ಶಾಸಕರ ನೇತೃತ್ವದಲ್ಲಿ ಜೆಡಿಎಸ್‌ ಮುಖಂಡರು ಕಾಂಗ್ರೆಸ್‌ ಸೇರ್ಪಡೆ

| Published : Mar 27 2024, 01:07 AM IST

ಸಾರಾಂಶ

ದಾಬಸ್‌ಪೇಟೆ: ತಾಲೂಕಿನ ಜೆಡಿಎಸ್ ಪ್ರಭಾವಿ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾಗಿರುವುದಕ್ಕೆ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದಲ್ಲಿ ತಳಮಳ ಆರಂಭವಾಗಿದೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.

ದಾಬಸ್‌ಪೇಟೆ: ತಾಲೂಕಿನ ಜೆಡಿಎಸ್ ಪ್ರಭಾವಿ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾಗಿರುವುದಕ್ಕೆ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದಲ್ಲಿ ತಳಮಳ ಆರಂಭವಾಗಿದೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.

ನೆಲಮಂಗಲ ತಾಲ್ಲೂಕಿನ ಜೆಡಿಎಸ್ ಪಕ್ಷದ ಕಸಬಾ ಅಧ್ಯಕ್ಷರಾಗಿದ್ದ ಕೆಂಪರಾಜು ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಗಣೇಶ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದ ಶಾಸಕರು, ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ ಹಾಗೂ ಕ್ಷೇತ್ರದ ಅಭಿವೃದ್ಧಿಯನ್ನು ಮನಗಂಡು ಹೋಬಳಿ ಅಧ್ಯಕ್ಷರು ಹಾಗೂ ಗ್ರಾಪಂ ಮಾಜಿ ಸದಸ್ಯರು ಪಕ್ಷಕ್ಕೆ ಸೇರಿರುವುದು ಉತ್ತಮ ಬೆಳವಣಿಗೆ. ಇವರಿಗೆ ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಉನ್ನತ ಸ್ಥಾನಮಾನ ನೀಡಲಾಗುತ್ತದೆ. ಮುಂದಿನ ಲೋಕಸಭಾ ಚುನಾವಣೆ ಹಾಗೂ ಸ್ಥಳೀಯ ಚುನಾವಣೆಗಳಿಗೆ ಬಲ ನೀಡಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಎನ್‌ಪಿಎ ಅಧ್ಯಕ್ಷ ನಾರಾಯಣಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ನಾಗರಾಜು, ಗ್ರಾಪಂ ಮಾಜಿ ಅಧ್ಯಕ್ಷರಾದ ಎಂ.ಕೆ ನಾಗರಾಜು, ಲಕ್ಷ್ಮೀನಾರಾಯಣ್, ಮುಖಂಡರಾದ ಮಂಜುನಾಥ್, ನಾರಾಯಣಗೌಡ, ಕಾಚನಹಳ್ಳಿ ಮನು, ಹ್ಯಾಡಾಳ್ ಕಿರಣ್ ಮತ್ತಿತರರಿದ್ದರು.ಪೋಟೋ 6 :

ನೆಲಮಂಗಲ ಶಾಸಕ ಎನ್.ಶ್ರೀನಿವಾಸ್ ನೇತೃತ್ವದಲ್ಲಿ ಕಸಬಾ ಹೋಬಳಿ ಅಧ್ಯಕ್ಷ ಕೆಂಪರಾಜು, ಗ್ರಾಪಂ ಮಾಜಿ ಸದಸ್ಯ ಗಣೇಶ್ ಜೆಡಿಎಸ್ ತೊರೆದು ಕಾಂಗ್ರೆಸ್‌ ಸೇರಿದರು. ಎನ್‌ಪಿಎ ಅಧ್ಯಕ್ಷ ನಾರಾಯಣಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ನಾಗರಾಜು, ಗ್ರಾಪಂ ಮಾಜಿ ಅಧ್ಯಕ್ಷರಾದ ಎಂ.ಕೆ.ನಾಗರಾಜು, ಲಕ್ಷ್ಮೀನಾರಾಯಣ್ ಇತರರಿದ್ದರು.