ಸಾರಾಂಶ
ಕನ್ನಡಪ್ರಭ ವಾರ್ತೆ ಸಕಲೇಶಪುರ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿರುವ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅವರನ್ನು ಸೇವೆಯಿಂದ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿ ಜೆಡಿಎಸ್ ಯುವ ಘಟಕದ ಕಾರ್ಯಕರ್ತರು ಶುಕ್ರವಾರ ಉಪವಿಬಾಗಾಧಿಕಾರಿ ಡಾ. ಶೃತಿಯವರಿಗೆ ಮನವಿ ಸಲ್ಲಿಸಿದರು.ಕರ್ನಾಟಕಕ್ಕೆ ಎಚ್.ಡಿ ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಿ ಸಾಕಷ್ಟು ಸೇವೆ ಸಲ್ಲಿಸಿದ್ದರೆ ಪ್ರಸಕ್ತ ಕೇಂದ್ರ ಸಚಿವರಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಧ್ಯೇಯದಂತೆ ಕೆಲಸ ಮಾಡುತ್ತಿದ್ದಾರೆ. ಆದರೆ ವಿನಾಕಾರಣ ಐಪಿಎಸ್ ಅಧಿಕಾರಿ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಕೇಂದ್ರ ಸಚಿವರನ್ನು ನಿಂದಿಸಿದ್ದಾರೆ. ಆದ್ದರಿಂದ ಇವರನ್ನು ರಾಜ್ಯದ ಪೊಲೀಸ್ ಸೇವೆಯಿಂದ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದ ಕಾರ್ಯಕರ್ತರು ಉಪವಿಭಾಗಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.ಈ ವೇಳೆ ಪುರಸಭೆ ಸದಸ್ಯರಾದ ಪ್ರಜ್ವಲ್, ಮೋಹನ್, ಮುಖಂಡ ಕವನ್ ಗೌಡ, ಗ್ರಾ.ಪಂ ಸದಸ್ಯ ಅರವೀಂದ್, ವಡೂರು ಗಿರೀಶ್ ಮುಂತಾದವರಿದ್ದರು.