ಕನ್ನಡ ಪ್ರಭ ವಾರ್ತೆ ಮುಧೋಳ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರ ಮುಧೋಳದ ಗೃಹ ಕಚೇರಿಯಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನೋತ್ಸವವನ್ನು ಸರಳವಾಗಿ ಆಚರಿಸಲಾಯಿತು. ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿ ಮಾತನಾಡಿದ ಲೋಕಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕಿವಡಿ,

ಕನ್ನಡ ಪ್ರಭ ವಾರ್ತೆ ಮುಧೋಳ

ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರ ಮುಧೋಳದ ಗೃಹ ಕಚೇರಿಯಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನೋತ್ಸವವನ್ನು ಸರಳವಾಗಿ ಆಚರಿಸಲಾಯಿತು.

ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿ ಮಾತನಾಡಿದ ಲೋಕಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕಿವಡಿ, ಸಂವಿಧಾನದ ಮೌಲ್ಯಗಳು ಮತ್ತು ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯದ ಚಿಂತನೆಗಳನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ನಗರ ಅಧ್ಯಕ್ಷ ರಾಘು ಮೊಕಾಶಿ, ಹಣಮಂತ ಬಿ. ತಿಮ್ಮಾಪುರ, ಪ್ರಮುಖರಾದ ಪ್ರಕಾಶ ತಳಗೇರಿ, ಸದಾಶಿವ ಮೇತ್ರಿ, ಕಾಂಗ್ರೆಸ್ ಪಕ್ಷದ ಪ್ರಮುಖ ಕಾರ್ಯಕರ್ತರು ಮತ್ತು ಮುಖಂಡರು ಪಾಲ್ಗೊಂಡು ಸಂವಿಧಾನ ಶಿಲ್ಪಿಗೆ ನಮನ ಸಲ್ಲಿಸಿದರು.------------