ಸಾರಾಂಶ
ಹೊಸಕೋಟೆ : ಕೋಲಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಅಡ್ಡಾದಿಡ್ಡಿಯಾಗಿ ಜಟಕಾಬಂಡಿ ಚಲಾಯಿಸುತ್ತಾ ಇತರೆ ವಾಹನಗಳಿಗೆ ಸಂಚಾರಕ್ಕೆ ಅಡ್ಡಿ ಉಂಟು ಮಾಡುತ್ತಿದ್ದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೈರಲ್ ಆಗಿತ್ತು.
ಹೊಸಕೋಟೆ : ಕೋಲಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಅಡ್ಡಾದಿಡ್ಡಿಯಾಗಿ ಜಟಕಾಬಂಡಿ ಚಲಾಯಿಸುತ್ತಾ ಇತರೆ ವಾಹನಗಳಿಗೆ ಸಂಚಾರಕ್ಕೆ ಅಡ್ಡಿ ಉಂಟು ಮಾಡುತ್ತಿದ್ದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೈರಲ್ ಆಗಿತ್ತು.
ಪೋಸ್ಟ್ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಹೊಸಕೋಟೆ ಸಂಚಾರ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀಕಂಠಯ್ಯ ನೇತೃತ್ವದ ತಂಡ ಜಟಕಾ ಬಂಡಿ ಸೇರಿ ಅದರ ಜೊತೆಗಿದ್ದ ಮೂರು ಆಟೋ, ಒಂದು ಟಾಟಾ ಏಸ್, ಬೈಕನ್ನು ಜಪ್ತಿ ಮಾಡಿದ್ದಾರೆ.ಹೊಸಕೋಟೆ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಗೆ ಸೇರಿದ ಅವಲಹಳ್ಳಿ ಬಳಿ ಅಡ್ಡಗಟ್ಟಿ ವಶಕ್ಕೆ ಪಡೆದಿದ್ದಾರೆ. ಅಡ್ಡಾದಿಡ್ಡಿಯಾಗಿ ಜಟಕಾ ಬಂಡಿ ಚಾಲನೆ ಮಾಡುತ್ತಿದ್ದವರು ಬೆಂಗಳೂರಿನ ಗೋರಿಪಾಳ್ಯ ಹಾಗೂ ಕೆ.ಆರ್.ಪುರ ಮೂಲದವರು ಎಂದು ಗುರುತಿಸಲಾಗಿದ್ದು, ಅಟ್ಟೂರು ಬಳಿಯ ದರ್ಗಾಗೆ ಬಂದು ವಾಪಸ್ ತೆರಳುತ್ತಿದ್ದರು ಎನ್ನಲಾಗಿದೆ.
ಆದರೆ ವಾಪಸ್ ತೆರಳುವಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಜಟಕಾ ಬಂಡಿ ಚಾಲನೆ ಮಾಡುತ್ತಾ ಹೆದ್ದಾರಿಯಲ್ಲಿ ಸಾಗುವ ವಾಹನಗಳಿಗೆ ತೊಂದರೆ ನೀಡುತ್ತಿದ್ದರು. ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ಲಾಗಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ಸಂಚಾರಿ ಪೊಲೀಸರು ಜಟಕಾಬಂಡಿಯನ್ನು ವಶಕ್ಕೆ ಪಡೆದು 281/285 ಬಿಎನ್‌ಎಸ್, 184 ಇಮೇಜ್ ಆಕ್ಟ್‌ನಡಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ಸಂಚಾರ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀಕಂಠಯ್ಯ ತಿಳಿಸಿದ್ದಾರೆ.