ಸಾರಾಂಶ
ರಾಜ್ಯ ಸರ್ಕಾರ ಬಸ್ ಪ್ರಯಾಣ ಏರಿಸುವ ಮೂಲಕ ಜನರನ್ನು ಮತ್ತಷ್ಟು ಸಂಕಷ್ಟಕ್ಕೀಡು ಮಾಡುತ್ತಿದೆ. ಈಗಾಗಲೇ ಇನ್ನಿತರ ಬೆಲೆ ಏರಿಕೆ ಆಗಿ ಜನರು ಆರ್ಥಿಕ ತೊಂದರೆ ಅನುಭವಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರವು ಬಸ್ ಪ್ರಯಾಣ ದರ ಹೆಚ್ಚಿಸುವ ಮೂಲಕ ತೊಂದರೆ ಕೊಡುತ್ತಿದೆ.
ಹುಬ್ಬಳ್ಳಿ:
ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಜೆಡಿಎಸ್ ಹು-ಧಾ ಮಹಾನಗರ ಹಾಗೂ ಗ್ರಾಮಾಂತರ ಜಿಲ್ಲೆ ನೇತೃತ್ವದಲ್ಲಿ ನಗರದ ಚೆನ್ನಮ್ಮ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.ರಾಜ್ಯ ಸರ್ಕಾರ ಬಸ್ ಪ್ರಯಾಣ ಏರಿಸುವ ಮೂಲಕ ಜನರನ್ನು ಮತ್ತಷ್ಟು ಸಂಕಷ್ಟಕ್ಕೀಡು ಮಾಡುತ್ತಿದೆ. ಈಗಾಗಲೇ ಇನ್ನಿತರ ಬೆಲೆ ಏರಿಕೆ ಆಗಿ ಜನರು ಆರ್ಥಿಕ ತೊಂದರೆ ಅನುಭವಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರವು ಬಸ್ ಪ್ರಯಾಣ ದರ ಹೆಚ್ಚಿಸುವ ಮೂಲಕ ತೊಂದರೆ ಕೊಡುತ್ತಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡಿ, ನಂತರ ದರ ಹೆಚ್ಚಿಸುವ ಜನರಿಂದ ಹಣ ವಸೂಲಿ ಮಾಡುತ್ತಿದೆ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.
ಈ ಕೂಡಲೇ ಹೆಚ್ಚಿಸಿರುವ ಪ್ರಯಾಣ ದರ ಇಳಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪಕ್ಷದ ನೇತೃತ್ವದಲ್ಲಿ ರಾಜ್ಯಾದ್ಯಂತ ತೀವ್ರ ಹೋರಾಟ ನಡೆಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.ಆನಂತರ ಹು-ಧಾ ಮಹಾನಗರ ಪಾಲಿಕೆ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿರುವ ಪೌರ ಕಾರ್ಮಿಕರ ಬಳಿ ತೆರಳಿ ಬೆಂಬಲ ಸೂಚಿಸಿದರು.
ಈ ವೇಳೆ ಮಹಾನಗರ ಜಿಲ್ಲಾಧ್ಯಕ್ಷ ಗುರುರಾಜ ಹುಣಸಿಮರದ, ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ.ಬಿ. ಗಂಗಾಧರಮಠ, ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಪಾಲಿಕೆ ಸದಸ್ಯೆ ಲಕ್ಷ್ಮಿ ಹಿಂಡಸಗೇರಿ, ಮುಖಂಡರಾದ ಪ್ರಕಾಶ ಅಂಗಡಿ, ಜಾಫರ್ ಕ್ಯಾಲಕೊಂಡ, ವಿನಾಯಕ ಗಾಡಿವಡ್ಡರ, ಗುರು ನಾಯ್ಕರ, ಶಂಕರಗೌಡ ದೊಡ್ಡಮನಿ, ಅಹ್ಮದ್ ಅರಸಿಕೇರಿ, ಶಂಕರ ಪವಾರ, ಶ್ರೀಕಾಂತ ತೆಲಗರ, ದೊಡ್ಡಪ್ಪ ಧರಣಿ, ಸಿದ್ದು ಮಹಾಂತಒಡೆಯರ ಜಿಲ್ಲಾ ನಿಕಟ ಪೂರ್ವ ಕಾರ್ಯದರ್ಶಿ ನವೀನಕುಮಾರ ಸೇರಿದಂತೆ ಹಲವರಿದ್ದರು.