ಸಾರಾಂಶ
ವೈ. ಮಹಾಬಲೇಶ್ವರಪ್ಪ ತಾಂತ್ರಿಕ ಕಾಲೇಜಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿ ಯಾವುದೇ ಸ್ಪರ್ಧೆಯನ್ನು ಎದುರಿಸಲು ಸಿದ್ಧನಾಗಬೇಕು
ಬಳ್ಳಾರಿ:
ಸ್ಪರ್ಧಾತ್ಮಕ ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಸೂಕ್ತ ತರಬೇತಿ ನೀಡಿ ಸಜ್ಜುಗೊಳಿಸಬೇಕು ಎಂದು ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ಹೇಳಿದರು.ನಗರದ ವೈ. ಮಹಾಬಲೇಶ್ವರಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ (ಆರ್‌ವೈಎಂಇಸಿ) ಜರುಗಿದ ನೂತನ ಆಡಳಿತ ಮಂಡಳಿ ಅಧ್ಯಕ್ಷ ಜಾನೆಕುಂಟೆ ಬಸವರಾಜ್ ಅವರ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ವೈ. ಮಹಾಬಲೇಶ್ವರಪ್ಪ ತಾಂತ್ರಿಕ ಕಾಲೇಜಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿ ಯಾವುದೇ ಸ್ಪರ್ಧೆಯನ್ನು ಎದುರಿಸಲು ಸಿದ್ಧನಾಗಬೇಕು ಎಂದರು.ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಅಲ್ಲಂ ಗುರುಬಸವರಾಜ್, ಕಾಲೇಜಿನ ಪ್ರಗತಿಗೆ ಪ್ರತಿಯೊಬ್ಬರೂ ಶ್ರಮಿಸುವಂತೆ ಕರೆ ನೀಡಿದರು. ಸಂಘದ ಕಾರ್ಯದರ್ಶಿ ಡಾ. ಅರವಿಂದ ಪಾಟೀಲ್ ಮಾತನಾಡಿ, ಪ್ರಸ್ತುತ ದಿನಗಳಿಗೆ ತಕ್ಕಂತೆ ಪಠ್ಯಕ್ರಮಗಳನ್ನು ನವೀಕರಿಸಬೇಕು ಎಂದು ತಿಳಿಸಿದರು.
ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಜಾನೆಕುಂಟೆ ಬಸವರಾಜ್, ಸಂಘದ ಸಹ ಕಾರ್ಯದರ್ಶಿ ಯಾಳ್ಪಿ ಪಂಪನಗೌಡ, ಬೈಲುವದ್ದಿಗೇರಿ ಎರಿಸ್ವಾಮಿ, ವೀವಿ ಸಂಘದ ಮಾಜಿ ಅಧ್ಯಕ್ಷ ಉಡೇದ ಬಸವರಾಜ, ಜೆಎಸ್ ಬಸವರಾಜ್, ಕೋಳೂರು ಮಲ್ಲಿಕಾರ್ಜುನಗೌಡ, ಸಂಗನಕಲ್ಲು ಹಿಮಂತರಾಜ, ನೇಪಾಕ್ಷಪ್ಪ, ಪಾಲಾಕ್ಷರೆಡ್ಡಿ, ಪ್ರಭುಸ್ವಾಮಿ, ಜಾನೆಕುಂಟೆ ಪಂಪನಗೌಡ, ಶಿವಾನಂದ ದಂಡಿನ, ಸೋಮೇಶ್ವರ, ವೀರನಗೌಡ, ಮಹಾಲಿಂಗಯ್ಯ, ಏಳುಬೆಂಚೆ ರಾಜಶೇಖರ, ಕಾಲೇಜಿನ ಪ್ರಾಂಶುಪಾಲ ಡಾ. ಟಿ. ಹನುಮಂತ ರೆಡ್ಡಿ, ಜಾನೆಕುಂಟೆ ಬಸವರಾಜ್ ಅವರ ಕುಟುಂಬ ಸದಸ್ಯರು ಸಮಾರಂಭದಲ್ಲಿ ಹಾಜರಿದ್ದರು.