4ನೇ ದಿನಕ್ಕೆ ಕಾಲಿಟ್ಟ ಜಯ ಕರ್ನಾಟಕ ಪ್ರತಿಭಟನೆ

| Published : Dec 14 2024, 12:47 AM IST

ಸಾರಾಂಶ

ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಜಿಲ್ಲೆಯ ಎಲ್ಲಾ ಪಕ್ಷದ ಶಾಸಕರು ಹಾಗೂ ಸಂಸದರು ಒಗ್ಗಟ್ಟಿನಿಂದ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಗೌರವಾಧ್ಯಕ್ಷ ರವಿನಾಕಲಗೂಡು ಮತ್ತು ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಎಂ.ಕೆ.ಆರ್‌. ಸೋಮೇಶ್ ಕರೆ ನೀಡಿದರು. ಜೈ ಕರ್ನಾಟಕ ಸಂಘಟನೆ ರೈತ ಪರ ಕೆಲಸ ಮಾಡುತ್ತಿದ್ದು ಜಿಲ್ಲಾಡಳಿತ ಧರಣಿ ಸ್ಥಳಕ್ಕೆ ಭೇಟಿ ನೀಡಿ ಆನೆ ಹಾವಳಿಗೆ ಶಾಶ್ವತ ಪರಿಹಾರ ಒದಗಿಸಿ ನಿಟ್ಟಿನಲ್ಲಿ ಭರವಸೆ ನೀಡುವ ಕೆಲಸ ಮಾಡಲಿ ಎಂದು ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಜಿಲ್ಲೆಯ ಎಲ್ಲಾ ಪಕ್ಷದ ಶಾಸಕರು ಹಾಗೂ ಸಂಸದರು ಒಗ್ಗಟ್ಟಿನಿಂದ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಗೌರವಾಧ್ಯಕ್ಷ ರವಿನಾಕಲಗೂಡು ಮತ್ತು ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಎಂ.ಕೆ.ಆರ್‌. ಸೋಮೇಶ್ ಕರೆ ನೀಡಿದರು.

ನಗರದ ಹೇಮಾವತಿ ಪ್ರತಿಮೆ ಬಳಿ ಡಿಸೆಂಬರ್ ೧೦ರಿಂದ ನಡೆಯುತ್ತಿರುವ ಕಾಡಾನೆ ಹಾವಳಿ ಶಾಶ್ವತ ಪರಿಹಾರಕ್ಕಾಗಿ ನಿರಂತರ ಹೋರಾಟದ ನಾಲ್ಕನೇ ದಿವಸದಂದು ರವಿ ನಾಕಲಗೂಡು ಭಾಗವಹಿಸಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಾಡಾನೆ ಹಾವಳಿ ಹೆಚ್ಚಾಗಿರುವ ಮಲೆನಾಡು ಭಾಗದಲ್ಲಿ ರೈತರು ಕೂಲಿ ಕಾರ್ಮಿಕರು ರೈತರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಆದ್ದರಿಂದ ಜಾತ್ಯತೀತ ಹಾಗೂ ಪಕ್ಷಾತೀತವಾಗಿ ಕಾಡಾನೆ ಸಮಸ್ಯೆಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಮುಂದಾಗಬೇಕು. ಈ ಹಿಂದೆ ರೈತರು ಹಾಗೂ ಜಯ ಕರ್ನಾಟಕ ಸಂಘಟನೆಯಿಂದಲೂ ಹಲವಾರು ಹೋರಾಟ ಮಾಡಿದರು ಸರ್ಕಾರ ಗಮನಹರಿಸಿಲ್ಲ. ಆದ್ದರಿಂದ ಆನೆ ಹಾವಳಿಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿ ಧರಣಿ ಆರಂಭಿಸಿದ್ದಾರೆ.

ಜಿಲ್ಲೆಯಲ್ಲಿ ಹಲವಾರು ವರ್ಷಗಳಿಂದ ಆನೆ ಹಾವಳಿ ಹೆಚ್ಚಾಗಿದ್ದು ಬೆಳೆ ಹಾನಿ ಪ್ರಾಣ ಹಾನಿಯಾದಾಗ ಕೇವಲ ಇಂತಿಷ್ಟು ಪರಿಹಾರ ಕೊಟ್ಟು ಸರ್ಕಾರ ಕೈ ತೊಳೆದುಕೊಳ್ಳುತ್ತದೆ. ಆನೆ ಹಾವಳಿ ಇರುವ ಪ್ರದೇಶದಲ್ಲಿ ೪೦ ರಿಂದ ೫೦ ಆನೆಗಳು ಹಿಂಡು ಹಿಂಡಾಗಿ ಸಂಚರಿಸುತ್ತಿದ್ದು ಜೀವ ಭಯದಲ್ಲಿಯೇ ಇಲ್ಲಿನ ಗ್ರಾಮಸ್ಥರು ಕಾಲ ದೂಡುವಂತಾಗಿದೆ.

