ಸಾರಾಂಶ
ವಾಲ್ಮೀಕಿ ಹಗರಣದ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ನಾನು ಮತ್ತು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು ಕೂಡಲಸಂಗಮದಿಂದ ಬಳ್ಳಾರಿಗೆ ಪಾದಯಾತ್ರೆ ನಡೆಸಲು ನಿರ್ಧರಿಸಿದ್ದೇವೆ ಎಂದು ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದಾರೆ.
ಗೋಕಾಕ ; ವಾಲ್ಮೀಕಿ ಹಗರಣದ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ನಾನು ಮತ್ತು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು ಕೂಡಲಸಂಗಮದಿಂದ ಬಳ್ಳಾರಿಗೆ ಪಾದಯಾತ್ರೆ ನಡೆಸಲು ನಿರ್ಧರಿಸಿದ್ದೇವೆ ಎಂದು ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದಾರೆ.
ಭಾನುವಾರ ನಗರದ ತಮ್ಮ ಗೃಹ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ವಾಲ್ಮೀಕಿ ಹಗರಣ ರಾಜ್ಯದ ಅತ್ಯಂತ ದೊಡ್ಡ ಹಗರಣವಾಗಿದೆ. ವಾಲ್ಮೀಕಿ ನಿಗಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಬೇರೆ, ಬೇರೆ ನಕಲಿ ಖಾತೆಗಳಿಗೆ ವರ್ಗಾವಣೆ ಮಾಡಿ ದೊಡ್ಡ ಮಟ್ಟದಲ್ಲಿ ಹಗರಣ ನಡೆಸಲಾಗಿದೆ.
ಹಗರಣದ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ನಾನು ಮತ್ತು ವಿಜಯಪುರ ಶಾಸಕ ಬಸವರಾಜ ಪಾಟೀಲ ಯತ್ನಾಳ ಅವರು ಕೂಡಲಸಂಗಮದಿಂದ ಬಳ್ಳಾರಿಗೆ ಪಾದಯಾತ್ರೆ ನಡೆಸಲು ನಿರ್ಧರಿಸಿದ್ದೇವೆ. ಆದಷ್ಟು ಬೇಗ ಹೈಕಮಾಂಡ್ ಅನುಮತಿ ಪಡೆದು ದಿನಾಂಕ ಪ್ರಕಟಿಸಲಾಗುವುದು ಎಂದು ತಿಳಿಸಿದರು.