ಸಾರಾಂಶ
ಇಂದಿನಿಂದ ಮಂಡ್ಯದಲ್ಲಿ ಜೆಡಿಎಸ್-ಬಿಜೆಪಿ ಹೊಸ ಯುಗ ಮಂಡ್ಯದಲ್ಲಿ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ನಡೆಯುವ ಎಲ್ಲಾ ಚುನಾವಣೆಗಳಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ.
ಮಂಡ್ಯ ಜಿಲ್ಲೆಯ ಮತದಾರರು ಪ್ರಬುದ್ಧರು. ಯಾರಿಗೆ ಯಾವಾಗ ಬುದ್ಧಿ ಕಲಿಸಬೇಕೆನ್ನುವುದು ಅವರಿಗೆ ಚೆನ್ನಾಗಿ ಗೊತ್ತಿದೆ. ಇದೇ ಕಾರಣಕ್ಕೆ ಮಂಡ್ಯ ಎಂದರೆ ಇಂಡಿಯಾ ಎಂದು ಕರೆಯುವುದು ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದರು.
ಇಂದಿನಿಂದ ಮಂಡ್ಯದಲ್ಲಿ ಜೆಡಿಎಸ್-ಬಿಜೆಪಿ ಹೊಸ ಯುಗ ಮಂಡ್ಯದಲ್ಲಿ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ನಡೆಯುವ ಎಲ್ಲಾ ಚುನಾವಣೆಗಳಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಜಾರಿಗೊಳಿಸಿದ ಹಲವು ಜನಪರ ಯೋಜನೆಗಳು, ಕಾರ್ಯಕ್ರಮಗಳು ಅವರ ಗೆಲುವಿಗೆ ಪ್ರಮುಖ ಕಾರಣವಾಗಿವೆ ಎಂದು ಎಂದು ಫಲಿತಾಂಶದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದರು.
ಸಂಕಷ್ಟದ ಸಂದರ್ಭದಲ್ಲಿದ್ದ ದೇವೇಗೌಡರ ಕುಟುಂಬಕ್ಕೆ ಮಂಡ್ಯ ಜನ ಶಕ್ತಿ ತುಂಬಿದ್ದಾರೆ. ಕಾಂಗ್ರೆಸ್ ಬಂಡವಾಳ ಈ ಚುನಾವಣೆಯಲ್ಲಿ ಗೊತ್ತಾಗಿದೆ. ಮುಂದಿನ ದಿನಗಳಲ್ಲಿ ಈ ಸರ್ಕಾರದ ಮುಂದುವರೆಯುವುದು ಕಷ್ಟವಿದೆ. ಮುಂದೆ ಏನೆಲ್ಲಾ ಬೆಳವಣಿಗೆಗಳು ಆಗಲಿದೆ ನೀವೇ ನೋಡುವಿರಿ ಎಂದರು.
ಸುಳ್ಳು ಭರವಸೆಗಳಿಂದ ಜನರ ಹೊಟ್ಟೆ ತುಂಬಿಸಲು ಆಗುವುದಿಲ್ಲ. ಗ್ಯಾರಂಟಿ ಯೋಜನೆಗಳಿಂದ ಜನರು ಬೇಸತ್ತಿದ್ದಾರೆ. ಉಚಿತ ಬಸ್ ಪ್ರಯಾಣದಿಂದ ಶಾಲಾ-ಕಾಲೇಜು ಮಕ್ಕಳು ಬೀದಿಯಲ್ಲಿ ನಿಲ್ಲುತ್ತಿದ್ದಾರೆ. ಎರಡು ಸಾವಿರ ರು. ಆಸೆ ತೋರಿಸಿ ಗಂಡಂದಿಂರ ಆದಾಯಕ್ಕೆ ಕತ್ತರಿ ಹಾಕಿದ್ದಾರೆ. ಎಂಪಿ ಚುನಾವಣೆ ಬಳಿಕ ಗ್ಯಾರಂಟಿ ನಿಲ್ಲಿಸುವುದು ಸರ್ಕಾರದ ಅಜೆಂಡಾ ಎಂದರು.
ಮೋದಿ ಸಂಪುಟದಲ್ಲಿ ಕುಮಾರಸ್ವಾಮಿ ಸಚಿವರಾಗುವುದು ನೂರಕ್ಕೆ ನೂರರಷ್ಟು ಸತ್ಯ. ಕೃಷಿ ಖಾತೆ ಸಿಕ್ಕಿದರೆ ಜನಪರ ಕೆಲಸ ಮಾಡಲು ಸಹಕಾರಿಯಾಗಲಿದೆ ಎಂದರು.