ಜೈ ಕರ್ನಾಟಕ ಸಂಘಟನೆ ರೈತ ಪರ ಕೆಲಸ ಮಾಡುತ್ತಿದ್ದು ಜಿಲ್ಲಾಡಳಿತ ಧರಣಿ ಸ್ಥಳಕ್ಕೆ ಭೇಟಿ ನೀಡಿ ಆನೆ ಹಾವಳಿಗೆ ಶಾಶ್ವತ ಪರಿಹಾರ ಒದಗಿಸಿ ನಿಟ್ಟಿನಲ್ಲಿ ಭರವಸೆ ನೀಡುವ ಕೆಲಸ ಮಾಡಲಿ ಎಂದು ಒತ್ತಾಯಿಸಿದರು.

ಬೇಲೂರು ಭಾಗದಲ್ಲಿ ಆನೆ ಹಾವಳಿ ವಿಪರೀತವಾಗಿದ್ದು ಶಾಲಾ ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು ಪರದಾಡುವಂತಾಗಿದೆ.ಪ್ರತಿನಿತ್ಯ ೩೦೦ ರಿಂದ ೪೦೦ ರೂ ಕೂಲಿಗೆ ತೆರಳಿದರೆ ಆನೆ ಹಾವಳಿಯ ಭಯದಲ್ಲಿಯೇ ಕೆಲಸ ಮಾಡುವ ಪರಿಸ್ಥಿತಿ ಉಂಟಾಗಿದೆ. ಇಷ್ಟು ದಿನ ಧರಣಿ ನಡೆಸಿದರು. ಜಿಲ್ಲಾಡಳಿತ ಅಥವಾ ಜನಪ್ರತಿನಿಧಿಗಳು ಸ್ಥಳಕ್ಕಾಗಮಿಸಿ ಕನಿಷ್ಠ ಭರವಸೆಯನ್ನು ಸಹ ನೀಡಿಲ್ಲ ಎಂದು ರೈತ ಮಹಿಳೆ ಸರೋಜಾ ಆರೋಪಿಸಿದರು. ಜಿಲ್ಲೆಯ ಶಾಸಕರು ಮತ್ತು ಸಂಸದರು ಇದರ ಬಗ್ಗೆ ಸೂಕ್ತ ಕ್ರಮ ಇದರ ಬಗ್ಗೆ ಗಮನಹರಿಸಿ ಆನೆ ಕಾರಿಡಾರ್‌ ಅಥವಾ ಆನೆ ನಿಯಂತ್ರಣಕ್ಕೆ ಸಂಬಂಧಿಸಿದ ಕ್ರಮಗಳ ಬಗ್ಗೆ ಶಾಶ್ವತ ಪರಿಹಾರದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಿಂದಿನಿಂದ ಕೂಲಿ ಕಾರ್ಮಿಕರು ಸಾರ್ವಜನಿಕರು ವಿದ್ಯಾರ್ಥಿಗಳು ಭಯದಲ್ಲಿ ಜೀವನ ಸಾಗಿಸಬೇಕಾಗಿದೆ. ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಕಾದ ಹನೆಗಳು, ಮಲೆನಾಡು ಮತ್ತು ಅರೆ ಮಲೆನಾಡು ಪ್ರದೇಶಗಳಾದ ಅರಸೀಕೆರೆ ಚನ್ನರಾಯಪಟ್ಟಣಕ್ಕೂ ಕೂಡ ಲಗ್ಗೆ ಇಡುವ ಸಾಧ್ಯತೆಗಳಿವೆ. ಜಿಲ್ಲೆಯ ಎಲ್ಲಾ ಶಾಸಕರು ಒಗ್ಗಟ್ಟಿನಿಂದ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಒತ್ತಾಯಿಸಿದರು.

ಬೆಳಗಾವಿ ಅಧಿವೇಶನ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಬೇಲೂರು ಶಾಸಕ ಎಚ್ ಕೆ ಸುರೇಶ್ ಅವರು, ಕಾಡಾನೆಯ ಬಗ್ಗೆ ಪ್ರಸ್ತಾಪ ಮಾಡಿದ್ದು, ಇದಕ್ಕೆ ಅರಣ್ಯ ಸಚಿವರು ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿರುವುದು ಸ್ವಾಗತ ಕೇವಲ ಭರವಸೆಯ ಮಾತುಗಳನ್ನ ನೀಡದೆ ಇದು ಕಾರ್ಯಗತಕ್ಕೆ ಬರಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಘಟಕದ ಅಧ್ಯಕ್ಷರಾದ ರಾಜು, ಮಂಜುನಾಥ್, ಸಂದೇಶ್, ಸುಮಾ, ಲಕ್ಷ್ಮಿ, ಸುಧಾ ಸೇರಿದಂತೆ ಇತರರು ಭಾಗವಹಿಸಿದ್ದರು.

----13ಎಚ್ಎಸ್ಎನ್15 : ಹೇಮಾವತಿ ಪ್ರತಿಮೆ ಎದುರು ಜಯ ಕರ್ನಾಟಕ ಸಂಘಟನೆಯಿಂದ ನಡೆಯುತ್ತಿರುವ ಪ್ರತಿಭಟನೆ.