ಸಾರಾಂಶ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಏ.5ರಂದು ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ ಹಾಗೂ ಭಾರತದ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಂ ಅವರ 118ನೇ ಜನ್ಮ ದಿನಾಚರಣೆಯನ್ನು ಪಾಲಿಕೆಯ ಆವರಣದ ಶ್ರೀಮತಿ ರಾಧಮ್ಮ ಚನ್ನಗಿರಿ ರಂಗಪ್ಪ ಸ್ಮಾರಕ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.
ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಏ.5ರಂದು ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ ಹಾಗೂ ಭಾರತದ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಂ ಅವರ 118ನೇ ಜನ್ಮ ದಿನಾಚರಣೆಯನ್ನು ಪಾಲಿಕೆಯ ಆವರಣದ ಶ್ರೀಮತಿ ರಾಧಮ್ಮ ಚನ್ನಗಿರಿ ರಂಗಪ್ಪ ಸ್ಮಾರಕ ರಂಗಮಂದಿರದಲ್ಲಿ ಆಯೋಜಿಸಲಾಗಿದೆ. ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮವನ್ನು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಉದ್ಘಾಟಿಸುವರು. ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು. ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಉಪಸ್ಥಿತರಿರುವರು.
ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಚನ್ನಗಿರಿ ಶಾಸಕ ಬಸವರಾಜು ವಿ. ಶಿವಗಂಗಾ, ಹರಿಹರ ಶಾಸಕ ಬಿ.ಪಿ. ಹರೀಶ್, ವಿಧಾನ ಪರಿಷತ್ತು ಸದಸ್ಯರಾದ ಎಸ್.ಎಲ್. ಭೋಜೇಗೌಡ, ಚಿದಾನಂದ ಎಂ. ಗೌಡ, ಡಿ.ಎಸ್. ಅರುಣ್, ಕೆ.ಎಸ್. ನವೀನ್, ಕೆ.ಅಬ್ದುಲ್ ಜಬ್ಬಾರ್, ಡಾ.ಧನಂಜಯ್ ಸರ್ಜಿ, ಡಿ.ಟಿ. ಶ್ರೀನಿವಾಸ್, ಬ್ರಾಹ್ಮಣ ಅಭಿವೃದ್ಧಿ ನಿಗಮ ಅಧ್ಯಕ್ಷ ಅಸಗೋಡು ಜಯಸಿಂಹ, ಬಂಜಾರ ಅಭಿವೃದ್ಧಿ ನಿಗಮ ಅಧ್ಯಕ್ಷ ಜಯದೇವ ನಾಯ್ಕ್, ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಜಿಪಂ ಸಿಇಒ ಸುರೇಶ ಬಿ. ಇಟ್ನಾಳ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್, ಪಾಲಿಕೆ ಆಯುಕ್ತೆ ರೇಣುಕಾ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೆ.ನಾಗರಾಜ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಭಾಗವಹಿಸುವರು. ನಿವೃತ್ತ ಪ್ರಾಧ್ಯಪಕರಾದ ಡಾ. ಎ.ಬಿ.ರಾಮಚಂದ್ರಪ್ಪ ಉಪನ್ಯಾಸ ನೀಡುವರು.- - -