ಜವಾಹರಲಾಲ್ ನೆಹರು ಜಯಂತಿ ಆಚರಣೆ

| Published : Nov 15 2024, 12:32 AM IST

ಸಾರಾಂಶ

ಚಾಮರಾನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಜಯಂತಿಯನ್ನು ಆಚರಣೆ ಮಾಡಲಾಯಿತು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಜಯಂತಿಯನ್ನು ಆಚರಣೆ ಮಾಡಲಾಯಿತು.

ಶಾಸಕ ಸಿ.ಪುಟ್ಟರಂಗಶೆಟ್ಟಿ ನೆಹರು ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರೆವೇರಿಸಿ ಮಾತನಾಡಿ, ದೇಶದ ಪ್ರಥಮ ಪ್ರಧಾನಿ ನೆಹರು ಅವರ ಕೊಡುಗೆ ಅಪಾರವಾಗಿದೆ. ನೆಹರು ಅವರು ನವೆಂಬರ್ ೧೪, ೧೮೮೯ರಂದು ಜನಿಸಿದ್ದು, ಅವರಿಗೆ ಮಕ್ಕಳು ಎಂದರೆ ಅಚ್ಚು ಮೆಚ್ಚು. ಹೀಗಾಗಿ ಅವರ ಜನ್ಮ ದಿನವನ್ನು ಮಕ್ಕಳ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು. ಉತ್ತಮ ಆಡಳಿತ ನೀಡುವ ಜೊತೆಗೆ ದೇಶದ ಸಮಗ್ರ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿಕೊಟ್ಟರು. ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಳ್ಳುವ ಜೊತೆಗೆ ದೇಶದ ಪ್ರಧಾನಿಯಾಗಿ ಪ್ರಪಂಚವೇ ಮೆಚ್ಚುವಂತ ಆಡಳಿತ ನೀಡಿದರು, ಅವರ ತತ್ವ ಸಿದ್ಧಾಂತಗಳನ್ನು ನಮ್ಮ ಜೀವನದಲ್ಲಿ ಮೈಗೂಡಿಸಿಕೊಳ್ಳೋಣ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ದೇಶಕ್ಕಾಗಿ ಅನೇಕ ಮಹನೀಯರು ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದಾರೆ ಅವರಲ್ಲಿ ನೆಹರೂ ಕೂಡ ಒಬ್ಬರು. ನಮ್ಮ ದೇಶವನ್ನು ಲೂಟಿ ಮಾಡಿ, ಬಡತನದ ಕೂಪಕ್ಕೆ ಬ್ರೀಟಿಷರು ತಳ್ಳಿ ಹೋಗಿದ್ದರು. ಇಂಥ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ದೇಶದ ಚುಕ್ಕಾಣಿ ಹಿಡಿದು ಅಭಿವೃದ್ಧಿಗೆ ಆದ್ಯತೆ ನೀಡಿದವರು ನೆಹರು ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವ್, ಬ್ಲಾಕ್ ಕಾಂಗ್ರಸ್ ಅಧ್ಯಕ್ಷ ಗುರುಸ್ವಾಮಿ, ಮಹಮದ್ ಅಸ್ಗರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲತಾಜತ್ತಿ, ತಾಪಂ ಮಾಜಿ ಸದಸ್ಯರಾದ ಪಿ.ಕುಮಾರನಾಯಕ್, ನಾಗವಳ್ಳಿ ನಾಗಯ್ಯ, ಮಹದೇವಯ್ಯ, ನಗರಸಭೆ ಸದಸ್ಯ ಚಿನ್ನಮ್ಮ, ಮಾದಲಾಂಬಿಕೆ, ಕಾವೇರಿ ಶಿವಕುಮಾರ್, ಪುಟ್ಟಸ್ವಾಮಿ, ಸೈಯದ್ ರಫಿ, ಎಎಚ್‌ಎನ್ ಖಾನ್ ಇದ್ದರು.