ವಾಲ್ಮೀಕಿ ಮೌಲ್ಯಗಳನ್ನು ಪಾಲಿಸಿದರೆ ಜಯಂತಿ ಸಾರ್ಥಕ: ಡಾ.ಪ್ರತಿಭಾ ಆರ್.

| Published : Oct 18 2024, 12:21 AM IST

ವಾಲ್ಮೀಕಿ ಮೌಲ್ಯಗಳನ್ನು ಪಾಲಿಸಿದರೆ ಜಯಂತಿ ಸಾರ್ಥಕ: ಡಾ.ಪ್ರತಿಭಾ ಆರ್.
Share this Article
  • FB
  • TW
  • Linkdin
  • Email

ಸಾರಾಂಶ

ಕಾಪು ತಹಸೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ತಾಲೂಕು ಮಟ್ಟದ ಶ್ರೀ ವಾಲ್ಮೀಕಿ ಜಯಂತಿ ಕಾರ್ಯಕ್ರಮ ನಡೆಯಿತು. ತಾಲೂಕು ಮಟ್ಟದ ಶ್ರೀ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಇಸಿದರು.

ಕನ್ನಡಪ್ರಭ ವಾರ್ತೆ ಕಾಪುಶ್ರೀ ಮಹರ್ಷಿ ವಾಲ್ಮೀಕಿ ಅವರಂತೆ ಮನಃ ಪರಿವರ್ತನೆ ಮಾಡಿಕೊಂಡು ಸದ್ಗಗುಣವಂತರಾಗಲು ಪ್ರಯತ್ನಿಸಿದರೆ ಎಲ್ಲರಿಗೂ ಸಾಧ್ಯವಿದೆ. ಜಗತ್ತಿನ ಪ್ರಥಮ ಕಾವ್ಯ ರಚನೆಕಾರರಾದ ವಾಲ್ಮೀಕಿ ಅವರ ಹಿರಿಮೆ ಎಂದೆಂದಿಗೂ ಅವಿಸ್ಮರಣೀಯ ಎಂದು ಕಾಪು ತಾಲೂಕು ತಹಸೀಲ್ದಾರ್ ಡಾ. ಪ್ರತಿಭಾ ಆರ್. ಹೇಳಿದರು.ಅವರು ಗುರುವಾರ ಕಾಪು ತಹಸೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾಪು ತಾಲೂಕು ಮಟ್ಟದ ಶ್ರೀ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ವಾಲ್ಮೀಕಿ ಅವರಂತಹ ಮಹಾನ್ ವ್ಯಕ್ತಿಯ ಜಯಂತಿ ಆಚರಣೆ ಸಾರ್ಥಕತೆ ಹೊಂದಬೇಕಾದರೆ ಅವರು ರಾಮಾಯಣದ ಮೂಲಕ ನೀಡಿರುವ ಪಿತೃ ವಾಕ್ಯ ಪರಿಪಾಲನೆ, ಪಿತೃ ದೇವೋಭವ, ಮಮತೆ, ಸಮತೆ, ಭ್ರಾತೃತ್ವ, ತ್ಯಾಗ, ದೇಶಪ್ರೇಮ, ಅಳಿಲು ಸೇವೆ ಮುಂತಾದ ಮಾನವೀಯ ಮತ್ತು ಸಾಮಾಜಿಕ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇಂದಿನ ಯುವ ಜನತೆಗೆ ಒಳ್ಳೆಯ ಹಾದಿಯಲ್ಲಿ ನಡೆಯಲು ಅದ್ಭುತ ಸಂದೇಶವನ್ನು ಮಹರ್ಷಿ ನೀಡಿದ್ದಾರೆ ಎಂದು ಹೇಳಿದರು.ಇದಕ್ಕೆ ಮೊದಲು ವಾಲ್ಮೀಕಿ ಮಹರ್ಷಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕಾಪು ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಬಸವರಾಜು, ಉಪ ತಹಸೀಲ್ದಾರ್‌ಗಳಾದ ರವಿಕಿರಣ್, ದೇವಕಿ, ಅಶೋಕ್ ಕೋಟೆಕಾರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.