ಸಾರಾಂಶ
ಗಣರಾಜ್ಯೋತ್ಸವ ದಿನದಂದು ಬೆಳಗ್ಗೆ ೯ ಗಂಟೆಗೆ ನಗರಸಭೆ ಮೈದಾನದಲ್ಲಿ ಕೆಜಿಎಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂಧ ಧ್ವಜರೋಹಣ, ನಂತರ ಪಥಸಚಲನ, ಕರ‍್ಯಕ್ರಮದಲ್ಲಿ ಪೊಲೀಸ್ ಪಡೆಗಳು, ಗೃಹರಕ್ಷಕ ದಳ, ಸ್ಕೌಟ್ಸ್ ಅಂಡ್ ಗೈಡ್ಸ್, ಎನ್‌ಸಿಸಿ ಕೆಡೆಟ್‌ಗಳನ್ನು ಅಹ್ವಾನಿಸಲು ಸೂಚಿಸಲಾಯಿತು
ಕನ್ನಡಪ್ರಭ ವಾರ್ತೆ ಕೆಜಿಎಫ್ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ಆಚರಿಸಲಾಗುವ ಮಹಾನ್ ವ್ಯಕ್ತಿಗಳ ಜಯಂತಿಗಳು ಕೇವಲ ಆಯಾ ಜಾತಿ, ಜನಾಂಗ ಮತ್ತು ಧರ್ಮಗಳಿಗೆ ಸೀಮಿತವಾಗಿರುವುದಿಲ್ಲ, ದಾರ್ಶನಿಕರು ನೀಡಿರುವ ಸಂದೇಶಗಳು ಸಾರ್ವಕಾಲಿಕವಾಗಿದ್ದು, ಸರ್ವ ಧರ್ಮಗಳಿಗೂ ಪ್ರಸ್ತುತವಾಗಿವೆ ಎಂದು ಶಾಸಕಿ ರೂಪಕಲಾ ಶಶಿಧರ್ ತಿಳಿಸಿದರು.ತಾಲೂಕು ಆಡಳಿತ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂಬಿಗರ ಚೌಡಯ್ಯ ಜಯಂತಿ, ಗಣರಾಜ್ಯೋತ್ಸವ ಕಾರ್ಯಕ್ರಮಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಪ್ರತಿ ವರ್ಷದಂತೆ ಈ ಬಾರಿ ಮಹನೀಯರ ಜಯಂತಿಗಳನ್ನು ವಿಜೃಂಭಣೆಯಿಂದ ನಡೆಸಲಾಗುವುದು ಎಂದರು. ನಗರಸಭೆ ಮೈದಾನದಲ್ಲಿ ಕಾರ್ಯಕ್ರಮ
ಗಣರಾಜ್ಯೋತ್ಸವ ದಿನದಂದು ಬೆಳಗ್ಗೆ ೯ ಗಂಟೆಗೆ ನಗರಸಭೆ ಮೈದಾನದಲ್ಲಿ ಕೆಜಿಎಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂಧ ಧ್ವಜರೋಹಣ, ನಂತರ ಪಥಸಚಲನ, ಕರ‍್ಯಕ್ರಮದಲ್ಲಿ ಪೊಲೀಸ್ ಪಡೆಗಳು, ಗೃಹರಕ್ಷಕ ದಳ, ಸ್ಕೌಟ್ಸ್ ಅಂಡ್ ಗೈಡ್ಸ್, ಎನ್‌ಸಿಸಿ ಕೆಡೆಟ್‌ಗಳನ್ನು ಅಹ್ವಾನಿಸಲು ಸೂಚಿಸಲಾಯಿತು. ಧ್ವಜಾರೋಹಣ ವ್ಯವಸ್ಥೆ ಮಾಡಲು ಪೊಲೀಸ್ ಇಲಾಖೆ, ತಹಶೀಲ್ದಾರ್ ಹಾಗೂ ಕ್ರೀಡಾಧಿಕಾರಿಗಳಿಗೆ ವಹಿಸಲಾಯಿತು. ಕರ‍್ಯಕ್ರಮಗಳ ಸಿದ್ದತೆಗೆ ಸಮಿತಿಗಳನ್ನು ರಚಿಸಲಾಗಿದ್ದು ಪೂರ್ವ ತಯಾರಿಗಾಗಿ ಉಪ ಸಮಿತಿಗಳ ಸಭೆ ಕರೆದು ಬೇಕಾಗುವ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲು ಸಭೆಯಲ್ಲಿ ಸೂಚಿಸಿದರು.ಕ್ರೀಡಾಂಗಣದಲ್ಲಿ ವೇದಿಕೆ ನಿರ್ಮಾಣ, ಗಣ್ಯರು, ಶಾಸಕರು ಹಾಗೂ ಪತ್ರಕರ್ತರಿಗೆ ಸೂಕ್ತ ಆಸನಗಳ ವ್ಯವಸ್ಥೆ, ದ್ವನಿವರ್ಧಕ ಹಾಗೂ ಜನರೇಟರ್ ವ್ಯವಸ್ಥೆ ಕೈಗೊಳ್ಳಲು ಲೋಕೊಪಯೋಗಿ ಇಲಾಖೆ, ಸಾರಿಗೆ ಇಲಾಖೆ, ಅಧಿಕಾರಿಗಳಿಗೆ ಸೂಚನೆ ನೀಡಿದರು. ಕ್ರೀಡಾಂಗಣದಲ್ಲಿ ಆಸನ ವ್ಯವಸ್ಥೆಯನ್ನು ನಗರಸಭೆ ಮತ್ತು ತಾಲೂಕು ಪಂಚಾಯಿತಿ ಹಾಗೂ ಇತರೆ ಅಧಿಕಾರಿಗಳಿಗೆ ಸೂಚಿಸಿದರು.ಸಭೆಯಲ್ಲಿ ತಹಶೀಲ್ದಾರ್ ನಾಗವೇಣಿ, ಇ.ಓ.ಮಂಜುನಾಥ ಹರ್ತಿ, ಬಿಇಒ ಸಯಿದಾ ಬಾನು, ಸಿಡಿಪಿಓ ರಾಜೇಶ್, ವೃತ್ತ ನೀರಿಕ್ಷಕ ಮಾರ್ಕೊಂಡಯ್ಯ, ಉಪ ನೊಂದಣಾಧಿಕಾರಿ ಗಿರೀಶ್, ಸರಕಾರಿ ನೌಕರರ ಸಂಘದ ಅಧ್ಯಕ್ಷ ನರಸಿಂಹಮೂರ್ತಿ ಮೊದಲಾದವರು ಭಾಗವಹಿಸಿದ್ದರು.