ಸಾರಾಂಶ
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಂವಿಧಾನ್ ಸಮಾವೇಶದ ಪೂರ್ವ ಭಾವಿ ಸಭೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಬೆಳಗಾವಿಯಲ್ಲಿ ಜ. 21 ರಂದು ನಡೆಯಲಿರುವ ಐತಿಹಾಸಿಕ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಸಮಾವೇಶಕ್ಕೆ ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಪಕ್ಷದ ಮುಖಂಡರು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಬೇಕು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಕರೆ ನೀಡಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಸಮಾವೇಶದ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿದ ಅವರು, ಈ ಹಿಂದೆ ಡಿಸೆಂಬರ್ 27 ರಂದು ಸಮಾವೇಶವನ್ನು ನಿಗಧಿಪಡಿಸಲಾಗಿತ್ತು. ಆದರೆ, ಮಾಜಿ ಪ್ರಧಾನ ಮಂತ್ರಿ ಆರ್ಥಿಕ ತಜ್ಞ ಡಾ.ಮನಮೋಹನ್ ಸಿಂಗ್ ನಿಧನರಾದ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಮೂಂದೂಡಲಾಗಿತ್ತು ಎಂದು ಹೇಳಿದರು.1924ರಲ್ಲಿ ಬೆಳಗಾವಿಯಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ರಾಷ್ಟ್ರೀಯ ಅಧಿವೇಶದ ಅಧ್ಯಕ್ಷತೆಯನ್ನು ಮಹಾತ್ಮ ಗಾಂಧೀಜಿ ಅವರು ವಹಿಸಿದ್ದರು. ಅಂದು ಭಾರತಕ್ಕೆ ಸಂಪೂರ್ಣ ಸ್ವಾತಂತ್ರ್ಯ ಪಡೆಯುವ ಘೋಷಣೆ ಮೊಳಗಿತು. ಇಂದಿಗೆ ನೂರು ವರ್ಷ ಗಳ ಆ ಐತಿಹಾಸಿಕ ಸಮಾವೇಶವನ್ನು ಇಂದಿನ ಜನಾಂಗಕ್ಕೆ ತಿಳಿಯಪಡಿಸಲು ಪ್ರದೇಶ ಕಾಂಗ್ರೆಸ್ ಸಮಿತಿ ಐತಿಹಾಸಿಕ ಸಮಾವೇಶವನ್ನು ಬೆಳಗಾವಿಯ ಸಿಪಿಡಿ ಮೈದಾನದಲ್ಲಿ ನಡೆಸಲಿದೆ ಎಂದರು. ಈ ಸಮಾವೇಶದಲ್ಲಿ ಭಾಗವಹಿಸುವುದು ಅತ್ಯಂತ ಮಹತ್ವ ಮತ್ತು ಸದಾವಕಾಶವಾಗಿದ್ದು, ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ಎಲ್ಲಾ ಶಾಸಕರ ಮಾರ್ಗದರ್ಶನದಲ್ಲಿ ಸಾವಿರಾರು ಜನರು ಬೆಳಗಾವಿಗೆ ತೆರಳಲು, ಎಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಆಯಾ ಬ್ಲಾಕ್‌ನ ಮುಖಂಡರು ಸಂಪರ್ಕದಲ್ಲಿದ್ದು, ಬೆಳಗಾವಿಗೆ ತೆರಳುವ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಸಭೆಗೆ ಮಾಹಿತಿ ನೀಡಿದರು.ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಅನಿಲ್‌ಕುಮಾರ್ ಬೆಳಗಾವಿ ಸಮಾವೇಶದ ಬಗ್ಗೆ ಮಾಹಿತಿಗಳನ್ನು ಹಂಚಿಕೊಂಡರು.ಈ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ.ಡಿ.ಎಲ್.ವಿಜಯಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ಸಿಡಿಎ ಅಧ್ಯಕ್ಷ ನಯಾಜ್ ಅಹಮದ್, ಜಿಲ್ಲಾ ಕಾಂಗ್ರೆಸ್ ಎಸ್.ಸಿ ಘಟಕದ ಅಧ್ಯಕ್ಷ ಮಲ್ಲೇಶಸ್ವಾಮಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಬನಾ ಸುಲ್ತಾನ್, ಮುಖಂಡರಾದ ಉಪ್ಪಳ್ಳಿ ಕೆ. ಭರತ್ ಉಪಸ್ಥಿತರಿದ್ದರು.
16 ಕೆಸಿಕೆಎಂ 1ಬೆಳಗಾವಿಯಲ್ಲಿ ನಡೆಯಲಿರುವ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಸಮಾವೇಶದ ಹಿನ್ನಲೆಯಲ್ಲಿ ಚಿಕ್ಕಮಗಳೂರಿನಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾಜಿ ಸಚಿವ ರಮಾನಾಥ ರೈ ಅವರು ಮಾತನಾಡಿದರು.