ಹಾನಗಲ್ಲ ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗಬೇಕಿದ್ದರೆ ಗರ್ಭಿಣಿಯರು ಮತ್ತು ಬಾಣಂತಿಯರು ಆರೋಗ್ಯವಂತರಾಗಿರುವುದು ಅತ್ಯಗತ್ಯ ಎಂದು ಹಾನಗಲ್ಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಿರಿಯ ಮೇಲ್ವಿಚಾರಕಿ ಶ್ರೀಮತಿ ಪೂರ್ಣಿಮಾ ಆರ್. ದೊಡ್ಡಮನಿ ಅಭಿಪ್ರಾಯಪಟ್ಟರು.
ಹಾನಗಲ್ಲ:ಹಾನಗಲ್ಲ ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗಬೇಕಿದ್ದರೆ ಗರ್ಭಿಣಿಯರು ಮತ್ತು ಬಾಣಂತಿಯರು ಆರೋಗ್ಯವಂತರಾಗಿರುವುದು ಅತ್ಯಗತ್ಯ ಎಂದು ಹಾನಗಲ್ಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಿರಿಯ ಮೇಲ್ವಿಚಾರಕಿ ಶ್ರೀಮತಿ ಪೂರ್ಣಿಮಾ ಆರ್. ದೊಡ್ಡಮನಿ ಅಭಿಪ್ರಾಯಪಟ್ಟರು.
ರೋಶನಿ ಸಮಾಜ ಸೇವಾ ಸಂಸ್ಥೆ ಹಾಗೂ ಜನವೇದಿಕೆ ಸಹಯೋಗದಲ್ಲಿ ಇತ್ತೀಚೆಗೆ ರೋಶನಿ ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿದ್ದ 20 ಹಳ್ಳಿಗಳ ಜನವೇದಿಕೆ ಮುಖಂಡರ ''''''''ಗರ್ಭಿಣಿ ಮತ್ತು ಬಾಣಂತಿಯರ ಆರೈಕೆ'''''''' ಕುರಿತು ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡುತ್ತಿದ್ದರು. ಅಂಗನವಾಡಿಗಳಲ್ಲಿ ದೊರೆಯುವ ಪೂರಕ ಪೌಷ್ಟಿಕ ಆಹಾರ, ಗರ್ಭಿಣಿಯರಿಗೆ ಅಗತ್ಯವಿರುವ ಪೌಷ್ಟಿಕಾಂಶಗಳು ಮತ್ತು ಮಹಿಳೆಯರ ಸ್ಥಿತಿಗತಿ ಹಾಗೂ ಅವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮುಖಂಡರಿಗೆ ಸುದೀರ್ಘ ಮಾಹಿತಿ ನೀಡಿದರು. ಸಭೆಯಲ್ಲಿ 30 ಜನ ಜನವೇದಿಕೆ ಮುಖಂಡರು ಭಾಗವಹಿಸಿದ್ದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಶನಿ ಸಂಸ್ಥೆಯ ನಿರ್ದೇಶಕಿ ಸಿ. ಅನಿತಾ ಡಿಸೋಜಾ ಮಾತನಾಡಿ, "ಇಂದಿನ ದಿನಗಳಲ್ಲಿ ಗರ್ಭಿಣಿಯರು ಮತ್ತು ಬಾಣಂತಿಯರು ರಕ್ತಹೀನತೆ, ಮಾನಸಿಕ ಖಿನ್ನತೆ, ದೈಹಿಕ ಆಯಾಸ, ನಿಶ್ಶಕ್ತಿ ಹಾಗೂ ನಿದ್ರಾಹೀನತೆಯಂತಹ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇಂತಹ ತೊಂದರೆಗಳಿಂದ ಹೊರಬರಲು ಮತ್ತು ಸರಕಾರ ನೀಡುವ ಪ್ರತಿಯೊಂದು ಸೌಲಭ್ಯಗಳು, ಸಕಾಲದಲ್ಲಿ ಪಡೆದುಕೊಳ್ಳಲು ಮಹಿಳೆಯರು ಜಾಗೃತರಾಗಬೇಕು " ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪ್ರಗತಿಪರ ಸಂಘಟನೆಯ ಸದಸ್ಯರಾದ ಶ್ರೀ ರಾಮಚಂದ್ರ ಎಸ್. ಕಲ್ಲೇರ ಹಾಗೂ ಹಾವೇರಿ ಜಿಲ್ಲಾ ಆರೋಗ್ಯ ಅಭಿಯಾನದ ಅಧ್ಯಕರಾದ ಶ್ರೀ ಬಸವರಾಜ ಕೊತಂಬರಿ ಭಾಗವಹಿಸಿದ್ದರು. ವಿವಿಧ ಗ್ರಾಮಗಳ ಜನವೇದಿಕೆ ಮುಖಂಡರು ಹಾಗೂ ಹಳ್ಳಿ ಅಭಿವೃದ್ಧಿ ಸಮಿತಿ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಸರ್ವರನ್ನು ಶ್ರೀ ಎಸ್.ವಿ. ಪಾಟೀಲ ಸ್ವಾಗತಿಸಿದರು. ಗೌರಮ್ಮ ವೈ.ಕೆ. ನಿರೂಪಿಸಿದರು. ಸವಿತಾ ಹನಕನಹಳ್ಳಿ ವಂದಿಸಿದರು.