ಸಾರಾಂಶ
ಮನೆಯಲ್ಲಿ ಆಟವಾಡುತ್ತಿದ್ದ 15 ವರ್ಷದ ಅಪ್ರಾಪ್ತೆ ಮೇಲೆ ದೈಹಿಕ ದೌರ್ಜನ್ಯ ಎಸಗಿ, ಅತ್ಯಾಚಾರ ಎಸಗಿ, ಕೊಲೆ ಬೆದರಿಕೆ ಹಾಕಿದ್ದ ಅಪರಾಧಿಗೆ 3 ವರ್ಷ ಕಾರಾಗೃಹ ಶಿಕ್ಷೆ ಹಾಗೂ ₹8 ಸಾವಿರ ದಂಡ ವಿಧಿಸಿ, ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯ ತೀರ್ಪು ನೀಡಿದೆ.
ದಾವಣಗೆರೆ: ಮನೆಯಲ್ಲಿ ಆಟವಾಡುತ್ತಿದ್ದ 15 ವರ್ಷದ ಅಪ್ರಾಪ್ತೆ ಮೇಲೆ ದೈಹಿಕ ದೌರ್ಜನ್ಯ ಎಸಗಿ, ಅತ್ಯಾಚಾರ ಎಸಗಿ, ಕೊಲೆ ಬೆದರಿಕೆ ಹಾಕಿದ್ದ ಅಪರಾಧಿಗೆ 3 ವರ್ಷ ಕಾರಾಗೃಹ ಶಿಕ್ಷೆ ಹಾಗೂ ₹8 ಸಾವಿರ ದಂಡ ವಿಧಿಸಿ, ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯ ತೀರ್ಪು ನೀಡಿದೆ.
ನಗರದ ಎಚ್.ಕೆ.ಆರ್. ವೃತ್ತದ ಆಶಾ ವೈನ್ಸ್ ಸಮೀಪದ ವಾಸಿ ಶೌಕತ್ ಅಲಿ (20) ಶಿಕ್ಷೆಗೆ ಗುರಿಯಾದ ಅಪರಾಧಿ. 2015ರ ಅ.26ರಂದು ಅಪ್ರಾಪ್ತೆ ಮನೆಯಲ್ಲಿದ್ದಾಗ ಆರೋಪಿ ಶೌಕತ್ ಅಲಿ ಬಾಯಿಯಿಂದ ಕಚ್ಚಿ, ಬಲವಂತವಾಗಿ ಅತ್ಯಾಚಾರ ಎಸಗಿ, ಪ್ರಾಣ ಬೆದರಿಕೆ ಹಾಕಿದ್ದನು. ಇದರ ವಿರುದ್ಧ ಸಂತ್ರಸ್ತೆಯ ತಂದೆ 2015ರ ಅ.31ರಂದು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ತನಿಖಾಧಿಕಾರಿ, ಕೇಂದ್ರ ವೃತ್ತದ ವೃತ್ತ ನಿರೀಕ್ಷಕ ಜಿ.ಆರ್.ಸಂಗನಾಥ ಆರೋಪಿ ಶೌಕತ್ ಅಲಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯದ ನ್ಯಾಯಾಧೀಶ ಶ್ರೀರಾಮ ನಾರಾಯಣ ಹೆಗಡೆ ಶೌಕತ್ ಆಲಿ ಅಪರಾಧಿ ಎಂದು ತೀರ್ಮಾನಿಸಿ, ತೀರ್ಪು ಪ್ರಕಟಿಸಿದರು.ಪಿರ‍್ಯಾದಿ ಪರ ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್ ನ್ಯಾಯ ಮಂಡಿಸಿದ್ದರು. ಪ್ರಕರಣದ ತನಿಖಾಧಿಕಾರಿ ಸಂಗನಾಥ, ಸರ್ಕಾರಿ ವಕೀಲೆ ಸುನಂದಾ ಮಡಿವಾಳರ್‌ರ ಕಾರ್ಯವನ್ನು ಜಿಲ್ಲಾ ಎಸ್‌ಪಿ ಉಮಾ ಪ್ರಶಾಂತ, ಎಎಸ್‌ಪಿಗಳಾದ ವಿಜಯಕುಮಾರ ಎಂ. ಸಂತೋಷ, ಜಿ.ಮಂಜುನಾಥ ಶ್ಲಾಘಿಸಿದ್ದಾರೆ.
- - - (ಸಾಂದರ್ಭಿಕ ಚಿತ್ರ)