ಜನಾರ್ದನ ರೆಡ್ಡಿಗೆ ಶಾಸಕತ್ವ ರದ್ದು, ಆತಂಕ

| Published : May 07 2025, 12:51 AM IST

ಸಾರಾಂಶ

ಸಿಬಿಐ ನ್ಯಾಯಾಲಯ ವಿಧಿಸಿರುವ ಶಿಕ್ಷೆಯನ್ನು ಪ್ರಶ್ನಿಸಿ ಅಲ್ಲಿನ ಹೈಕೋರ್ಟ್‌ಗೆ ಮೊರೆ ಹೋಗುವ ಸಾಧ್ಯತೆ ಇದೆ. ನ್ಯಾಯಾಲಯ ತಡೆ ನೀಡಿದರೆ ಮಾತ್ರ ಶಾಸಕತ್ವ ಮುಂದುವರಿಯಲಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದ ಓಬಳಾಪುರಂ ಮೈನಿಂಗ್ ಕಂಪನಿಯ(ಒಎಂಸಿ) ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಹೈದರಾಬಾದ್‌ನ ಸಿಬಿಐ ವಿಶೇಷ ನ್ಯಾಯಾಲಯ ಏಳು ವರ್ಷ ಶಿಕ್ಷೆ ವಿಧಿಸಿದ ಬೆನ್ನಲ್ಲೇ ಶಾಸಕತ್ವ ರದ್ದಾಗುವ ಆತಂಕ ಎದುರಾಗಿದೆ.

ಕನಿಷ್ಠ ಮೂರು ವರ್ಷ ಜೈಲು ಶಿಕ್ಷೆಯಾದರೆ ತನ್ನಿಂತಾನೆ ಶಾಸಕತ್ವ ರದ್ದಾಗಲಿದೆ. ಜನಾರ್ದನ ರೆಡ್ಡಿ ಅವರಿಗೆ ನ್ಯಾಯಾಲಯ ಏಳು ವರ್ಷಗಳ ಕಾಲ ಶಿಕ್ಷೆ ವಿಧಿಸಿದೆ. ಸಿಬಿಐ ನ್ಯಾಯಾಲಯ ವಿಧಿಸಿರುವ ಶಿಕ್ಷೆಯನ್ನು ಪ್ರಶ್ನಿಸಿ ಅಲ್ಲಿನ ಹೈಕೋರ್ಟ್‌ಗೆ ಮೊರೆ ಹೋಗುವ ಸಾಧ್ಯತೆ ಇದೆ. ನ್ಯಾಯಾಲಯ ತಡೆ ನೀಡಿದರೆ ಮಾತ್ರ ಶಾಸಕತ್ವ ಮುಂದುವರಿಯಲಿದೆ. ಸಿಬಿಐ ನ್ಯಾಯಾಲಯದ ತೀರ್ಪಿಗೆ ಹೈಕೋರ್ಟ್‌ ತಡೆ ನೀಡದಿದ್ದರೆ ಶಿಕ್ಷೆ ಅನುಭವಿಸಲಿದ್ದು, ಜನಾರ್ದನರೆಡ್ಡಿ ಶಾಸಕತ್ವ ಸ್ಥಾನ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.