ಸಾರಾಂಶ
ದಾಬಸ್‍ಪೇಟೆ: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಲ್ಲಿ ಜಲ ಜೀವನ್ ಮಿಷನ್ ಯೋಜನೆ ಸಹಕಾರಿಯಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ ಸಿಇಒ ಡಾ.ಕೆ.ಎನ್.ಅನುರಾಧ ಹೇಳಿದರು.
ದಾಬಸ್‍ಪೇಟೆ: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಲ್ಲಿ ಜಲ ಜೀವನ್ ಮಿಷನ್ ಯೋಜನೆ ಸಹಕಾರಿಯಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ ಸಿಇಒ ಡಾ.ಕೆ.ಎನ್.ಅನುರಾಧ ಹೇಳಿದರು.
ತ್ಯಾಮಗೊಂಡ್ಲು ಹೋಬಳಿಯ ಹಸಿರುವಳ್ಳಿ ಗ್ರಾಪಂಯ ವ್ಯಾಪ್ತಿಯ ಬೈರನಾಯಕನಹಳ್ಳಿಯಲ್ಲಿ ಜಲಜೀವನ್ ಮಿಷನ್ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಗುಣಮಟ್ಟ ಹಾಗೂ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಗುತ್ತಿಗೆದಾರರು ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಕಾಲಕಾಲಕ್ಕೆ ಕಾಮಗಾರಿ ನಡೆಯುವ ಸ್ಥಳಗಳಿಗೆ ಭೇಟಿ ನೀಡಿ, ಪರಿಶೀಲಿಸಬೇಕು ಎಂದು ಸೂಚಿಸಿದರು.ಕಾಮಗಾರಿ ಪರಿಶೀಲನೆ ಬಳಿಕ ಬೈರನಾಯಕನಹಳ್ಳಿಯಲ್ಲಿನ ವಿದ್ಯಾರ್ಥಿ ನಿಲಯ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಭೇಟಿ ನೀಡಿದ ಅವರು, ಹತ್ತನೇ ತರಗತಿ ವಿದ್ಯಾರ್ಥಿಗಳೊಂದಿಗೆ ಮಾತನಾಡಿ, ಕಿತ್ತೂರು ರಾಣಿ ಶಾಲೆ ಕಳೆದ ಬಾರಿ ನೂರರಷ್ಟು ಫಲಿತಾಂಶ ಪಡೆದಿದೆ. ಈ ಬಾರಿಯೂ ಸಾಧನೆ ಮಾಡಬೇಕು. ವಸತಿ ಶಾಲೆಯ ಹೆಣ್ಣು ಮಕ್ಕಳು ಶೇ.100ರಷ್ಟು ಫಲಿತಾಂಶ ಪಡೆದು ಇತರೆ ಶಾಲೆಗಳಿಗೆ ಮಾದರಿಯಾಗಬೇಕು. ಕಲಿಕೆಗೆ ಅಗತ್ಯ ಸೌಲಭ್ಯಗಳನ್ನು ಸರಕಾರ ಒದಗಿಸುತ್ತಿದ್ದು, ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ನೆಲಮಂಗಲ ತಾಪಂ ಇಒ ಲಕ್ಷ್ಮೀನಾರಾಯಣಸ್ವಾಮಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತ ಶ್ರೀಕಾಂತ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ವಾಣಿ, ಹಸಿರುವಳ್ಳಿ ಪಿಡಿಒ ಶೀಲಾ, ಮತ್ತಿತರರಿದ್ದರು.ಪೋಟೋ 8 :ತ್ಯಾಮಗೊಂಡ್ಲು ಹೋಬಳಿಯ ಬೈರನಾಯಕನಹಳ್ಳಿಯಲ್ಲಿ ಜಲಜೀವನ್ ಮಿಷನ್ ಕಾಮಗಾರಿ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಪಂ ಸಿಇಒ ಡಾ.ಕೆ.ಎನ್.ಅನುರಾಧ ಭೇಟಿ ನೀಡಿ ಪರಿಶೀಲಿಸಿದರು.