ನಾಳೆಯಿಂದ ರಮಾನಾಥ ರೈ ನೇತೃತ್ವದ ‘ಜಕ್ರಿಬೆಟ್ಟು ಗಣೇಶೋತ್ಸವ’

| Published : Aug 26 2025, 02:00 AM IST

ನಾಳೆಯಿಂದ ರಮಾನಾಥ ರೈ ನೇತೃತ್ವದ ‘ಜಕ್ರಿಬೆಟ್ಟು ಗಣೇಶೋತ್ಸವ’
Share this Article
  • FB
  • TW
  • Linkdin
  • Email

ಸಾರಾಂಶ

22ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಮಾಜಿ ಸಚಿವ ಬಿ.ರಮಾನಾಥ ರೈ ಗೌರವಾಧ್ಯಕ್ಷತೆಯಲ್ಲಿ ಬಲ್ಲೋಡಿಗುತ್ತು ಪದ್ಮಶೇಖರ ಜೈನ್ ಅಧ್ಯಕ್ಷತೆಯಲ್ಲಿ ಆ.27ರಿಂದ 31ರವರೆಗೆ ಜಕ್ರಿಬೆಟ್ಟು ಬೈಪಾಸ್‌ನಲ್ಲಿ ವಿಜೃಂಭಣೆಯಿಂದ ನಡೆಯಲಿದೆ.

ಬಂಟ್ವಾಳ: ಜಕ್ರಿಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 22ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಮಾಜಿ ಸಚಿವ ಬಿ.ರಮಾನಾಥ ರೈ ಗೌರವಾಧ್ಯಕ್ಷತೆಯಲ್ಲಿ ಬಲ್ಲೋಡಿಗುತ್ತು ಪದ್ಮಶೇಖರ ಜೈನ್ ಅಧ್ಯಕ್ಷತೆಯಲ್ಲಿ ಆ.27ರಿಂದ 31ರವರೆಗೆ ಜಕ್ರಿಬೆಟ್ಟು ಬೈಪಾಸ್‌ನಲ್ಲಿ ವಿಜೃಂಭಣೆಯಿಂದ ನಡೆಯಲಿದೆ.

ಬಂಟ್ವಾಳದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮಾಜಿ ಸಚಿವ ಬಿ.ರಮಾನಾಥ ರೈ, 21 ವರ್ಷಗಳ ಹಿಂದೆ ಜಕ್ರಿಬೆಟ್ಟಿನಲ್ಲಿ ಆರಂಭಗೊಂಡ ಗಣೇಶೋತ್ಸವ ಇಡೀ ನಾಡಿಗೆ ಮಾದರಿಯಾಗಿದೆ. ಜಾತಿ, ಮತ, ಧರ್ಮಕ್ಕೆ ಸೀಮಿತವಾಗಿರದೆ, ಎಲ್ಲರೂ ಒಂದಾಗಿ ಬೆಸೆಯುವ ಬೆರೆಯುವ ಸೌಹಾರ್ದತೆಯ ಸಮ್ಮೇಳನವಾಗಿ ರೂಪುಗೊಂಡು ಬಂಟ್ವಾಳದ ಹಬ್ಬವಾಗಿ ಆಚರಿಸಲ್ಪಡುತ್ತಿದೆ ಎಂದರು.ಸಾಮರಸ್ಯದ ಬಂಟ್ವಾಳ ಸ್ಥಾಪನೆಗೆ ನಾಡಹಬ್ಬವಾಗಿ ಉತ್ಸವ ರೂಪುಗೊಳ್ಳಬೇಕು ಎಂಬ ಆಶಯ ನಮ್ಮದು ಎಂದರು.ಅಧ್ಯಕ್ಷ ಬಿ.ಪದ್ಮಶೇಖರ ಜೈನ್ ಬಲ್ಲೋಡಿಗುತ್ತು, ಉಪಾಧ್ಯಕ್ಷರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಸಂಪತ್ ಕುಮಾ‌ರ್ ಶೆಟ್ಟಿ ಮುಂಡ್ರೆಲುಗುತ್ತು, ಮೋಹನ್ ಚಂಡ್ತಿಮಾರ್, ಪ್ರಧಾನ ಕಾರ್ಯದರ್ಶಿ ಎಂ.ರಾಜೀವ ಶೆಟ್ಟಿ ಎಡ್ತೂರು, ಕಾರ್ಯದರ್ಶಿಗಳಾದ ಎನ್.ಮಹಾಬಲ ಬಂಗೇರ, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಪಿ.ಪ್ರವೀಣ್ ಕಿಣಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಬಾಲಕೃಷ್ಣ ಆರ್. ಅಂಚನ್, ಚಂದ್ರಶೇಖರ ಭಂಡಾರಿ, ಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಕುಲಾಲ್ ಪಂಜಿಕಲ್ಲು, ಪ್ರಮುಖರಾದ ಅಶೋಕ್ ಭಂಡಾರಿಬೆಟ್ಟು, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷೆ ಜಯಂತಿ ವಿ.ಪೂಜಾರಿ, ವೆಂಕಪ್ಪ ಪೂಜಾರಿ ಮತ್ತಿತರರಿದ್ದರು.