದ ಜಗಜೀವನರಾಮ್ ಭಾವಚಿತ್ರದ ಮೆರವಣಿಗೆಗೆ ಶಾಸಕ ವಿಠ್ಠಲ ಹಲಗೇಕರ ಚಾಲನೆ ನೀಡಿದರು.

ಬಳಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ದೇಶ ಕಂಡ ಅಪ್ರತಿಮ ನೇತಾರ ಜಗಜೀವನರಾಮ್ ಅವರ ಜೀವನವನ್ನು ನಾವೆಲ್ಲರೂ ಆದರ್ಶವನ್ನಾಗಿಟ್ಟುಕೊಂಡು ಅವರು ಹಾಕಿಕೊಟ್ಟ ಮಾರ್ಗದಲ್ಲಿ ಮುನ್ನಡೆಯಬೇಕು ಎಂದು ಕರೆ ನೀಡಿದರು.

ಬಸವೇಶ್ವರ ವೃತ್ತದಿಂದ ಆರಂಭಗೊಂಡ ಮೆರವಣಿಗೆ ಶಿವಸ್ಮಾರಕ ವೃತ್ತದ ಮೂಲಕ ಸಾಗಿ ತಾಲೂಕು ಪಂಚಾಯತಿ ಕಚೇರಿಯಲ್ಲಿ ಮೆರವಣಿಗೆ ಸಂಪನ್ನಗೊಂಡಿತು. ತಾಲೂಕು ಪಂಚಾಯತಿ ಸಭಾಗೃಹದಲ್ಲಿ ಏರ್ಪಡಿಸಿದ್ದ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಹಲಗೇಕರ, ತಹಸೀಲ್ದಾರ್ ದುಂಡಪ್ಪ ಕೋಮಾರ, ತಾಪಂ ಇಒ ರಮೇಶ ಮೇತ್ರಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸೂರ್ಯಕಾಂತ ಕುಲಕರ್ಣಿ, ಪೊಲೀಸ್ ಇನ್ಸಪೆಕ್ಟರ್ ಲಾಲಸಾಬ ಗೌಂಡಿ ಹಾಗೂ ಇತರರು ಜಗಜೀವನರಾಮ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವಿಸಿದರು.

ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಡಾ.ಗೀತಾಂಜಲಿ ಕುರುಡಗಿ ಬಾಬು ಜಗಜೀವನರಾಮ್ ಜೀವನ-ಸಾಧನೆ ಕುರಿತು ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು, ಅಧಿಕಾರಿಗಳು, ಸಿಬ್ಬಂದಿ, ನಾಗರಿಕರು ಇದ್ದರು.


ಪಟ್ಟಣದ ಪಟ್ಟಣ ಪಂಚಾಯತಿ ಕಾರ್ಯಾಲಯದಲ್ಲಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಸಂತೋಷ ಕುರಬೆಟ್ ಜಗಜೀವನರಾಮ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ರಾಜೇಶ್ವರಿ ವೇರ್ಣೆಕರ, ಶೋಭಾ ಪತ್ತಾರ, ರಾಜೇಶ ಜಾಂಬೋಟಿ, ಪ್ರೇಮಾನಂದ ನಾಯ್ಕ ಸೇರಿದಂತೆ ಪಟ್ಟಣ ಪಂಚಾಯತ ಸಿಬ್ಬಂದಿ ಉಪಸ್ಥಿತರಿದ್ದರು. ತಾಲೂಕಿನ ನಾಗರಗಾಳಿ ಗ್ರಾಪಂ ಕಾಯಾಲಯದಲ್ಲಿ ಗ್ರಾಪಂ ಪಿಡಿಒ ಬಾಲರಾಜ್ ಭಜಂತ್ರಿ ಜಗಜೀವನರಾಮ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಗಜೀವನರಾಮ್ ಜಯಂತಿಯನ್ನು ಸಂಭ್ರಮದಿಂದ ಆಚರಿಸಿದರು. ಗ್ರಾಪಂ ಸಿಬ್ಬಂದಿ, ಗ್ರಾಮಸ್ಥರು ಉಪಸ್ಥಿತರಿದ್ದರು. ಶಿಂಧೋಳಿ ಗ್ರಾಮದ ಗ್ರಾಪಂ ಕಚೇರಿಯಲ್ಲಿ ಗ್ರಾಪಂ ಪಿಡಿಒ ಜ್ಯೋತಿಬಾ ಕಾಮಕರ ಜಗಜೀವನರಾಮ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಗ್ರಾಪಂ ಸಿಬ್ಬಂದಿ, ಗ್ರಾಮಸ್ಥರು ಉಪಸ್ಥಿತರಿದ್ದರು. ತಾಲೂಕಿನ ಕೊಡಚವಾಡ ಗ್ರಾಮ ಪಂಚಾಯತಿ ಕಾರ‌್ಯಾಲಯದಲ್ಲಿ ಗ್ರಾಪಂ ಪಿಡಿಒ ಲೀಲಾವತಿ ಕರಲಿಂಗನವರ ಹಾಗೂ ಸಿಬ್ಬಂದಿ ಜಗಜೀವನರಾಮ್ ಜಯಂತಿಯನ್ನು ಆಚರಿಸಿದರು.

ಪಟ್ಟಣದ ತಾಪಂ ಕಚೇರಿಯಲ್ಲಿ ತಾಪಂ ಇಒ ರಮೇಶ ಮೇತ್ರಿ ಜಗಜೀವನರಾಮ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರ ಜಯಂತಿಯನ್ನು ಆಚರಿಸಿದರು. ತಾಪಂ ಸಿಬ್ಬಂದಿ ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಕಚೇರಿಯಲ್ಲಿ ಇಲಾಖೆಯ ಸಹಾಯಕ ನಿರ್ದೇಶಕ ವಿ.ಎಂ ನಾಗನೂರ ಜಗಜೀವನರಾಮ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಇಲಾಖೆಯ ಸಿಬ್ಬಂದಿ, ಸಾರ್ವಜನಿಕರು ಉಪಸ್ಥಿತರಿದ್ದರು. ಬಿಇಒ ಕಚೇರಿಯಲ್ಲಿ ಪತ್ರಾಂಕಿತ ವ್ಯವಸ್ಥಾಪಕ ಪ್ರಕಾಶ ಹೊಸಮನಿ ಹಾಗೂ ಇತರರು ಜಗಜೀವನರಾಮ್ ಜಯಂತಿಯನ್ನು ಆಚರಿಸಿದರು