ನೊಣವಿನಕೆರೆ ಗ್ರಾಪಂ ಅಧ್ಯಕ್ಷರಾಗಿ ಜಯಮ್ಮ ಆಯ್ಕೆ

| Published : Dec 17 2024, 12:46 AM IST

ಸಾರಾಂಶ

ತಿಪಟೂರು : ತಾಲೂಕಿನ ನೊಣವಿನಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಆಲ್ಬೂರು ಗ್ರಾಮದ ಜಯಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ತಿಪಟೂರು : ತಾಲೂಕಿನ ನೊಣವಿನಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಆಲ್ಬೂರು ಗ್ರಾಮದ ಜಯಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನೂತನ ಅಧ್ಯಕ್ಷೆ ಜಯಮ್ಮ ಪತ್ರಿಕೆಯೊಂದಿಗೆ ಮಾತನಾಡಿ, ಗ್ರಾಮಗಳ ಅಭಿವೃದ್ಧಿ ಗ್ರಾಮ ಪಂಚಾಯಿತಿಯ ಜವಾಬ್ದಾರಿಯಾಗಿದ್ದು, ನಿಮ್ಮೆಲ್ಲರ ಸಹಕಾರ, ಪ್ರೋತ್ಸಾಹದಿಂದ ನನ್ನನ್ನು ಅಧ್ಯಕ್ಷರನ್ನಾಗಿ ಆಯ್ಕೆಮಾಡಿದ್ದು ಉತ್ತಮ ಆಡಳಿತ ನೀಡುವ ಮೂಲಕ ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ಮಾಡುತ್ತೇನೆ. ಈ ವ್ಯಾಪ್ತಿಗೆ ಬರುವ ಗ್ರಾಮಗಳ ಚರಂಡಿ, ರಸ್ತೆ, ಬೀದಿ ದೀಪ, ಕುಡಿಯುವ ನೀರು, ಸ್ವಚ್ಚತೆ ಸೇರಿದಂತೆ ಜನರಿಗೆ ಬೇಕಾದ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುತ್ತೇನೆ. ಸರ್ಕಾರದಿಂದ ಬರುವ ಯೋಜನೆಗಳನ್ನು ಅರ್ಹರಿಗೆ ತಲುಪಿಸುವ ಮೂಲಕ ಉತ್ತಮ ಆಡಳಿತ ನೀಡುವುದಾಗಿ ತಿಳಿಸಿದರು. ನೂತನ ಅಧ್ಯಕ್ಷರಿಗೆ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ. ಚುನಾವಣಾಧಿಕಾರಿಯಾಗಿ ಗ್ರೇಡ್-೨ ತಹಸಿಲ್ದಾರ್ ಜಗನ್ನಾಥ್ ಕಾರ್ಯನಿರ್ವಹಿಸಿದರು.