ನೇರ ನಡೆಯ ಅಪರೂಪದ ರಾಜಕಾರಣಿ ಜಾಲಪ್ಪ

| Published : Oct 21 2024, 12:40 AM IST

ಸಾರಾಂಶ

ದೊಡ್ಡಬಳ್ಳಾಪುರ: ಆರ್.ಎಲ್. ಜಾಲಪ್ಪನವರು ನೇರನಡೆ ಮತ್ತು ನಿಷ್ಠುರ ವ್ಯಕ್ತಿತ್ವದಿಂದಲೇ ಹೆಸರಾದ ಅಪರೂಪದ ರಾಜಕಾರಣಿಯಾಗಿದ್ದರು ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಂ. ಕೃಷ್ಣಮೂರ್ತಿ ಹೇಳಿದರು.

ದೊಡ್ಡಬಳ್ಳಾಪುರ: ಆರ್.ಎಲ್. ಜಾಲಪ್ಪನವರು ನೇರನಡೆ ಮತ್ತು ನಿಷ್ಠುರ ವ್ಯಕ್ತಿತ್ವದಿಂದಲೇ ಹೆಸರಾದ ಅಪರೂಪದ ರಾಜಕಾರಣಿಯಾಗಿದ್ದರು ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಂ. ಕೃಷ್ಣಮೂರ್ತಿ ಹೇಳಿದರು.

ಇಲ್ಲಿನ ಆರ್.ಎಲ್. ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ಶ್ರೀ ದೇವರಾಜ ಅರಸು ಅಂತಾರಾಷ್ಟ್ರೀಯ ವಸತಿ ಶಾಲೆ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ದೂರಗಾಮಿ ಚಿಂತನೆಗಳನ್ನು ಹೊಂದಿರುವ ವ್ಯಕ್ತಿತ್ವಗಳು ಇಂದಿನ ರಾಜಕಾರಣಕ್ಕೆ ಅಗತ್ಯವಾಗಿದೆ. ಭವಿಷ್ಯದ ಹಿತದೃಷ್ಟಿಯಿಂದ ಜಾರಿಗೊಳ್ಳುವ ಯೋಜನೆಗಳು ಜನರ ಆಶೋತ್ತರಗಳಿಗೆ ಪೂರಕವಾಗಿರಬೇಕು ಎಂದು ಜಾಲಪ್ಪ ನಂಬಿದ್ದರು. ಅವರು ಪರಿಸರ, ಶಿಕ್ಷಣ, ಗ್ರಾಮೀಣಾಭಿವೃದ್ಧಿ, ಸಹಕಾರ ಸೇರಿದಂತೆ ವಿವಿಧ ವಲಯಗಳಲ್ಲಿ ಅನೇಕ ಸೇವಾ ಕಾರ್‍ಯಗಳನ್ನು ಜಾರಿಗೆ ತಂದ ಹೆಗ್ಗಳಿಕೆ ಹೊಂದಿದ್ದಾರೆ. ಅವರು ಸ್ಥಾಪಿಸಿರುವ ದೇವರಾಜ ಅರಸ್ ಶಿಕ್ಷಣ ಸಂಸ್ಥೆ ಹಿಂದುಳಿದ ವರ್ಗದ, ಗ್ರಾಮೀಣ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಮಹತ್ವದ ನೀಡುವ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

ಶ್ರೀ ದೇವರಾಜ ಅರಸು ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಜೆ. ರಾಜೇಂದ್ರ ಮಾತನಾಡಿ, ಜಾಲಪ್ಪ ಅವರ ಒತ್ತಾಸೆಯಿಂದ ರಾಜ್ಯದಲ್ಲಿ ಜಾರಿಗೆ ಬಂದ ಹಲವು ಯೋಜನೆಗಳು ಇಂದಿಗೂ ಜನಸ್ನೇಹಿಯಾಗಿವೆ. ದೊಡ್ಡಬಳ್ಳಾಪುರದ ಅಪರೆಲ್ ಪಾರ್ಕ್ ಸಾವಿರಾರು ಜನರಿಗೆ ಉದ್ಯೋಗಾವಕಾಶ ನೀಡಿದೆ. ಮುಖ್ಯವಾಗಿ ಮಹಿಳಾ ಉದ್ಯೋಗಿಗಳಿಗೆ ಆಸರೆಯಾಗಿದೆ. ಶೈಕ್ಷಣಿಕವಾಗಿಯೂ ಸಮಾಜವನ್ನು ಸದೃಢವಾಗಿ ಕಟ್ಟುವ ಉದ್ದೇಶದಿಂದ ಅನೇಕ ವಿದ್ಯಾ ಸಂಸ್ಥೆಗಳನ್ನು ದೇವರಾಜ ಅರಸು ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ಸ್ಥಾಪಿಸಿ ಗ್ರಾಮೀಣ ವಿದ್ಯಾರ್ಥಿಗಳ ಅಧ್ಯಯನಕ್ಕೆ ಪೂರಕ ವಾತಾವರಣ ನಿರ್ಮಿಸಿದ್ದಾರೆ ಎಂದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಮಹತ್ವದ ಹುದ್ದೆಗಳನ್ನು ನಿರ್ವಹಿಸಿದ ಅವರು, ನೇರ, ನಿಷ್ಠುರ ನಡೆಯಿಂದ ಖ್ಯಾತಿ ಗಳಿಸಿದರು. ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ 80ರ ದಶಕದಲ್ಲಿ ವಿಫಲ ತೆರೆದ ಬಾವಿಗಳ ರೈತರ ಸಾಲಮನ್ನಾ ಯೋಜನೆಯನ್ನು ಅನುಷ್ಠಾನಕ್ಕೆ ತಂದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು.

