ಸಾರಾಂಶ
ಜಿಲ್ಲೆಯ ರಸ್ತೆಗಳ ಅಭಿವೃದ್ಧಿ ಕುರಿತು ಸಂಸದ ಶ್ರೇಯಸ್ ಪಟೇಲ್ ಪಟ್ಟಿ ನೀಡಿದ್ದಾರೆ, ಹೆಚ್ಚಿನ ಒತ್ತು ನೀಡಿ ಅಭಿವೃದ್ಧಿಪಡಿಸಲಾಗುವುದು. ಪಟ್ಟಣದ ಕ್ರೀಡಾಂಗಣಕ್ಕೆ ಫ್ಲಡ್ ಲೈಟ್ ವ್ಯವಸ್ಥೆ ಮಾಡಿಕೊಡುವುದಾಗಿ ಹಾಗೂ ಅಂಬೇಡ್ಕರ್ ಭವನದ ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಡಾ. ಅಂಬೇಡ್ಕರ್ ಹೆಸರಿನಲ್ಲಿ ಜೈಭೀಮ್ ಕಪ್ ಪಂದ್ಯಾವಳಿ ಆಯೋಜಿಸಿರುವುದು ಶ್ಲಾಘನೀಯ ಕಾರ್ಯ. ಇದು ನಿಲ್ಲದಂತೆ ಪ್ರತಿವರ್ಷ ನಡೆಸಿಕೊಂಡು ಬರುವಂತೆ ಸಲಹೆ ನೀಡಿ ಪ್ರಥಮ ಬಹುಮಾನ ರು. ಒಂದು ಲಕ್ಷವನ್ನು ತಾವು ನೀಡುವುದಾಗಿ ಹೇಳಿದರು.
ಅರಕಲಗೂಡು: ಅಗತ್ಯವಾದ ಜಮೀನು ನೀಡಿದರೆ ಕೈಗಾರಿಕಾ ಪ್ರದೇಶ ತೆರೆದು ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲು ಕ್ರಮ ಕೈಗೊಳ್ಳುವುದಾಗಿ ಲೋಕೋಪಯೋಗಿ ಸಡಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಜೈ ಭೀಮ್ ಯುವಕರ ಸಂಘ ಹಾಗೂ ದಲಿತಪರ ಸಂಘಟನೆಗಳ ಒಕ್ಕೂಟ ಪಟ್ಟಣದ ಸಂಗೊಳ್ಳಿ ರಾಯಣ್ಣ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಜೈ ಭೀಮ್ ಕಪ್ ಕ್ರಿಕೆಟ್ ಪಂದ್ಯಾವಳಿಯನ್ನು ಶುಕ್ರವಾರ ಸಂಜೆ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯ ರಸ್ತೆಗಳ ಅಭಿವೃದ್ಧಿ ಕುರಿತು ಸಂಸದ ಶ್ರೇಯಸ್ ಪಟೇಲ್ ಪಟ್ಟಿ ನೀಡಿದ್ದಾರೆ, ಹೆಚ್ಚಿನ ಒತ್ತು ನೀಡಿ ಅಭಿವೃದ್ಧಿಪಡಿಸಲಾಗುವುದು. ಪಟ್ಟಣದ ಕ್ರೀಡಾಂಗಣಕ್ಕೆ ಫ್ಲಡ್ ಲೈಟ್ ವ್ಯವಸ್ಥೆ ಮಾಡಿಕೊಡುವುದಾಗಿ ಹಾಗೂ ಅಂಬೇಡ್ಕರ್ ಭವನದ ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಡಾ. ಅಂಬೇಡ್ಕರ್ ಹೆಸರಿನಲ್ಲಿ ಜೈಭೀಮ್ ಕಪ್ ಪಂದ್ಯಾವಳಿ ಆಯೋಜಿಸಿರುವುದು ಶ್ಲಾಘನೀಯ ಕಾರ್ಯ. ಇದು ನಿಲ್ಲದಂತೆ ಪ್ರತಿವರ್ಷ ನಡೆಸಿಕೊಂಡು ಬರುವಂತೆ ಸಲಹೆ ನೀಡಿ ಪ್ರಥಮ ಬಹುಮಾನ ರು. ಒಂದು ಲಕ್ಷವನ್ನು ತಾವು ನೀಡುವುದಾಗಿ ಹೇಳಿದರು.ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಪಿ. ಶ್ರೀಧರ್ ಗೌಡ ಮಾತನಾಡಿ, ಪಟ್ಟಣದಲ್ಲಿ ನೆನಗುದಿಗೆ ಬಿದ್ದಿರುವ ಅಂಬೇಡ್ಕರ್ ಭವನದ ಕಾಮಗಾರಿ ಪೂರ್ಣಗೊಳಿಸುವಂತೆ, ನಿರುದ್ಯೋಗ ಸಮಸ್ಯೆ ನಿವಾರಿಸಲು ಕೈಗಾರಿಕಾ ಪ್ರದೇಶ ತೆರೆಯಬೇಕು, ರಸ್ತೆ ಅಭಿವೃದ್ಧಿಗೆ ಅನುದಾನ ನೀಡುವಂತೆ ಮನವಿ ಮಾಡಿದರು.
ಸಂಸದ ಶ್ರೇಯಸ್ ಪಟೇಲ್ ಮಾತನಾಡಿದರು. ತಹಸೀಲ್ದಾರ್ ಕೆ.ಸಿ ಸೌಮ್ಯ, ತಾಲೂಕು ಕಾಂಗ್ರೆಸ್ ಅಧ್ಯಕ್ಷ ಸೋಮಶೇಖರ್, ಛಲವಾದಿ ಮಹಾಸಭಾ ತಾಲೂಕು ಘಟಕದ ಅಧ್ಯಕ್ಷ ಪೃಥ್ವಿರಾಜ್, ಮುಖಂಡರಾದ ಬಿ.ಸಿ.ರಾಜೇಶ್, ಗಣಪತಿ, ನಾಗರಾಜ್, ನಿಂಗರಾಜ್ ಇನ್ನಿತರರು ಉಪಸ್ಥಿತರಿದ್ದರು. ಪಂದ್ಯಾವಳಿ ಉದ್ಘಾಟನೆಗೆ ಪಟ್ಟಣಕ್ಕೆ ಬಂದ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಅನಕೃ ವೃತ್ತದಲ್ಲಿ ಅದ್ಧೂರಿ ಸ್ವಾಗತ ನೀಡಿ ಮೆರವಣಿಗೆಯಲ್ಲಿ ಕಾರ್ಯಕ್ರಮದ ವೇದಿಕೆಗೆ ಕರೆತರಲಾಯಿತು.