ಸಾರಾಂಶ
- ಜೆಡಿಎಸ್ ಬೆಳ್ಳಿಹಬ್ಬ ನಿಮಿತ್ತ ನಡೆದ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಸೂರ್ಯಕಾಂತ ನಾಗಮಾರಪಳ್ಳಿ ಪ್ರತಿಪಾದನೆಕನ್ನಡಪ್ರಭ ವಾರ್ತೆ ಬೀದರ್
2028ರ ವಿಧಾನಸಭಾ ಚುನಾವಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ರಾಜ್ಯದಲ್ಲಿ ಪುನ: ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದು ಪಕ್ಷದ ಯುವ ನಾಯಕ ಸೂರ್ಯಕಾಂತ ನಾಗಮಾರಪಳ್ಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಬೆಂಗಳೂರಿನಲ್ಲಿ ಪಕ್ಷದ ಬೆಳ್ಳಿಹಬ್ಬ ನಿಮಿತ್ತ ನಡೆದ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರನ್ನು ಅವಿರೋಧವಾಗಿ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮರು ಆಯ್ಕೆ ಮಾಡಲಾಗಿದೆ. 2028ರ ವಿಧಾನಸಭಾ ಚುನಾವಣೆಯನ್ನು ಕುಮಾರಸ್ವಾಮಿ ನೇತೃತ್ವದಲ್ಲಿಯೇ ಎದುರಿಸಲಾಗುತ್ತದೆ ಎಂದು ಸೂರ್ಯಕಾಂತ ನಾಗಮಾರಪಳ್ಳಿ ಮಾಹಿತಿ ನೀಡಿದ್ದಾರೆ.
ಪಕ್ಷದ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಪಕ್ಷವನ್ನು ಬಲಪಡಿಸುವ ಬಗ್ಗೆ ಚರ್ಚಿಸಲಾಗಿದೆ. ಪಕ್ಷವನ್ನು ತಳಮಟ್ಟದಲ್ಲಿ ಬಲಪಡಿಸುವ ಹೊಣೆಯನ್ನು ನಿಖಿಲ ಕುಮಾರಸ್ವಾಮಿ ಅವರಿಗೆ ವಹಿಸಿಕೊಡಲು ತೀರ್ಮಾನಿಸಲಾಗಿದೆ. ರಾಜ್ಯದಲ್ಲಿ ರೈತರ ಪರವಾಗಿ ಹೋರಾಟ ನಡೆಸುವ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.ಸದ್ಯದ ಸ್ಥಿತಿಯಲ್ಲಿ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸಲು ಎಚ್.ಡಿ. ಕುಮಾರಸ್ವಾಮಿ ಅವರೇ ಸೂಕ್ತ ಎಂಬ ಅಭಿಪ್ರಾಯ ಎಲ್ಲ ನಾಯಕರಿಂದ ವ್ಯಕ್ತವಾಗಿದೆ. ಅವರ ಸಮರ್ಥ ನಾಯಕತ್ವದಲ್ಲಿ ಜೆಡಿಎಸ್ ಬಲಾಢ್ಯವಾಗಿ ಬೆಳೆಯುವ ವಿಶ್ವಾಸ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ವ್ಯಕ್ತವಾಗಿದೆ ಎಂದರಲ್ಲದೆ, ಮುಂದಿನ ದಿನಗಳಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಪಕ್ಷ ಬಲಾಢ್ಯವಾಗಿ ಬೆಳೆಯಲಿದೆ ಎಂದು ಸೂರ್ಯಕಾಂತ ನಾಗಮಾರಪಳ್ಳಿ ತಿಳಿಸಿದ್ದಾರೆ.
--ಚಿತ್ರ 22ಬಿಡಿಆರ್57:
ಬೆಂಗಳೂರಿನಲ್ಲಿ ಪಕ್ಷದ ಬೆಳ್ಳಿಹಬ್ಬ ನಿಮಿತ್ತ ನಡೆದ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಯುವ ನಾಯಕ ಸೂರ್ಯಕಾಂತ ನಾಗಮಾರಪಳ್ಳಿ.---
;Resize=(128,128))
;Resize=(128,128))
;Resize=(128,128))
;Resize=(128,128))