ಸಾರಾಂಶ
ನಾಪೋಕ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜನಪದೋತ್ಸವ ಕಾರ್ಯಕ್ರಮ ನಡೆಯಿತು. ಕನ್ನಡ ಉಪನ್ಯಾಸಕರಾದ ಹರಿಣಿ ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಸಮಿತಿ ಹಾಗೂ ಕನ್ನಡ ವಿಭಾಗ ವತಿಯಿಂದ ಜನಪದೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಕಾಲೇಜಿನ ಕನ್ನಡ ಉಪನ್ಯಾಸಕರಾದ ಹರಿಣಿ .ಕೆ ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ದಿನದ
ಮಹತ್ವದ ಬಗ್ಗೆ ಮಾತನಾಡಿ ತಮ್ಮ ಅನಿಸಿಕೆ ವ್ಯಕ್ತಪಡಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಜನಪದದ ಮಹತ್ವ ಮತ್ತು ಅರಿವನ್ನು ವಿದ್ಯಾರ್ಥಿಗಳಿಗೆ ಮೂಡಿಸಲಾಯಿತು. ನಂತರ ಸಾಂಸ್ಕೃತಿಕ ಸಂಚಾಲಕರಾದ ಡಾ. ಸಹನಾ ದಿನೇಶ್ ಹಾಗೂ ಬೋಧಕ ಬೋಧಕೇತರ ವರ್ಗದವರಿಂದ ಆಯೋಜಿಸಿದ ವಿವಿಧ ಜಾನಪದ ನೃತ್ಯ , ಕ್ರೀಡೆಗಳಲ್ಲಿ ವಿದ್ಯಾರ್ಥಿಗಳು ಆಸಕ್ತಿಯಿಂದ ಪಾಲ್ಗೊಂಡು ಜನಪದದ ಸೊಗಡನ್ನು ಸವಿದರು. ಈ ಸಂದರ್ಭ ಪ್ರಾಂಶುಪಾಲರಾದ ಮನೋಜ್ ಕುಮಾರ್, ಬೋಧಕ , ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.