ಸಾರಾಂಶ
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ, ಅರ್ಚಕ ಶ್ರೀಪತಿ ಉಪಾಧ್ಯಾಯ, ನರಸಿಂಹ ಭಟ್ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ, ಮಹಾಪೂಜೆ ನಡೆಯಿತು.
ಕನ್ನಡಪ್ರಭ ವಾರ್ತೆ ಮೂಲ್ಕಿ
ಮೂಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಭಾನುವಾರ ದೇವಳದಲ್ಲಿ ಧ್ವಜಾರೋಹಣ ಹಾಗೂ ಶ್ರೀದೇವಿ ಮತ್ತು ಸಸಿಹಿತ್ಲು ಶ್ರೀ ಭಗವತಿಯರ ಭೇಟಿ ನಡೆಯಿತು.ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ, ಅರ್ಚಕ ಶ್ರೀಪತಿ ಉಪಾಧ್ಯಾಯ, ನರಸಿಂಹ ಭಟ್ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ, ಮಹಾಪೂಜೆ, ಹಾಗೂ ಶ್ರೀ ದೇವರ ಧ್ವಜಾರೋಹಣ ನಡೆದು ಬಳಿಕ ಶ್ರೀದೇವಿ ಮತ್ತು ಸಸಿಹಿತ್ಲು ಶ್ರೀ ಭಗವತಿಯರ ಭೇಟಿ, ಮಹಾ ಅನ್ನಸಂತರ್ಪಣೆ , ರಾತ್ರಿ ಶ್ರೀ ದೇವರ ಉತ್ಸವ ಬಲಿ ನಡೆಯಿತು.
ಕ್ಷೇತ್ರದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸರು, ಆಡಳಿತ ಮೊಕ್ತೇಸರ ಎನ್.ಎಸ್. ಮನೋಹರ ಶೆಟ್ಟಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಮಲ್ಲಿಕಾ ಪಕ್ಕಳ ಮಲಾರ ಬೀಡು, ದೇವಳದ ಕಾರ್ಯನಿರ್ವಣಾಧಿಕಾರಿ ಜಯಮ್ಮ, ಅತ್ತೂರು ಬೈಲು ರಾಘವೇಂದ್ರ ಉಡುಪ, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ವೇ.ಮೂ. ವಾದಿರಾಜ ಉಪಾಧ್ಯಾಯ ಕೊಲಕಾಡಿ, ಮಾಜಿ ಸಚಿವ ಅಭಯಚಂದ್ರ ಜೈನ್, ಶ್ರೀ ವೆಂಕಟರಮಣ ದೇವಸ್ಥಾನದ ಮೊಕ್ತೇಸರ ಅತುಲ್ ಕುಡ್ವ, ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಅಪ್ಪು ಯಾನೆ ಶ್ರೀನಿವಾಸ ಪೂಜಾರಿ, ಡಾ. ಹರೀಶ್ಚಂದ್ರ ಪಿ. ಸಾಲ್ಯಾನ್, ಶಿವಶಂಕರ್ ಮತ್ತಿತರರು ಇದ್ದರು.