ಸಾರಾಂಶ
ಮೂಡುಬಿದಿರೆ: ಇಲ್ಲಿನ ಶ್ರೀ ಗೋಪಾಲಕೃಷ್ಣ ದೇವಳದ ೧೦೯ನೇ ವರ್ಷದ ಮೊಸರು ಕುಡಿಕೆ ಉತ್ಸವ ಪ್ರಯುಕ್ತ ಜವನೆರ್ ಬೆದ್ರ ಫೌಂಡೇಶನ್ ಆಶ್ರಯದಲ್ಲಿ ಶನಿವಾರ ನಡೆದ ಬೆದ್ರದ ಕೃಷ್ಣೋತ್ಸವ ೨೦೨೫ ಕಾರ್ಯಕ್ರಮದಲ್ಲಿ ಡಾ.ಎಂ. ಮೋಹನ ಆಳ್ವ ಅವರಿಗೆ ೨೦೨೫ನೇ ಸಾಲಿನ ಕೃಷ್ಣೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕೆ.ಅಮರನಾಥ ಶೆಟ್ಟಿ ವೃತ್ತದ ಬಳಿ ವೇಣೂರು ಕೃಷ್ಣಯ್ಯ ವೇದಿಕೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ಪಟ್ಲ ಸತೀಶ್ ಶೆಟ್ಟಿ, ಸಂಗೀತ ನಿರ್ದೇಶಕ ಯಶವಂತ ಎಂ.ಜಿ., ನಟ ದೀಕ್ಷಿತ್ ಕೆ.ಅಂಡಿಂಜೆ, ನಟ ಯುವ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.ಶಾಸಕ ಉಮಾನಾಥ ಎ.ಕೋಟ್ಯಾನ್, ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್, ಗೋಪಾಲಕೃಷ್ಣ ದೇವಳದ ಆಡಳಿತ ಮೊಕ್ತೇಸರ ಗುರುಪ್ರಸಾದ್ ಹೊಳ್ಳ, ಪುರಸಭಾ ಸದಸ್ಯ ಪುರಂದರ ದೇವಾಡಿಗ, ವಕೀಲ ಶರತ್ ಶೆಟ್ಟಿ, ಕೆ.ಅಮರನಾಥ ಶೆಟ್ಟಿ ಫೌಂಡೇಶನ್‌ನ ಅಧ್ಯಕ್ಷೆ ಅಮರಶ್ರೀ ಶೆಟ್ಟಿ, ಮಕ್ಕಳ ತಜ್ಞ ಡಾ.ಮುರಳೀಕೃಷ್ಣ, ಬಿಜೆಪಿ ಮುಖಂಡ ಕೆ.ಪಿ ಜಗದೀಶ್ ಅಧಿಕಾರಿ, ಉದ್ಯಮಿ ಕೆ. ಶ್ರೀಪತಿ ಭಟ್, ರಾಜೇಂದ್ರ ಜೈನ್, ನಟ ಅಜಯ್ ಮುಖ್ಯ ಅತಿಥಿಯಾಗಿದ್ದರು.ಜವನೆರ್ ಬೆದ್ರ ಸ್ಥಾಪಕ ಅಮರ್ ಕೋಟೆ, ಟ್ರಸ್ಟ್ ಕಾರ್ಯದರ್ಶಿ ದಿನೇಶ್ ನಾಯ್ಕ್, ಟ್ರಸ್ಟಿ ರಂಜಿತ್ ಶೆಟ್ಟಿ, ಯುವ ಸಂಘಟನೆಯ ಸಂಚಾಲಕ ನಾರಾಯಣ ಪಡುಮಲೆ, ಸಂಘಟನಾ ಗುರುಪ್ರಸಾದ್ ಪೂಜಾರಿ, ಪ್ರಮುಖರಾದ ಸಂದೀಪ್ ಕೆಲ್ಲಪುತ್ತಿಗೆ, ರಾಜೇಶ್ ಮತ್ತಿತರರಿದ್ದರು.ಮಂಗಳೂರಿನ ಜರ್ನಿ ಥೇಟರ್ ಗ್ರೂಪ್‌ನಿಂದ ರಂಗ ಸಂಗೀತ ಹಾಗೂ ಜನಪದ ಗೀತೆ ಕಾರ್ಯಕ್ರಮ ನಡೆಯಿತು.