ಸಾರಾಂಶ
ಲೋಕಸಭೆ ಚುನಾವಣೆ ಸಂಬಂಧ ಯಾವುದೇ ಸಭೆ, ಪ್ರಚಾರಕ್ಕೆ ಬರುವಂತೆ ನನ್ನನ್ನು ಜೆಡಿಎಸ್ ನಾಯಕರು ಆಹ್ವಾನಿಸಿರಲಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
ಮಂಡ್ಯ: ಲೋಕಸಭೆ ಚುನಾವಣೆ ಸಂಬಂಧ ಯಾವುದೇ ಸಭೆ, ಪ್ರಚಾರಕ್ಕೆ ಬರುವಂತೆ ನನ್ನನ್ನು ಜೆಡಿಎಸ್ ನಾಯಕರು ಆಹ್ವಾನಿಸಿರಲಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು. ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮೈತ್ರಿ ಅಭ್ಯರ್ಥಿ ಪರವಾಗಿ ನಮ್ಮ ಬೆಂಬಲಿಗರು ನಿಷ್ಠೆಯಿಂದ ಕೆಲಸ ಮಾಡಿದ್ದಾರೆ. ಆದರೆ, ಜೆಡಿಎಸ್ ನಾಯಕರು ಯಾವುದೇ ಸಭೆ, ಪ್ರಚಾರಕ್ಕೆ ಆಹ್ವಾನಿಸಿಲ್ಲ.
ಅವರು ಕರೆದು ನಾನು ಬರದೇ ಇದ್ದರೆ ತಪ್ಪಾಗುತ್ತೆ. ಆದರೆ, ಅವರು ನನ್ನ ಕರೆದೇ ಇಲ್ಲ ಎಂದು ನೇರವಾಗಿ ಹೇಳಿದರು. ಮೋದಿ ಅವರು ಪ್ರಧಾನಿಯಾಗಲೇಬೇಕೆಂಬ ಉದ್ದೇಶದಿಂದ ನಾನು ಗೆದ್ದಂತಹ ಕ್ಷೇತ್ರವನ್ನು ತ್ಯಾಗ ಮಾಡಿರುವೆ ಎಂದರು. ಇನ್ನು ದೇವೇಗೌಡರ ಹೇಳಿಕೆಗೆ ಪತ್ರಿಕ್ರಿಯಿಸಿದ ಅವರು, ಅವರು ದೊಡ್ಡವರು, ಅವರಿಗೆ ಸರಿಯಾದ ಮಾಹಿತಿ ಇಲ್ಲದೆ ಆ ರೀತಿ ಹೇಳಿದ್ದಾರೆ ಎಂದೆನಿಸುತ್ತಿದೆ. ಅವರಿಂದ ಅಂತಹ ಹೇಳಿಕೆಯನ್ನು ನಾನು ನಿರೀಕ್ಷೆ ಮಾಡಿರಲಿಲ್ಲ ಎಂದರು.
;Resize=(128,128))
;Resize=(128,128))
;Resize=(128,128))
;Resize=(128,128))