ನಾಳೆಯಿಂದ ಗಾನಯೋಗಿ ಗವಾಯಿಗಳ ಜಯಂತ್ಯುತ್ಸವ

| Published : Feb 21 2025, 12:46 AM IST

ಸಾರಾಂಶ

ಗಾನಯೋಗಿ ಪಂಡಿತ ಪಂಚಾಕ್ಷರ ಗವಾಯಿಗಳವರ ಜಯಂತ್ಯುತ್ಸವದ ಅಂಗವಾಗಿ ಫೆ.22 ಮತ್ತು 23 ರಂದು ಚಿತ್ರದುರ್ಗದ ತರಾಸು ರಂಗಮಂದಿರದಲ್ಲಿ ಪ್ರಥಮ ಬಾರಿಗೆ ಸರಿಗಮ ಸಂಗೀತ ನಾಯಕೋತ್ಸವ ಆಯೋಜಿಸಲಾಗಿದೆ. ಗದಗದ ಕುಮಾರೇಶ್ವರ ಕೃಪಾ ಪೋಷಿತ ಪಂಡಿತ ಪಂಚಾಕ್ಷರ ಗವಾಯಿಗಳವರ ನಾಟ್ಯ ಸಂಘದ ಕಲಾವಿದರು ಸಂಗೀತ ನಾಟಕ ಪ್ರದರ್ಶನ ಮಾಡಲಿದ್ದಾರೆ ಎಂದು ನಾಟಕೋತ್ಸವ ಸಮಿತಿ ಕಾರ್ಯದರ್ಶಿ ಸುಜೀತ ಕುಲಕರ್ಣಿ ತಿಳಿಸಿದರು

ಕನ್ನಡಪ್ರಭ ವಾರ್ತೆ, ಚಿತ್ರದುರ್ಗ ಗಾನಯೋಗಿ ಪಂಡಿತ ಪಂಚಾಕ್ಷರ ಗವಾಯಿಗಳವರ ಜಯಂತ್ಯುತ್ಸವದ ಅಂಗವಾಗಿ ಫೆ.22 ಮತ್ತು 23 ರಂದು ಚಿತ್ರದುರ್ಗದ ತರಾಸು ರಂಗಮಂದಿರದಲ್ಲಿ ಪ್ರಥಮ ಬಾರಿಗೆ ಸರಿಗಮ ಸಂಗೀತ ನಾಯಕೋತ್ಸವ ಆಯೋಜಿಸಲಾಗಿದೆ. ಗದಗದ ಕುಮಾರೇಶ್ವರ ಕೃಪಾ ಪೋಷಿತ ಪಂಡಿತ ಪಂಚಾಕ್ಷರ ಗವಾಯಿಗಳವರ ನಾಟ್ಯ ಸಂಘದ ಕಲಾವಿದರು ಸಂಗೀತ ನಾಟಕ ಪ್ರದರ್ಶನ ಮಾಡಲಿದ್ದಾರೆ ಎಂದು ನಾಟಕೋತ್ಸವ ಸಮಿತಿ ಕಾರ್ಯದರ್ಶಿ ಸುಜೀತ ಕುಲಕರ್ಣಿ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಮ್ಮ ಸಂಸ್ಥೆ ಆರಂಭವಾಗಿ ನಾಲ್ಕು ವರ್ಷಗಳಾಗಿದೆ. ತಬಲ, ವಾದ್ಯ, ಹಾರ್ಮೋನಿಯಂ ಕಲಿಸುತ್ತಿದ್ದೇವೆ. ನಾಟಕದಲ್ಲಿ ಸ್ತೀ ಪಾತ್ರವನ್ನು ಪುರುಷರು ಅಭಿನಯಿಸುತ್ತಿರುವುದು ವಿಶೇಷ. ಮೊದಲ ದಿನ ಹೇಮರಡ್ಡಿ ಮಲ್ಲಮ್ಮ, ಎರಡನೇ ದಿನ ಅಕ್ಕ ಅಂಗಾರ, ತಂಗಿ ಬಂಗಾರ ನಾಟಕಗಳು ಸಂಜೆ ವೇಳೆ ಪ್ರದರ್ಶನಗೊಳ್ಳಲಿದೆ ಎಂದು ಹೇಳಿದರು.ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಸಭಾ ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಕೆ.ಸಿ.ವೀರೇಂದ್ರಪಪ್ಪಿ, ರಂಗಕರ್ಮಿ ರಾಜ್ಯ ಪ್ರಶಸ್ತಿ ಪುರಸ್ಕೃತ ಕೆ.ಪಿ.ಭೂತಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್, ಉದ್ಯಮಿ ಸೈಟ್ ಬಾಬಣ್ಣ ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭದ ಸಾನಿಧ್ಯವನ್ನು ಮುರುಘರಾಜೇಂದ್ರ ಬೃಹನ್ಮಠದ ಡಾ.ಬಸವಕುಮಾರ ಮಹಾಸ್ವಾಮೀಜಿ ವಹಿಸಲಿದ್ದಾರೆ ಎಂದರು. ಸರಿಗಮ ಸಂಗೀತ ನಾಟಕೋತ್ಸವ ಸಮಿತಿ ಅಧ್ಯಕ್ಷ ಸತ್ಯನಾರಾಯಣರೆಡ್ಡಿ ಮಾತನಾಡಿ, ಚಿತ್ರದುರ್ಗದಲ್ಲಿ ಅಪರೂಪದ ಕಾರ್ಯಕ್ರಮದ ಸಾದರ ಪಡಿಸಲಾಗುತ್ತಿದೆ. ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಎರಡು ನಾಟಕಗಳು ಪ್ರದರ್ಶನಗೊಳ್ಳಲಿವೆ. ರಂಗಾಸಕ್ತರು ವೀಕ್ಷಿಸಿ ಕಲಾವಿದರನ್ನು ಪ್ರೋತ್ಸಾಹಿಸುವಂತೆ ಮನವಿ ಮಾಡಿದರು.ಸರಿಗಮ ಸಂಗೀತ ನಾಟಕೋತ್ಸವ ಸಮಿತಿ ಉಪಾಧ್ಯಕ್ಷೆ ಡಾ.ಭವ್ಯರಾಣಿ ಟಿ, ಮಂಜುನಾಥ್ ಸಿ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.