ಬೆಲೆ ಏರಿಕೆಯ ಖಂಡಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

| Published : Apr 10 2025, 01:02 AM IST

ಸಾರಾಂಶ

ಬೆಲೆ ಏರಿಕೆಯ ಖಂಡಿಸಿ ಬೆಂಗಳೂರು ನಗರದಲ್ಲಿ ಜೆಡಿಎಸ್ ಬೃಹತ್ ಪ್ರತಿಭಟನೆಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕರೆ ನೀಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದು ಎರಡು ವರ್ಷದಲ್ಲಿ ನಿರಂತರವಾಗಿ ಬೆಲೆ ಏರಿಕೆ ಬರೆಯ ಶಾಕ್ ನೀಡುತ್ತಿದೆ. ಇತ್ತೀಚಿನ ದಿನಗಳಲ್ಲಿ ಬೆಲೆ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಚರ್ಚೆಗಳು ರಾಜ್ಯದಲ್ಲಿ ಪ್ರಾರಂಭವಾಗಿದೆ. ಬೆಂಗಳೂರು ನಗರದಲ್ಲಿ ಬೃಹತ್ ರ‍್ಯಾಲಿ ಮೂಲಕ ಬೆಲೆ ಏರಿಕೆ ಖಂಡಿಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಲಿದ್ದೇವೆ ಎಂದು ಅವರು ತಿಳಿಸಿದರು. ನಮ್ಮ ಮಿತ್ರ ಪಕ್ಷವಾದ ಬಿಜೆಪಿಯು ಅವರದ್ದೇ ಅದ ಬೆಲೆ ಪ್ರತಿಭಟನೆ ಮಾಡಿ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿದ್ದಾರೆ ಎಂದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಬೆಲೆ ಏರಿಕೆಯ ಖಂಡಿಸಿ ಬೆಂಗಳೂರು ನಗರದಲ್ಲಿ ಜೆಡಿಎಸ್ ಬೃಹತ್ ಪ್ರತಿಭಟನೆಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕರೆ ನೀಡಿದರು.

ಬೆಲೆ ಏರಿಕೆ ವಿರುದ್ಧ ಜನರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ. ಏ. 12ರಂದು ಬೆಂಗಳೂರು ನಗರದಲ್ಲಿ ಕುಮಾರಣ್ಣನ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದು ಎರಡು ವರ್ಷದಲ್ಲಿ ನಿರಂತರವಾಗಿ ಬೆಲೆ ಏರಿಕೆ ಬರೆಯ ಶಾಕ್ ನೀಡುತ್ತಿದೆ. ಇತ್ತೀಚಿನ ದಿನಗಳಲ್ಲಿ ಬೆಲೆ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಚರ್ಚೆಗಳು ರಾಜ್ಯದಲ್ಲಿ ಪ್ರಾರಂಭವಾಗಿದೆ. ಬೆಂಗಳೂರು ನಗರದಲ್ಲಿ ಬೃಹತ್ ರ‍್ಯಾಲಿ ಮೂಲಕ ಬೆಲೆ ಏರಿಕೆ ಖಂಡಿಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಲಿದ್ದೇವೆ ಎಂದು ಅವರು ತಿಳಿಸಿದರು. ನಮ್ಮ ಮಿತ್ರ ಪಕ್ಷವಾದ ಬಿಜೆಪಿಯು ಅವರದ್ದೇ ಅದ ಬೆಲೆ ಪ್ರತಿಭಟನೆ ಮಾಡಿ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿದ್ದಾರೆ ಎಂದರು.

ವೈಯಕ್ತಿಕವಾಗಿ ದೇವೇಗೌಡರ ಕುಟುಂಬವನ್ನ ಟಾರ್ಗೆಟ್ ಮಾಡ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕೇತಗಾನಹಳ್ಳಿ ಜಮೀನನ್ನ ಕುಮಾರಣ್ಣ ಅವರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ತನಿಖೆಗೆ ವಿಶೇಷ ತಂಡವನ್ನ ರಚನೆ ಮಾಡಿದ್ದಾರೆ. ಇದು ನ್ಯಾಯಾಲದ ಅಂಗಳದಲ್ಲಿದೆ ಅಲ್ಲದೆ, ನಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಕುಮಾರಣ್ಣ ಅವರು ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಲ್ಲ, ಅವರ ಹೆಸರಿಗೆ ಕಳಂಕ ತರಬೇಕು ಅನ್ನುವ ಕಾಂಗ್ರೆಸ್ ಉದ್ದೇಶ ಸಂಪೂರ್ಣ ವಿಫಲವಾಗುತ್ತೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದರು.