ಸಾರಾಂಶ
ಸರಕಾರಿ ಶಾಲೆ ಅಭಿವೃದ್ಧಿಪಡಿಸಿ ದಾಖಲಾತಿ ಹೆಚ್ಚಿಸುವ ಉದ್ದೇಶದಿಂದ ತಾಲೂಕಿನಲ್ಲಿ ದಾಖಲಾತಿ ಆಂದೋಲನ ನಡೆಸಿ ಜನರು, ಪೋಷಕರಿಗೆ ಅರಿವು ಮೂಡಿಸಲಾಗುತ್ತಿದೆ .
ಕನ್ನಡಪ್ರಭ ವಾರ್ತೆ ಪಾಂಡವಪುರ
ಸರಕಾರಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವ ಉದ್ದೇಶದಿಂದ ತಾಲೂಕಿನ ಡಿಂಕಾಶೆಟ್ಟಹಳ್ಳಿ ಶಾಲೆ ಮುಖ್ಯಶಿಕ್ಷಕ ಎಚ್.ಸಿ.ಚನ್ನಕೇಶು ಮಕ್ಕಳೊಂದಿಗೆ ಜಾಥಾ ನಡೆಸಿ ವಿಶೇಷ ದಾಖಲಾತಿ ಆಂದೋಲನ ನಡೆಸಿದರು.ಜಾಥಾ ಆಂದೋಲನಕ್ಕೆ ಬಿಇಒ ರವಿಕುಮಾರ್ ಚಾಲನೆ ನೀಡಿ, ಸರಕಾರಿ ಶಾಲೆ ವಿದ್ಯಾರ್ಥಿಗಳಿಗೆ ಸರಕಾರದಿಂದ ಸಿಗುವ ಸೌಲಭ್ಯಗಳ ಕುರಿತ ಕರಪತ್ರ ಬಿಡುಗಡೆ ಮಾಡಿದರು. ನಂತರ ವಾಹನದ ಹಾಗೂ ಶಾಲಾ ಮಕ್ಕಳ ಜಾಥಾವು ಗ್ರಾಮದ ಪ್ರತಿ ಬೀದಿಯಲ್ಲೂ ಸಂಚರಿಸುವ ಮೂಲಕ ಮನೆಮನೆಗಳಿಗೆ ತೆರಳಿ ಪೋಷಕರಿಗೆ ಅರಿವು ಮೂಡಿಸಿ, ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ದಾಖಲಿಸುವಂತೆ ಮನವಿ ಮಾಡಿದರು.
ಸರಕಾರಿ ಶಾಲೆ ಅಭಿವೃದ್ಧಿಪಡಿಸಿ ದಾಖಲಾತಿ ಹೆಚ್ಚಿಸುವ ಉದ್ದೇಶದಿಂದ ತಾಲೂಕಿನಲ್ಲಿ ದಾಖಲಾತಿ ಆಂದೋಲನ ನಡೆಸಿ ಜನರು, ಪೋಷಕರಿಗೆ ಅರಿವು ಮೂಡಿಸಲಾಗುತ್ತಿದೆ ಎಂದರು.ಮಕ್ಕಳಿಗೆ ಸಮವಸ್ತ್ರ, ಶೂ, ಮಕ್ಕಳಿಗೆ ಬಿಸಿಯೂಟ, ಮೊಟ್ಟೆ, ಹಾಲು, ರಾಗಿಮಾಲ್ಟ್ ಸೇರಿದಂತೆ ಸೌಲಭ್ಯಗಳನ್ನು ನೀಡುತ್ತಿದ್ದೇವೆ. ಶಾಲೆಗಳನ್ನು ಬಲವರ್ಧನೆಗೊಳಿಸಲು ಎಲ್ಲಾ ರೀತಿಯ ಕ್ರಮವಹಿಸಲಾಗಿದೆ. ಪೋಷಕರು ಖಾಸಗಿ ಶಾಲೆಗಳ ಮೇಲಿರುವ ವ್ಯಾಮೋಹವನ್ನು ಬಿಟ್ಟು ಸರಕಾರಿ ಶಾಲೆಗೆ ದಾಖಲಿಸಬೇಕೆಂದು ಮನವಿ ಮಾಡಿದರು.
ಬಿಆರ್‌ಸಿ ಪ್ರಕಾಶ್ ಮಾತನಾಡಿದರು. ಮುಖ್ಯಶಿಕ್ಷಕ ಎಚ್.ಸಿ.ಚನ್ನಕೇಶು, ಎಸ್‌ಡಿಎಂಸಿ ಅಧ್ಯಕ್ಷ ಮಹದೇವಪ್ಪ, ಸಿಆರ್‌ಪಿಗಳಾದ ತ್ಯಾಗರಾಜು, ರಾಘವೇಂದ್ರ, ಸಹ ಶಿಕ್ಷಕಿ ಸರಿತ, ರಾಣಿ, ಗ್ರಾಪಂ ಸದಸ್ಯ ಜಯರಾಮು, ಮುಖಂಡರಾದ ಕೆಂಪಣ್ಣ ಸೇರಿದಂತೆ ಹಲವರು ಇದ್ದರು.