ಜೆಡಿಎಸ್‌ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಘಟಕ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಮಹಾಸಭೆ ಶನಿವಾರ ನಗರದ ವುಡ್‌ಲ್ಯಾಂಡ್‌ ಹೋಟೆಲ್‌ನಲ್ಲಿ ಜಿಲ್ಲಾ ಅಧ್ಯಕ್ಷ ಜಾಕೆ ಮಾಧವ ಗೌಡ ಅಧ್ಯಕ್ಷತೆಯಲ್ಲಿ ನಡೆಯಿತು.

ಮಂಗಳೂರು: ಜೆಡಿಎಸ್‌ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಘಟಕ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಮಹಾಸಭೆ ಶನಿವಾರ ನಗರದ ವುಡ್‌ಲ್ಯಾಂಡ್‌ ಹೋಟೆಲ್‌ನಲ್ಲಿ ಜಿಲ್ಲಾ ಅಧ್ಯಕ್ಷ ಜಾಕೆ ಮಾಧವ ಗೌಡ ಅಧ್ಯಕ್ಷತೆಯಲ್ಲಿ ನಡೆಯಿತು.ಮಾಜಿ ಜಿಲ್ಲಾಧ್ಯಕ್ಷ ಎಂ.ಬಿ. ಸದಾಶಿವ ಅವರು ನೂತನ ಪದಾಧಿಕಾರಿಗಳಿಗೆ ಹಾಗೂ ಸದಸ್ಯರಿಗೆ ಪ್ರಮಾಣವಚನ ಭೋಧಿಸಿದರು.

ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಮಾತನಾಡಿ, ಪಕ್ಷ ಸಂಘಟನೆಗೆ ಕಾರ್ಯಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಮುಂಬರುವ ದಿನಗಳಲ್ಲಿ ಗ್ರಾಮ ಮಟ್ಟದಿಂದ ಜಿಲ್ಲಾಮಟ್ಟದವರೆಗೆ ಪಕ್ಷವನ್ನು ಬಲಿಷ್ಠಗೊಳಿಸುವ ಸಂಕಲ್ಪದೊಂದಿಗೆ ಕಾರ್ಯನಿರ್ವಹಿಸಬೇಕೆಂದು ಕರೆ ನೀಡಿದರು.ಮಹಮ್ಮದ್‌ ಕುಂಞ, ಹಿರಿಯ ಮುಖಂಡ ಹೈದರ್‌ ಪರ್ತಿಪಾಡಿ, ಕಾರ್ಯಾಧ್ಯಕ್ಷರಾದ ಇಕ್ಬಾಲ್‌ ಮುಲ್ಕಿ, ಶಶಿರಾಜ್‌ ಶೆಟ್ಟಿ ಕೊಳಂಬೆ, ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯ ಅಜೀಜ್‌ ಮಾಲರ್‌, ವೀನುಗಾರ ಘಟಕ ರಾಜ್ಯಾಧ್ಯಕ್ಷ ರತ್ನಾಕರ್‌ ಸುವರ್ಣ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಅಕ್ಷಿತ್‌ ಸುವರ್ಣ, ಜಿಲ್ಲಾ ವಿದ್ಯಾರ್ಥಿ ಜನತಾದಳ ಅಧ್ಯಕ್ಷ ನಿಹಾಲ್‌ ಕೋಡ್ತುಗೋಳಿ, ಮಾಜಿ ನಗರ ಪಾಲಿಕಾ ಸದಸ್ಯೆ ರಮೀಜಾ ನಾಸೀರ್‌ ಇದ್ದರು.ಜಿಲ್ಲಾ ಕಾರ್ಯಧ್ಯಕ್ಷ ವಸಂತ್‌ ಪೂಜಾರಿ ಸ್ವಾಗತಿಸಿದರು. ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಯೋಗಿಶ್‌ ಶೆಟ್ಟಿಜಪ್ಪು ವಂದಿಸಿದರು.ಸಭೆಯಲ್ಲಿ ಜಿಲ್ಲೆಯ ಪ್ರಸ್ತುತ ರಾಜಕೀಯ ಪರಿಸ್ಥಿತಿ, ಪಕ್ಷದ ಬೆಳವಣಿಗೆ, ಸದಸ್ಯತ್ವ ಅಭಿಯಾನದ ಪ್ರಗತಿ ಹಾಗೂ ಸಂಘಟನೆಯ ವಿಸ್ತರಣೆಯ ಕುರಿತು ಸುದೀರ್ಘ ಚರ್ಚೆ ನಡೆಯಿತು. ಬೂತ್‌ ಮಟ್ಟದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಪ್ರತಿ ಗ್ರಾಮ ಪಂಚಾಯತ್‌ ಹಾಗೂ ವಾರ್ಡ್‌ ಮಟ್ಟದಲ್ಲಿ ಪಕ್ಷದ ಸಮಿತಿಗಳನ್ನು ರಚಿಸುವ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳಲಾಯಿತು. ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣæಗಳನ್ನು ಗಮನದಲ್ಲಿಟ್ಟುಕೊಂಡು ಕ್ಷೇತ್ರವಾರು ಕಾರ್ಯತಂತ್ರ ರೂಪಿಸುವುದು, ಜಿಲ್ಲಾ ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿಗಳನ್ನು ಹಂಚಿಕೆ ಮಾಡುವುದು ಹಾಗೂ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಜನಪರ ಹೋರಾಟ ಸಂಘಟಿಸುವ ಕುರಿತು ಚರ್ಚಿಸಿ ರೂಪುರೇಷೆಗಳನ್ನು ಸಿದ್ಧಪಡಿಸಲಾಯಿತು. ಮುಂದಿನ ಸಭೆಗೆ ಎಸ್‌.ಎಲ್‌.ಭೋಜೇಗೌಡ ಅವರನ್ನು ಆಹ್ವಾನಿಸಿ ಪಕ್ಷದ ಬೆಳವಣಿಗೆಗೆ ಮಾರ್ಗದರ್ಶನ ಪಡೆಯುವ ಬಗ್ಗೆ ತೀರ್ಮಾನಿಸಲಾಯಿತು.