ಜಯ ಕರ್ನಾಟಕದ 17 ದಿನದ ಹೋರಾಟ ಸಂಪನ್ನ

| Published : Nov 08 2024, 12:39 AM IST

ಸಾರಾಂಶ

ಕನ್ನಪ್ರಭ ವಾರ್ತೆ ವಿಜಯಪುರ ಜಿಲ್ಲೆಯ ವಿಮಾನ ನಿಲ್ದಾಣಕ್ಕೆ ವಿಶ್ವಗುರು ಬಸವೇಶ್ವರರ ಹೆಸರು ಹಾಗೂ ರೈಲು ನಿಲ್ದಾಣಕ್ಕೆ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಹೆಸರು ನಾಮಕರಣ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಕಳೆದ 17 ದಿನಗಳಿಂದ ಜಿಲ್ಲಾಧಿಕಾರಿ ಕಚೇರಿಗೆ ಎದುರು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಸಂಪನ್ನಗೊಂಡಿತು.

ಕನ್ನಪ್ರಭ ವಾರ್ತೆ ವಿಜಯಪುರ

ಜಿಲ್ಲೆಯ ವಿಮಾನ ನಿಲ್ದಾಣಕ್ಕೆ ವಿಶ್ವಗುರು ಬಸವೇಶ್ವರರ ಹೆಸರು ಹಾಗೂ ರೈಲು ನಿಲ್ದಾಣಕ್ಕೆ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಹೆಸರು ನಾಮಕರಣ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಕಳೆದ 17 ದಿನಗಳಿಂದ ಜಿಲ್ಲಾಧಿಕಾರಿ ಕಚೇರಿಗೆ ಎದುರು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಸಂಪನ್ನಗೊಂಡಿತು.

ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಧರಣಿ ಸ್ಥಳಕ್ಕೆ ಭೇಟಿ ನೀಡಿ, ನಿಮ್ಮ ಎಲ್ಲ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಮನವೊಲಿಸಿದ ಹಿನ್ನೆಲೆಯಲ್ಲಿ ಪ್ರತಿಭಟನಾನಿರತರು ಧರಣಿ ಹಿಂಪಡೆದರು.

ಈ ವೇಳೆ ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಸಂಗಮೇಶ ದಾಶ್ಯಾಳ, ಪಿಂಟು ಗೊಬ್ಬುರ, ಆನಂದ ಹುನ್ನುರ, ಮುಖಾದ್ದಾಸ ಇನಾಮದಾರ, ಶಿವಗಂಗಾ ಕಟ್ಟಿಮನಿ, ಸುಜಾತಾ ಪೂಜಾರಿ, ಮಲ್ಲಮ್ಮ ಲಮಾಣಿ, ಶಕೀಲ ಮುಲ್ಲಾ, ಗೊಲ್ಲಾಳಗೌಡ ಪಾಟೀಲ, ವಿರೇಶ ಪಾಟೀಲ, ಉಮೇಶ ಚಲವಾದಿ, ಸಿದ್ದಾರಾಮ ಅವಟಿ ಹಾಗೂ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.