ಎಚ್‌ಡಿಸಿಸಿ ಬ್ಯಾಂಕ್ ಚುನಾವಣೆಗೆ ಜೆಡಿಎಸ್‌ನಿಂದ ನಾಮಪತ್ರ

| Published : Aug 09 2025, 12:00 AM IST

ಎಚ್‌ಡಿಸಿಸಿ ಬ್ಯಾಂಕ್ ಚುನಾವಣೆಗೆ ಜೆಡಿಎಸ್‌ನಿಂದ ನಾಮಪತ್ರ
Share this Article
  • FB
  • TW
  • Linkdin
  • Email

ಸಾರಾಂಶ

ಎಚ್‌ಡಿಸಿಸಿ ಬ್ಯಾಂಕ್ ಚುನಾವಣೆ ಇದೇ ತಿಂಗಳು ೨೧ರಂದು ನಡೆಯಲಿದ್ದು, ಶುಕ್ರವಾರ ವರಮಹಾಲಕ್ಷ್ಮೀ ಹಬ್ಬದಂದು ಜೆಡಿಎಸ್ ಪಕ್ಷ ಬೆಂಬಲಿತ ೧೩ ಅಭ್ಯರ್ಥಿಗಳು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ, ಶಾಸಕರಾದ ಎಚ್.ಪಿ. ಸ್ವರೂಪ್, ಸಿ.ಎನ್. ಬಾಲಕೃಷ್ಣ ನೇತೃತ್ವದಲ್ಲಿ ನಾಮಪತ್ರ ಸಲ್ಲಿಸಿದರು. ಆಗಸ್ಟ್ ೨೧ರಂದು ನಡೆಯಲಿರುವ ಎಚ್‌ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ೧೩ ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಎಲ್ಲಾ ಸ್ಥಾನಗಳನ್ನು ಜೆಡಿಎಸ್ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಎಚ್‌ಡಿಸಿಸಿ ಬ್ಯಾಂಕ್ ಚುನಾವಣೆ ಇದೇ ತಿಂಗಳು ೨೧ರಂದು ನಡೆಯಲಿದ್ದು, ಶುಕ್ರವಾರ ವರಮಹಾಲಕ್ಷ್ಮೀ ಹಬ್ಬದಂದು ಜೆಡಿಎಸ್ ಪಕ್ಷ ಬೆಂಬಲಿತ ೧೩ ಅಭ್ಯರ್ಥಿಗಳು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ, ಶಾಸಕರಾದ ಎಚ್.ಪಿ. ಸ್ವರೂಪ್, ಸಿ.ಎನ್. ಬಾಲಕೃಷ್ಣ ನೇತೃತ್ವದಲ್ಲಿ ನಾಮಪತ್ರ ಸಲ್ಲಿಸಿದರು. ನಂತರ ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಮಾಧ್ಯಮದೊಂದಿಗೆ ಮಾತನಾಡಿ, ಆಗಸ್ಟ್ ೨೧ರಂದು ನಡೆಯಲಿರುವ ಎಚ್‌ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ೧೩ ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಎಲ್ಲಾ ಸ್ಥಾನಗಳನ್ನು ಜೆಡಿಎಸ್ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಹಾಸನ ಸಹಕಾರಿ ಬ್ಯಾಂಕ್‌ನಲ್ಲಿ ಜೆಡಿಎಸ್ ತೆಕ್ಕೆಗೆ ಬಂದ ಆರಂಭಂದಿಂದ ಈವರೆಗೆ ಲಾಭದಾಯಕವಾಗಿ ನಡೆಯುತ್ತಿದೆ. ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಮಾರ್ಗದರ್ಶನದಲ್ಲಿ ಬ್ಯಾಂಕ್ ಸುಲಲಿತವಾಗಿ ನಡೆಯುತ್ತಿದೆ. ಮುಂದೆಯೂ ನಡೆಯಲಿದೆ ಎಂದರು.

ಮುಂದಿನ ದಿನಗಳಲ್ಲಿ ಜೆಡಿಎಸ್ ಬೆಂಬಲಿತರು ಗೆಲುವು ಸಾಧಿಸಿದ ಬಳಿಕ ಅಧ್ಯಕ್ಷರನ್ನಾಗಿ ಯಾರನ್ನು ಆಯ್ಕೆ ಮಾಡಬೇಕು ಎಂಬುದರ ಬಗ್ಗೆ ರೇವಣ್ಣ ಅವರ ನೇತೃತ್ವದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ಜೆಡಿಎಸ್ ಕಾರ್ಯಕರ್ತರಲ್ಲಿ ಯಾವುದೇ ಗೊಂದಲ ಇಲ್ಲ. ಯಾರನ್ನೇ ಅಧ್ಯಕ್ಷರನ್ನಾಗಿ ನೇಮಕ ಮಾಡಿದರು ಎಲ್ಲರೂ ಪ್ರೀತಿಯಿಂದ ಒಪ್ಪಿಗೆ ಸೂಚಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.