ಕೊಪ್ಪಳ: ರೈತರ ಮತ್ತು ದಲಿತರ ಬದುಕು ಹಸನಾಗಿಸುವಲ್ಲಿ ಬಾಬು ಜಗಜೀವನರಾವ್ ಶ್ರಮ ಮತ್ತು ಜೀವನ ಎಲ್ಲರಿಗೂ ಮಾದರಿ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಸ್.ವಿ ಡಾಣಿ ಹೇಳಿದರು.

ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಭಾನುವಾರ ನಡೆದ ಬಾಬು ಜಗಜೀವನರಾಮ ಜಯಂತಿ ಕಾರ್ಯಕ್ರಮದಲ್ಲಿ ಪುಷ್ಪ ನಮನ ಸಲ್ಲಿಸಿ ಮಾತನಾಡಿ, ಉಪಪ್ರಧಾನಿಯಾಗಿ,ಹಸಿರು ಕ್ರಾಂತಿಯ ಹರಿಕಾರರಾಗಿ ರೈತರ ಬದುಕನ್ನು ಹಸನು ಮಾಡುವಲ್ಲಿ ಡಾ. ಬಾಬು ಜಗಜೀವನರಾವ್ ಶ್ರಮ ದೊಡ್ಡದು. ಅವರ ಸಾಧನೆ ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ದೇಶವನ್ನು ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಅಭಿವೃದ್ಧಿಪಡಿಸುವ ಗುರಿ ಹೊಂದಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕುಲಸಚಿವ ಪ್ರೊ.ಕೆ.ರಮೇಶ, ಆಡಳಿತಾಧಿಕಾರಿ ತಿಮ್ಮಾರಡ್ಡಿ ಮೇಟಿ, ಕನ್ನಡ ವಿಭಾಗದ ಪ್ರಾಧ್ಯಾಪಕ ವೀರೇಶ ಉತ್ತಂಗಿ, ಪ್ರದರ್ಶನ ಕಲಾ ವಿಭಾಗ ಪ್ರಾದ್ಯಾಪಕ ಅನಂತಕುಮಾರ ದೊರೆ, ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಮಂಜುನಾಥ ಹಾಗೂ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕ ರಂಗನಾಥ ಕೋಳೂರು ಸೇರಿದಂತೆ ವಿವಿಧ ವಿಭಾಗಗಳ ಪ್ರಾಧ್ಯಾಪಕರು ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.