ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ, ವ್ಯವಹಾರ ಜ್ಞಾನ, ಸೃಜನಶೀಲ ಚಿಂತನೆ ಬೆಳೆಸುವ ಉದ್ದೇಶದಿಂದ ಹೆಮ್ಮಾಡಿಯ ಜನತಾ ಪಿಯು ಕಾಲೇಜಿನಲ್ಲಿ ನ. 5ರಂದು ‘ಜನತಾ ಆವಿಷ್ಕಾರ್–2026’ ಬೃಹತ್ ಶೈಕ್ಷಣಿಕ ಹಾಗೂ ವ್ಯವಹಾರ ಮೇಳ ಆಯೋಜಿಸಲಾಗಿದೆ.
ಹೆಮ್ಮಾಡಿ : ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ, ವ್ಯವಹಾರ ಜ್ಞಾನ, ಸೃಜನಶೀಲ ಚಿಂತನೆ ಬೆಳೆಸುವ ಉದ್ದೇಶದಿಂದ ಹೆಮ್ಮಾಡಿಯ ಜನತಾ ಪಿಯು ಕಾಲೇಜಿನಲ್ಲಿ ನ. 5ರಂದು ‘ಜನತಾ ಆವಿಷ್ಕಾರ್–2026’ ಬೃಹತ್ ಶೈಕ್ಷಣಿಕ ಹಾಗೂ ವ್ಯವಹಾರ ಮೇಳ ಆಯೋಜಿಸಲಾಗಿದೆ.ವಿಜ್ಞಾನ, ವ್ಯವಹಾರ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಂಗಮವಾಗಿರುವ ಈ ಉತ್ಸವದಲ್ಲಿ ವಿದ್ಯಾರ್ಥಿಗಳೇ ನಿರ್ವಹಿಸುವ 150ಕ್ಕೂ ಅಧಿಕ ಮಳಿಗೆಗಳು ವಿಶೇಷ ಆಕರ್ಷಣೆಯಾಗಲಿವೆ. ವಿದ್ಯಾರ್ಥಿಗಳು ವಿವಿಧ ಉತ್ಪನ್ನಗಳನ್ನು ಪ್ರದರ್ಶಿಸಿ, ಮಾರಾಟ ಮಾಡುವ ಮೂಲಕ ಪ್ರಾಯೋಗಿಕ ವ್ಯವಹಾರ ಅನುಭವ ಪಡೆದುಕೊಳ್ಳಲಿದ್ದಾರೆ.
ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕ ನಾಡೋಜ ಡಾ. ಜಿ. ಶಂಕರ್ ಮೇಳವನ್ನು ಉದ್ಘಾಟಿಸಲಿದ್ದು, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ, ಅದಾನಿ ಗ್ರೂಪ್ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ ಮಳಿಗೆಗಳನ್ನು ಉದ್ಘಾಟಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಬೈಂದೂರು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ, ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್, ರಕ್ತದ ಆಪತ್ಬಾಂಧವ ಸತೀಶ್ ಸಾಲ್ಯಾನ್ ಮಣಿಪಾಲ, ಜನಸೇವಾ ಟ್ರಸ್ಟ್ ಪ್ರವರ್ತಕ ವಸಂತ ಗಿಳಿಯಾರ್ ಹಾಗೂ ಬೈಂದೂರು ತಾಲೂಕು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಭಾಗವಹಿಸಲಿದ್ದಾರೆ.ಇದೇ ಸಂದರ್ಭದಲ್ಲಿ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಸಾಮೂಹಿಕ ನೃತ್ಯ, ಚಿತ್ರಕಲೆ, ರಸಪ್ರಶ್ನೆ, ವಿಜ್ಞಾನ ಮೇಳ ಹಾಗೂ ಕಿರುಪ್ರಹಸನ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಉತ್ಸವದ ಮತ್ತೊಂದು ಪ್ರಮುಖ ಆಕರ್ಷಣೆಯಾಗಿ ‘ಜನತಾ ಕಲಾಂಜಲಿ’ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಪ್ರತಿಷ್ಠಿತ ಕಲಾತಂಡಗಳಿಂದ ಹೋಳಿ ಕುಣಿತ, ಹೌಂದೇರಾಯನ ವಾಲಗ, ಹುಲಿ ಹೆಜ್ಜೆ ಹಾಗೂ ವಿವಿಧ ನೃತ್ಯ ಪ್ರದರ್ಶನಗಳು ಜರುಗಲಿವೆ. ಅಂತರಾಷ್ಟ್ರೀಯ ಖ್ಯಾತಿಯ ಜಾದೂಗಾರ ಸತೀಶ್ ಹೆಮ್ಮಾಡಿ ಅವರ ಜಾದೂ ಪ್ರದರ್ಶನವೂ ನಡೆಯಲಿದೆ ಎಂದು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಗಣೇಶ್ ಮೊಗವೀರ ತಿಳಿಸಿದ್ದಾರೆ.ಅಂಕಗಳ ಜೊತೆ ವ್ಯವಹಾರ ಜ್ಞಾನವೂ ಮುಖ್ಯಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಕೇವಲ ಅಂಕ ಗಳಿಕೆಗೆ ಸೀಮಿತವಾಗದೆ, ವ್ಯಾವಹಾರಿಕ ಜ್ಞಾನ, ಉದ್ಯಮಶೀಲತೆಯ ಮೂಲಕ ಸ್ವಾವಲಂಬಿ ಬದುಕು ರೂಪಿಸಿಕೊಳ್ಳಲು ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಉದ್ದೇಶದಿಂದ ಈ ಮೇಳ ಆಯೋಜಿಸಲಾಗಿದೆ. ವಿದ್ಯಾರ್ಥಿಗಳೇ 150ಕ್ಕೂ ಅಧಿಕ ಮಳಿಗೆಗಳನ್ನು ನಿರ್ವಹಿಸುವ ಮೂಲಕ ನೈಜ ವ್ಯವಹಾರದ ಅನುಭವ ಪಡೆಯಲಿದ್ದಾರೆ ಎಂದು ಪ್ರಾಂಶುಪಾಲ ಗಣೇಶ್ ಮೊಗವೀರ ತಿಳಿಸಿದ್ದಾರೆ.