ಪೋಲಿಯೋ ಮುಕ್ತ ರಾಷ್ಟ್ರಕ್ಕಾಗಿ ರೋಟರಿ ಸಂಸ್ಥೆಯಿಂದ ಜಾಥಾ

| Published : Oct 26 2024, 12:53 AM IST

ಸಾರಾಂಶ

ಭಾರತೀನಗರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳೊಂದಿಗೆ ರೋಟರಿ ಸಂಸ್ಥೆ ಪದಾಧಿಕಾರಿಗಳು ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡಬೇಕೆಂದು ಘೋಷಣೆ ಕೂಗಿ ಜಾಥಾ ನಡೆಸಿದರು.

ಕನ್ನಡಪ್ರಭ ವಾರ್ತೆ ಭಾರತೀನಗರ

ಭಾರತದಲ್ಲಿ ಪೋಲಿಯೋ ಮುಕ್ತ ರಾಷ್ಟ್ರವನ್ನಾಗಿ ಮಾಡಲು ಪ್ರತಿಯೊಬ್ಬರು ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ರೋಟರಿ ಅಧ್ಯಕ್ಷ ಶಶಿಕುಮಾರ್ ತಿಳಿಸಿದರು.

ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳೊಂದಿಗೆ ರೋಟರಿ ಸಂಸ್ಥೆ ಪದಾಧಿಕಾರಿಗಳು ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡಬೇಕೆಂದು ಘೋಷಣೆ ಕೂಗಿ ಜಾಥಾ ನಡೆಸಿದರು.

ಈ ವೇಳೆ ರೋಟರಿ ಮಾಜಿ ಅಧ್ಯಕ್ಷ ಬಿ.ವಿ.ಮಧುಸೂಧನ್, ಶಿವರಾಮೇಗೌಡ, ನಂದೀಶ್, ಆರೋಗ್ಯ ಇಲಾಖೆಯ ರಾಧ, ಶಿವರಾಜು, ಮುಖ್ಯಶಿಕ್ಷಕಿ ಸುನೀತ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.ನಾಳೆ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ವಿತರಣೆ

ಮದ್ದೂರು: ಪಟ್ಟಣದ ಎಚ್.ಕೆ.ವೀರಣ್ಣಗೌಡ ಪದವಿ ಕಾಲೇಜಿನಲ್ಲಿ ಅ.26 ರಂದು ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕಾಲೇಜಿನಲ್ಲಿ ಬೆಳಗ್ಗೆ 10.30ಕ್ಕೆ ನಡೆಯುವ ಸಮಾರಂಭವನ್ನು ಹೈಕೋರ್ಟಿನ ನ್ಯಾಯಮೂರ್ತಿ ಟಿ.ಜಿ.ಶಿವಶಂಕರಗೌಡ ಉದ್ಘಾಟಿಸಲಿದ್ದಾರೆ. ಹೈಕೋರ್ಟ್ ಮತ್ತೋರ್ವ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಪದವಿ ಪೂರ್ಣ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ, ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಚನ್ನೇಗೌಡ ವಿದ್ಯಾ ಸಂಸ್ಥೆ ಗೌರವಾಧ್ಯಕ್ಷ ಕೆ.ಟಿ.ಚಂದು ಭಾಗವಹಿಸುವರು. ವಿದ್ಯಾ ಸಂಸ್ಥೆ ಅಧ್ಯಕ್ಷ ಎಂ.ಸ್ವರೂಪ ಚಂದು, ಕಾರ್ಯದರ್ಶಿಅಪೂರ್ವ ಚಂದ್ರ, ಖಜಾಂಚಿ ಜಿ.ಎಸ್. ಶಿವರಾಮು, ಪಾಲ್ಗೊಳ್ಳಲಿದ್ದಾರೆ ಎಂದು ಪ್ರಾಂಶುಪಾಲ ಜಿ.ಎಸ್.ಶಂಕರೇಗೌಡ ತಿಳಿಸಿದ್ದಾರೆ.ಅ.28 ರಂದು ಪೂರ್ವಭಾವಿ ಸಭೆ

ಮಳವಳ್ಳಿ: ಪಟ್ಟಣದಲ್ಲಿ ನ.1ರಂದು ನಡೆಯಲಿರುವ ಕನ್ನಡ ರಾಜೋತ್ಸವ ಆಚರಣೆ ಸಂಬಂಧ ತಾಪಂ ಸಭಾಂಗಣದಲ್ಲಿ ಅ.28ರಂದು ಪೂರ್ವಭಾವಿ ಸಭೆ ಕರೆಯಲಾಗಿದೆ. ಸೋಮವಾರ ಬೆಳಗ್ಗೆ 11ಗಂಟೆಗೆ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ನಡೆಯುವ ಸಭೆಗೆ ಎಲ್ಲ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಜರಾಗಿ ಸಲಹೆ-ಸೂಚನೆಗಳನ್ನು ನೀಡಬೇಕು ಎಂದು ಪ್ರಭಾರ ತಹಸೀಲ್ದಾರ್ ಬಿ.ವಿ.ಕುಮಾರ್ ತಿಳಿಸಿದ್ದಾರೆ.