ಜೈನ ಧರ್ಮ, ಸಂಸ್ಕೃತಿಯ ಅರಿವು ಮಸ್ತಕಾಭಿಷೇಕ ಉದ್ದೇಶ: ಭಟ್ಟಾರಕ ಶ್ರೀ

| Published : Dec 18 2024, 12:46 AM IST

ಜೈನ ಧರ್ಮ, ಸಂಸ್ಕೃತಿಯ ಅರಿವು ಮಸ್ತಕಾಭಿಷೇಕ ಉದ್ದೇಶ: ಭಟ್ಟಾರಕ ಶ್ರೀ
Share this Article
  • FB
  • TW
  • Linkdin
  • Email

ಸಾರಾಂಶ

ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮಾತನಾಡಿ, ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮಾರ್ಗದರ್ಶನ ಮತ್ತು ನೇತೃತ್ವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಸಕಾಲಿಕ ಸಹಕಾರದಿಂದ ಮಸ್ತಕಾಭಿಷೇಕ ಯಶಸ್ವಿಯಾಗಿ ನಡೆದಿದೆ ಎಂದರು.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ಧರ್ಮ ಪ್ರಭಾವನೆಯೊಂದಿಗೆ ಜೈನರ ಆಚಾರ-ವಿಚಾರಗಳು, ಧರ್ಮ ಮತ್ತು ಸಂಸ್ಕೃತಿಯ ಬಗ್ಗೆ ಅರಿವು, ಜಾಗೃತಿ ಮೂಡಿಸುವುದೇ ಭಗವಾನ್ ಬಾಹುಬಲಿಸ್ವಾಮಿ ಮಹಾಮಸ್ತಕಾಭಿಷೇಕದ ಉದ್ದೇಶ ಎಂದು ಜೈನಕಾಶಿ ಮೂಡುಬಿದಿರೆಯ ಜೈನಮಠದ ಪೂಜ್ಯ ಚಾರುಕೀರ್ತಿಭಟ್ಟಾರಕ ಸ್ವಾಮೀಜಿ ಹೇಳಿದರು.ಅವರು ಭಾನುವಾರ ವೇಣೂರಿನಲ್ಲಿ ಬಾಹುಬಲಿ ಸಭಾಭವನದಲ್ಲಿ ೨೦೨೪ರ ಫೆಬ್ರವರಿ ೨೨ರಿಂದ ಮಾರ್ಚ್ 1ರ ವರೆಗೆ ನಡೆದ ಭಗವಾನ್ ಬಾಹುಬಲಿಸ್ವಾಮಿ ಮಹಾಮಸ್ತಕಾಭಿಷೇಕದ ಸ್ಮರಣಾರ್ಥ ಪ್ರಕಟಿಸಿದ ‘ಸಿರಿ ಬಾಹುಬಲಿ’ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿದರು.೫೫,೬೨,೦೦೦ ರು. ಉಳಿತಾಯ: ಮಹಾಮಸ್ತಕಾಭಿಷೇಕದ ಲೆಕ್ಕಪತ್ರದ ಸವಿವರ ಮಾಹಿತಿ ನೀಡಿದ ಕೋಶಾಧಿಕಾರಿ ಪಿ. ಜಯರಾಜ ಕಂಬಳಿ, ಎಲ್ಲ ವೆಚ್ಚಗಳು ಕಳೆದು ೫೫,೬೨,೦೦೦ ರು. ಉಳಿಕೆಯಾಗಿದ್ದು, ಇದನ್ನು ಬ್ಯಾಂಕಿನಲ್ಲಿ ನಿರಖು ಠೇವಣಿ ಇಡಲಾಗಿದೆ ಎಂದು ತಿಳಿಸಿದರು.ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮಾತನಾಡಿ, ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮಾರ್ಗದರ್ಶನ ಮತ್ತು ನೇತೃತ್ವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಸಕಾಲಿಕ ಸಹಕಾರದಿಂದ ಮಸ್ತಕಾಭಿಷೇಕ ಯಶಸ್ವಿಯಾಗಿ ನಡೆದಿದೆ ಎಂದರು.ಎಸ್‌ಡಿಎಂ ಸ್ವಾಯತ್ತ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಎ.ಜಯಕುಮಾರ ಶೆಟ್ಟಿ, ಹಾ.ಮಾ.ನಾ. ಸಂಶೋಧನಾ ಕೇಂದ್ರದ ಮಾಜಿ ನಿರ್ದೇಶಕ ಡಾ. ಎಸ್.ಡಿ. ಶೆಟ್ಟಿ ಮತ್ತು ಮುನಿರಾಜ ರೆಂಜಾಳ ಸಂಪಾದಕರಾಗಿದ್ದು ಪ್ರಕಟಿಸಿದ ‘ಸಿರಿ ಬಾಹುಬಲಿ’ ಸ್ಮರಣ ಸಂಚಿಕೆಯನ್ನು ಮೂಡುಬಿದಿರೆ ಜೈನಮಠದ ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಡಾ. ಎ. ಜಯಕುಮಾರ ಶೆಟ್ಟಿ ಇದ್ದರು.ಮಸ್ತಕಾಭಿಷೇಕ ಮಹೋತ್ಸವಕ್ಕೆ ವಿಶೇಷ ಸಹಕಾರ ಮತ್ತು ನೆರವು ನೀಡಿದ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಎಂ.ಆರ್.ಪಿ.ಎಲ್. ನ ಎಂಜಿನಿಯರ್ ಸ್ವಾಮಿಪ್ರಸಾದ್, ಸ್ಮರಣಸಂಚಿಕೆ ಸಂಪಾದಕ ಡಾ. ಎ. ಜಯಕುಮಾರ ಶೆಟ್ಟಿ, ಅಟ್ಟಳಿಗೆ ನಿರ್ಮಾಣ ಮಾಡಿದ ಮಾಣಿಯ ಪದ್ಮಪ್ರಸಾದ್ ಮತ್ತು ಮಹಾವೀರ ಪ್ರಸಾದ್ ಅವರನ್ನು ಗೌರವಿಸಲಾಯಿತು.ಅಳದಂಗಡಿ ಅರಮನೆಯ ತಿಮ್ಮಣರಸ ಡಾ. ಪದ್ಮಪ್ರಸಾದ ಅಜಿಲ ಅಧ್ಯಕ್ಷತೆ ವಹಿಸಿದ್ದರು.

ಮಸ್ತಕಾಭಿಷೇಕ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿ. ಪ್ರವೀಣ್‌ಕುಮಾರ್ ಇಂದ್ರ ಸ್ವಾಗತಿಸಿದರು. ಕಾರ್ಯಕ್ರಮ ನಿರ್ವಹಿಸಿದ ಮಹಾವೀರ ಜೈನ್ ಮೂಡುಕೋಡಿಗುತ್ತು ವಂದಿಸಿದರು.