ಪ್ರತಿಭಾ ಪುರಸ್ಕಾರ: ಇದೇ ವೇಳೆ ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಆರ್.ಎಲ್. ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಯ ವಿವಿಧ ಶೈಕ್ಷಣಿಕ ಘಟಕಗಳ ವಿದ್ಯಾರ್ಥಿಗಳಿಗೆ ಅಭಿನಂದಿಸಿ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಕಾರ್ಯಕ್ರಮದಲ್ಲಿ ಶ್ರೀ ದೇವರಾಜ ಅರಸು ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಕೆ.ಜಿ. ಹನುಮಂತರಾಜು, ವಿಜಯಲಕ್ಷ್ಮಿ-ಆರ್.ಎಲ್. ಜಾಲಪ್ಪ ಶೈಕ್ಷಣಿಕ ದತ್ತಿ ಟ್ರಸ್ಟಿ ಎಂ.ಆರ್. ಶ್ರೀನಿವಾಸ್, ಲಯನ್ಸ್‌ ಕ್ಲಬ್‌ ಆಫ್ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ ಅಧ್ಯಕ್ಷ ಜೆ.ಆರ್. ರಾಕೇಶ್, ಆರ್‌ಎಲ್‌ಜೆಐಟಿ ಪ್ರಾಂಶುಪಾಲ ಡಾ.ವಿಜಯ್‌ ಕಾರ್ತಿಕ್, ಅಕಾಡೆಮಿಕ್ ನಿರ್ದೇಶಕ ಡಾ. ಶ್ರೀನಿವಾಸರೆಡ್ಡಿ, ಎಒ ರಮೇಶ್‌ಕುಮಾರ್, ಕೃಷ್ಣಪ್ಪ, ವಿವಿಧ ಶೈಕ್ಷಣಿಕ ಘಟಕಗಳ ಪ್ರಾಂಶುಪಾಲರು, ಉಪಪ್ರಾಂಶುಪಾಲರು ಉಪಸ್ಥಿತರಿದ್ದರು.

ಬಾಕ್ಸ್‌.......

ರೋಗಿಗಳಿಗೆ ಹಾಲು-ಹಣ್ಣು ವಿತರಣೆ:

ಜಾಲಪ್ಪ ಹುಟ್ಟುಹಬ್ಬದ ಅಂಗವಾಗಿ ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಸ್ಟಿಟ್ಯೂಷನ್ ಸಹಯೋಗದಲ್ಲಿ ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಾಲು, ಬ್ರೆಡ್, ಹಣ್ಣುಗಳನ್ನು ವಿತರಿಸಲಾಯಿತು. ತೂಬಗೆರೆಯ ಆರ್.ಎಲ್.ಜಾಲಪ್ಪ ವೃದ್ದಾಶ್ರಮದಲ್ಲಿನ ಆಶ್ರಿತರಿಗೆ ಸವಲತ್ತುಗಳ ವಿತರಣೆ ನಡೆಯಿತು. ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್‍ಯಕ್ರಮಗಳು ನಡೆದವು. ಜಾಲಪ್ಪ ಸ್ಮೃತಿವನ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಶೈಕ್ಷಣಿಕ ಘಟಕಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಿಹಿ ಹಂಚಿಕೆ ನಡೆಯಿತು.

19ಕೆಡಿಬಿಪಿ4-

ದೊಡ್ಡಬಳ್ಳಾಪುರದ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ದಿವಂಗತ ಜಾಲಪ್ಪ ಅವರ 99ನೇ ಜನ್ಮದಿನಾಚರಣೆ ಕಾರ್ಯಕ್ರಮ ಶನಿವಾರ ನಡೆಯಿತು.