ಕನ್ನಡಪ್ರಭ ವಾರ್ತೆ ಮಡಿಕೇರಿ

ಎಸ್. ಜಾನಕಿ ಅವರ ಆರು ದಶಕಗಳ ಸುದೀರ್ಘ ಸಂಗೀತ ಪಯಣ ಅವಿಸ್ಮರಣೀಯವಾದುದು. ಅವರು ಸಂಗೀತ ಲೋಕದ ಧ್ರುವತಾರೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಬಣ್ಣಿಸಿದ್ದಾರೆ.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌, ಜಿಲ್ಲಾ ಲೇಖಕರ ಮತ್ತು ಕಲಾವಿದರ ಬಳಗ, ಕೊಡಗು ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘ, ಮಡಿಕೇರಿ ತಾಲೂಕು ಕಸಾಪ ಘಟಕ ಹಾಗೂ ಸಮರ್ಥ ಕನ್ನಡಿಗರ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಮಡಿಕೇರಿ ನಗರದ ಪತ್ರಿಕಾ ಭವನದಲ್ಲಿ ಗಾನ ಕೋಗಿಲೆ ಎಸ್. ಜಾನಕಿ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಎಸ್.ಜಾನಕಿ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ನುಡಿ ಕೇಶವ ಕಾಮತ್ ಮಾತನಾಡಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ತಮ್ಮ ಸುಗಮ ಹಾಗೂ ಮಧುರ ಕಂಠದಿಂದ ಕೋಟ್ಯಂತರ ಜನರ ಹೃದಯಗಳನ್ನು ಗೆದ್ದಿರುವ ಎಸ್.‌ ಜಾನಕಿ ಸಂಗೀತ ಲೋಕದ ಧ್ರುವತಾರೆ ಎಂದರು.


ಪ್ರಾಸ್ತಾವಿಕವಾಗಿ ಮಾತನಾಡಿದ ಲೇಖಕರ ಬಳಗದ ಅಧ್ಯಕ್ಷ ಟಿ.ಜಿ.ಪ್ರೇಮಕುಮಾರ್, ಎಸ್.ಜಾನಕಿ ತಮ್ಮ ಕಂಠಸಿರಿಯಿಂದ ಕೋಟ್ಯಂತರ ಸಂಗೀತ ಪ್ರಿಯರ ಮನಸ್ಸನ್ನು ಗೆದ್ದಿದ್ದಾರೆ ಎಂದರು.ಲೇಖಕರ ಬಳಗದ ಮಾಜಿ ಅಧ್ಯಕ್ಷ ಲೋಕನಾಥ್ ಅಮೆಚೂರ್ ಮಾತನಾಡಿ, ಕನ್ನಡಿಗರ ಮನೆ ಮಾತಾಗಿರುವ ಜಾನಕಿಯವರು ಮಕ್ಕಳಿಂದ ಹಿಡಿದು ವೃದ್ದರ ಧ್ವನಿಯವರೆಗೆ ಯಾವುದೇ ಪಾತ್ರಕ್ಕೂ ಒಗ್ಗಿಕೊಳ್ಳುತ್ತಿದ್ದರು ಎಂದರು. ಜಿಲ್ಲಾ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮಾಥ್ಯೂ, ಲೇಖಕಿ ಜಲಜಾ ಶೇಖರ್ ಮಾತನಾಡಿದರು. ಜಿಲ್ಲಾ ಮಹಿಳಾ ಬರಹಗಾರರ ಸಂಘದ ಅಧ್ಯಕ್ಷೆ ಪುದಿನೆರವನ‌ ರೇವತಿ ರಮೇಶ್, ಮಡಿಕೇರಿ ತಾಲೂಕು ಕಸಾಪ ಮಾಜಿ ಅಧ್ಯಕ್ಷ ಅಂಬೇಕಲ್ ನವೀನ್, ಲೇಖಕರ ಬಳಗದ ಪ್ರಧಾನ ಕಾರ್ಯದರ್ಶಿ ಭಾರತಿ ರಮೇಶ್, ಜಿಲ್ಲಾ ಕಸಾಪ ಸಮಿತಿಯ ಕೋಶಾಧಿಕಾರಿ ಎಸ್.ಎಸ್.ಸಂಪತ್ ಕುಮಾರ್, ಮಡಿಕೇರಿ ತಾಲೂಕು ಕಸಾಪಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಸಿ.ದಿನೇಶ್, ಸಮರ್ಥ ಕನ್ನಡಿಗರ ಸಂಸ್ಥೆಯ ಜಿಲ್ಲಾ ಪ್ರಧಾನ ಸಂಚಾಲಕಿ ಕೆ.ಜಯಲಕ್ಷ್ಮಿ , ಉಪನ್ಯಾಸಕಿ ಪ್ರತಿಮಾ ರೈ, ಲೇಖಕರ ಬಳಗದ ಸಹ ಕಾರ್ಯದರ್ಶಿ ಕೆ.ವಿ.ಉಮೇಶ್, ಸಮಿತಿ ಸದಸ್ಯ ನೆರವಂಡ ಉಮೇಶ್, ಕಸಾಪ ಸದಸ್ಯ ಟಿ.ಎಂ.ಕೆ.ವಾಸು ರೈ, ಮಹಿಳಾ ಬರಹಗಾರರ ಸಂಘದ ಪ್ರಮುಖರಾದ ಬೈತಡ್ಕ ಜಾನಕಿ ಬೆಳ್ಳಿಯಪ್ಪ, ಕೂಪದೀರ ಸುಂದರಿ ಮಾಚಯ್ಯ, ಕಟ್ರತನ ಲಲಿತಾ ಅಯ್ಯಣ್ಣ, ಚೊಕ್ಕಾಡಿ ಪ್ರೇಮ ರಾಘವಯ್ಯ, ತೆನ್ನಿರಾ ರಾಧಾ ಪೊನ್ನಪ್ಪ ಇತರರು ಇದ್ದರು.

ಭಾವ ನಮನ: ಲೇಖಕರ ಬಳಗದ ಪ್ರಧಾನ ಕಾರ್ಯದರ್ಶಿ ಭಾರತಿ ರಮೇಶ್, ಮಡಿಕೇರಿ ತಾಲೂಕು ಕಸಾಪ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ಸಮರ್ಥ ಕನ್ನಡಿಗರ ಸಂಸ್ಥೆಯ ಜಿಲ್ಲಾ ಪ್ರಧಾನ ಸಂಚಾಲಕಿ ಕೆ.ಜಯಲಕ್ಷ್ಮಿ ಉಪನ್ಯಾಸಕಿ ಪ್ರತಿಮಾ ರೈ, ಎಸ್.ಜಾನಕಿ ಅವರು ಹಾಡಿರುವ ಗೀತೆಗಳನ್ನು ಹಾಡಿ ಭಾವ ನಮನ ಸಲ್ಲಿಸಿದರು.