ಸಾರಾಂಶ
ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ಪ್ರಾದೇಶಿಕ ಪಕ್ಷ ಜಾತ್ಯತೀತ ಜನತಾದಳ ಪಕ್ಷ ಸ್ಥಾಪನೆಗೊಂಡು 25 ತುಂಬಿದ ಹಿನ್ನೆಲೆಯಲ್ಲಿ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.ಇಲ್ಲಿನ ಕೆಂಚೆಗೌಡ ಕಾಂಪ್ಲೆಕ್ಸ್ ಅವರಣದಲ್ಲಿ ಯುವ ಮುಖಂಡ ರಘುವೆಂಕಟೇಗೌಡರ ನೇತೃತ್ವದಲ್ಲಿ ಸೇರಿದ ಕಾರ್ಯಕರ್ತರು, ಅಭಿಮಾನಿಗಳು ಜೆಡಿಎಸ್ ಪಕ್ಷಕ್ಕೆ ಜೈಕಾರ ಕೂಗಿದರು. ನಂತರ ಸಾರ್ವಜನಿಕರಿಗೆ ಸಿಹಿ ವಿತರಿಸಿ ಸಂಭ್ರಮ ವ್ಯಕ್ತಪಡಿಸಿದರು.
ಈ ವೇಳೆ ಜೆಡಿಎಸ್ ಯುವ ಮುಖಂಡ ರಘು ವೆಂಕಟೆಗೌಡ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸ್ಥಾಪಿಸಿದ ಜಾತ್ಯತೀತ ಜನತಾದಳ ಪಕ್ಷವು 25 ವರ್ಷ ತುಂಬಿ ಬೆಳ್ಳಿ ಹಬ್ಬವನ್ನು ಆಚರಿಸಿಕೊಳ್ಳುತ್ತಿದೆ. ದೇವೇಗೌಡರು ಹಲವು ಸವಾಲುಗಳನ್ನು ಮೆಟ್ಟಿ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ ಎಂದರು.ದೇಶದಲ್ಲಿ ಪ್ರಾದೇಶಿಕ ಪಕ್ಷಗಳ ಪಾತ್ರ ಅತ್ಯಾವಶ್ಯಕವಾಗಿರುವ ಹಿನ್ನೆಲೆಯಲ್ಲಿ ಗೌಡರ ಮಾರ್ಗದರ್ಶನದಲ್ಲಿ ನಮ್ಮೆಲ್ಲರ ನೆಚ್ಚಿನ ನಾಯಕ, ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹಾಗೂ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ತರಲು ನಾವೆಲ್ಲರೂ ಶ್ರಮಿಸಬೇಕು ಎಂದರು.
ಮದ್ದೂರು ತಾಲೂಕು ಜೆಡಿಎಸ್ ಎಸ್ಸಿ ಎಸ್ಟಿ ಘಟಕದ ಕಾರ್ಯಾಧ್ಯಕ್ಷ ಕರಡಕೆರೆ ಯೋಗೇಶ್ ಮಾತನಾಡಿ, ಜೆಡಿಎಸ್ ಪಕ್ಷವನ್ನು ತಳಮಟ್ಟದಿಂದ ಕಟ್ಟಲು ದೇವೇಗೌಡರ ಆಶಯದಂತೆ ಎಚ್.ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಡಿ.ಸಿ.ತಮ್ಮಣ್ಣರ ಕೈ ಬಲಪಡಿಸಿ ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಾಮಾಣಿಕವಾಗಿ ಶ್ರಮಿಸುತ್ತೇವೆ ಎಂದರು.ಈ ವೇಳೆ ಪಕ್ಷದ ಯುವ ಮುಖಂಡ ಅಣ್ಣೂರು ವಿನಯ್, ಗುರುದೇವರಹಳ್ಳಿ ನವೀನ್, ಗ್ರಾಪಂ ಸದಸ್ಯರಾದ ರಾಘವೇಂದ್ರ, ಕಾರ್ಕಳ್ಳಿ ಮಹೇಶ್, ಬಸವರಾಜು, ಪಂಚೆಶ್ ಕುಮಾರ್, ಗುರುಸಿದ್ದಯ್ಯ, ಬನ್ನಹಳ್ಳಿ ಶೇಖರ್, ಅಭಿಷೇಕ, ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವೃತ್ತಕ್ಕೆ ಅಂಬಿಗರ ಚೌಡಯ್ಯ ಹೆಸರು ಆಕ್ಷೇಪಣೆಗೆ ಮನವಿಮಳವಳ್ಳಿ: ಪುರಸಭೆ ವ್ಯಾಪ್ತಿಯ ಸ್ಪೋಟ್ಸ್ ಕ್ಲಬ್ ಎದುರಿನ (ಸುಲ್ತಾನ್ ರಸ್ತೆ) ವೃತ್ತಕ್ಕೆ ನಿಜಶರಣ ಅಂಬಿಗರ ಚೌಡಯ್ಯ ವೃತ್ತ ಎಂದು ನಾಮಕರಣ ಮಾಡಲು ಸೂಚಿಸಲಾಗಿದೆ. ಸದರಿ ವೃತ್ತಕ್ಕೆ ಅಂಬಿಗರ ಚೌಡಯ್ಯ ವೃತ್ತ ಎಂದು ನಾಮಕರಣ ಮಾಡಲು ಪುರಸಭೆ ಸಾರ್ವಜನಿಕರು ಹಾಗೂ ಬಾದಿತ ವ್ಯಕ್ತಿಗಳಿಗೆ ಆಕ್ಷೇಪಣೆಗಳಿದ್ದಲ್ಲಿ 30 ದಿನದೊಳಗಾಗಿ ಪುರಸಭೆ ಮುಖ್ಯಾಧಿಕಾರಿ ಲಿಖಿತ ರೂಪದಲ್ಲಿ ಆಕ್ಷೇಪಣೆನ್ನು ಸಲ್ಲಿಸಬಹುದು. ಅವಧಿ ಮುಗಿದ ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಮುಖ್ಯಾಧಿಕಾರಿ ಎಂ.ಸಿ.ನಾಗರತ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
;Resize=(128,128))
;Resize=(128,128))
;Resize=(128,128))
;Resize=(128,128))